ಮ್ಯಾಡ್ ಸಂಧು ಹತ್ಯೆ ಪ್ರಕರಣದ ಶೂಟರ್ ಬಂಧನ: ಅಮಿತಾಭ್ ಬಚ್ಚನ್ ಹತ್ಯೆ ಸಂಚು ಬಯಲು

Date:

ಪಂಜಾಬ್‌ನ ಜನಪ್ರಿಯ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ‘ಮ್ಯಾಡ್ ಸಂಧು’ (ಮಧುಸೂದನ್) ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಪ್ರಮುಖ ಶೂಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ. ಬಂಧಿತರ ವಿಚಾರಣೆಯ ವೇಳೆ, ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಲು ಮತ್ತು ದೆಹಲಿಯ ಉದ್ಯಮಿಯೊಬ್ಬರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

- Advertisement -

ಬಂಧಿತ ಆರೋಪಿಗಳನ್ನು ಜಲಂಧರ್ ನಿವಾಸಿ ವಿಕಾಸ್ ಠಾಕೂರ್ ಅಲಿಯಾಸ್ ವಿಕ್ಕಿ (25) ಮತ್ತು ಪಂಜಾಬ್‌ನ ತರಣ್ ತರಣ್ ಜಿಲ್ಲೆಯ ದೀಪಕ್ ಸಿಂಗ್ ಅಲಿಯಾಸ್ ದೀಪ್ ಎಂದು ಗುರುತಿಸಲಾಗಿದೆ. ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ದೆಹಲಿ ಮತ್ತು ಮುಂಬೈನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಇಬ್ಬರನ್ನೂ ಸೆರೆಹಿಡಿಯಲಾಗಿದೆ ಎಂದು ವಿಶೇಷ ಘಟಕದ ಉಪ ಪೊಲೀಸ್ ಆಯುಕ್ತ (DCP) ನರ್ರಾ ಚೈತನ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಶ್ರೀನಿವಾಸರಾಜು ದೊಡ್ಡೇರಿ ಅವರ ‘ಬಾಬಾ...

ಕನ್ನಡದ ಅಪರೂಪದ ಬರಹಗಾರ, ಅನುವಾದಕರಾದ ಶ್ರೀನಿವಾಸರಾಜು ದೊಡ್ಡೇರಿ ಅವರು ಅನುವಾದಿಸಿರುವ 'ಬಾಬಾ ಸಾಹೇಬ್' ಕೃತಿಯು ಇಂದು ಭಾನುವಾರ ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯ ಒಂದು ಆಯ್ದ ಭಾಗ... ಈದಿನ ಓದುಗರಿಗಾಗಿ... 'ಭಾರತದಲ್ಲಿ...

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಇದನ್ನೂ ಓದಿ: ಮೋದಿ ಭಕ್ತ ಬಚ್ಚನ್‌ಗೆ ಇದೆಂತಾ ಸ್ಥಿತಿ; ಬುಲೆಟ್ ಪ್ರೂಫ್ ಕವಚದ ಹಿಂದೆ ‘ಅಮೃತಕಾಲ’!

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್‌ಗಳ ಸೂಚನೆಯ ಮೇರೆಗೆ ಈ ಆರೋಪಿಗಳು ಕಾರ್ಯಾಚರಣೆ ನಡೆಸುತ್ತಿದ್ದರು ಎಂದು ವರದಿಯಾಗಿದೆ. 1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಅಮಿತಾಭ್ ಬಚ್ಚನ್ ಅವರು ನೀಡಿದ್ದಾರೆ ಎನ್ನಲಾದ ಕೆಲವು ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಅವರ ಮೇಲೆ ದಾಳಿ ನಡೆಸಲು ಗ್ಯಾಂಗ್‌ಸ್ಟರ್‌ಗಳು ಸಂಚು ರೂಪಿಸಿದ್ದರು. ಆದರೆ ತಾವು ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಬಚ್ಚನ್ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಮುಂಬೈನಲ್ಲಿಯೇ ಹೆಚ್ಚಿನ ದಿನಗಳ ಕಾಲ ಉಳಿದುಕೊಂಡು ಬಚ್ಚನ್ ನಿವಾಸದ ಹೊರಗೆ ಗುಂಡು ಹಾರಿಸುವಂತೆ ದೀಪಕ್ ಸಿಂಗ್‌ಗೆ ವಿದೇಶಿ ಹ್ಯಾಂಡ್ಲರ್‌ಗಳು ನಿರ್ದೇಶನ ನೀಡಿದ್ದರು.

ದೆಹಲಿಯ ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡುವ ಉದ್ದೇಶದಿಂದ ಗುಂಡಿನ ದಾಳಿ ನಡೆಸಲು ವಿಕಾಸ್ ಠಾಕೂರ್ ಮುಂಬೈನಿಂದ ದೆಹಲಿಗೆ ಬಂದಿದ್ದನು. ದೀಪಕ್ ಸಿಂಗ್ ಕೂಡ ಆತನನ್ನು ಸೇರಿಕೊಳ್ಳಲು ಯೋಜನೆ ರೂಪಿಸಲಾಗಿತ್ತು. ಆದರೆ, ದಾಳಿ ನಡೆಯುವ ಮೊದಲೇ ದೆಹಲಿ ಪೊಲೀಸರು ವಿಕಾಸ್‌ನನ್ನು ಬಂಧಿಸಿ, ಆತನ ನೀಡಿದ ಮಾಹಿತಿಯ ಮೇರೆಗೆ ಮುಂಬೈನಲ್ಲಿ ಅಡಗಿದ್ದ ದೀಪಕ್‌ನನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ: ‘ಭಾರತ್‌ ಮಾತಾ ಕೀ ಜೈ’ ಎಂದ ಅಮಿತಾಭ್ ಬಚ್ಚನ್; ನೆಟ್ಟಿಗರಿಂದ ತರಾಟೆ

ಕಳೆದ ಅಕ್ಟೋಬರ್ 3ರಂದು ಅಮೃತಸರದ ಲೊಹಾರ್ಕಾ ರಸ್ತೆಯಲ್ಲಿ ಮೇಕಪ್ ಆರ್ಟಿಸ್ಟ್ ಮತ್ತು ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮ್ಯಾಡ್ ಸಂಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ದೀಪಕ್ ಸಿಂಗ್ ಮತ್ತು ಆತನ ಸಹಚರ ಪಲ್ವಿಂದರ್ ಅಲಿಯಾಸ್ ಕಾಕಾ (ಈತನನ್ನು ಈಗಾಗಲೇ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ) ಸೇರಿ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಹತ್ಯೆಯ ನಂತರ ದೀಪಕ್ ಮುಂಬೈಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದನು.

ಬಂಧಿತ ವಿಕಾಸ್ ಠಾಕೂರ್ ಈ ಹಿಂದೆ ಸರಗಳ್ಳತನ ಮತ್ತು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದನು. 2023ರಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್‌ಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುವ ಮೂಲಕ ಸಂಘಟಿತ ಅಪರಾಧ ಜಾಲಕ್ಕೆ ಸೇರಿದ್ದನು.

ನಂತರ ಅನಿಲ್ ಪಂಡಿತ್ ಮತ್ತು ರಣದೀಪ್ ಮಲಿಕ್‌ನಂತಹ ಗ್ಯಾಂಗ್‌ಸ್ಟರ್‌ಗಳೊಂದಿಗೆ ಸೇರಿ ಸುಲಿಗೆ ದಂಧೆಗೆ ಯುವಕರನ್ನು ನೇಮಿಸಿಕೊಳ್ಳುವುದು ಹಾಗೂ ಶಸ್ತ್ರಾಸ್ತ್ರ ಒದಗಿಸುವ ಕೆಲಸ ಮಾಡುತ್ತಿದ್ದನು. ಮತ್ತೋರ್ವ ಆರೋಪಿ ದೀಪಕ್ ಸಿಂಗ್ ಈ ಹಿಂದೆ ಟ್ರಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಸ್ಥಳೀಯ ಗ್ಯಾಂಗ್‌ಗಳ ಸಂಪರ್ಕಕ್ಕೆ ಬಂದು ಅಪರಾಧ ಲೋಕಕ್ಕೆ ಕಾಲಿಟ್ಟಿದ್ದನು. ಸದ್ಯ ದೆಹಲಿ ಪೊಲೀಸರ ವಿಶೇಷ ಘಟಕದ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಲ್ವರು ನಾಗರಿಕರ ಹತ್ಯೆ: ಕೇಂದ್ರ, ಮಣಿಪುರ ಸರ್ಕಾರಕ್ಕೆ 3 ದಿನಗಳ ಗಡುವು ನೀಡಿದ ನಾಗಾ ಸಂಘಟನೆ

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ (ನವೆಂಬರ್ 13) ಶಂಕಿತ ಉಗ್ರರ ಗುಂಡಿನ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ...

ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿದ ಮೋಹಿತ್ ಉಲ್ವಾ; ಪಾಕ್ ಮಣಿಸಿ 9ನೇ ಬಾರಿ ಅಂಡರ್-19 ಏಷ್ಯಾ ಕಪ್ ಗೆದ್ದ ಭಾರತ

ಕೊನೆಯ ಎಸೆತದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ 'ಎಸಿಸಿ ಪುರುಷರ ಅಂಡರ್-19 ಏಷ್ಯಾ...

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...