ಉತ್ತರ ಪ್ರದೇಶ: ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಧರ್ಮ ದಾಖಲಿಸಲು ಸರ್ಕಾರದ ಹೈಟೆಕ್ ತಂತ್ರ

Date:

ಕನ್ವರ್ ಯಾತ್ರೆ ನಡೆಯುವ ಮಾರ್ಗದ ಬದಿಯ ಎಲ್ಲ ಅಂಗಡಿ ಮತ್ತು ಡಾಬಾ ಮಾಲೀಕರು ತಮ್ಮ ಹೆಸರು ಹಾಗೂ ಆ ಮೂಲಕ ಧರ್ಮವನ್ನು ವಿವರಿಸುವ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಯೋಗಿ ಆದಿತ್ಯನಾಥ್ ಸರ್ಕಾರದ ಸೂಚನೆಗೆ ಕಳೆದ ವರ್ಷ ಸುಪ್ರೀಂಕೋರ್ಟ್ ತಡೆಯಾಜ್ಞೆ ವಿಧಿಸಿತ್ತು. ಆದ್ದರಿಂದ ಈ ಬಾರಿ ರಾಜ್ಯ ಸರ್ಕಾರ ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಪಕ್ಕಕ್ಕಿಟ್ಟು ತಮ್ಮ ಗುರಿ ಸಾಧನೆಗೆ ತಂತ್ರಜ್ಞಾನದ ಮೊರೆ ಹೋಗಿದೆ.

- Advertisement -

ಉತ್ತರ ಪ್ರದೇಶ ಸರ್ಕಾರದ ಆಹಾರ ಸುರಕ್ಷೆ ಮತ್ತು ಔಷಧ ನಿರ್ವಹಣಾ ಇಲಾಖೆ, ಕನ್ವರ್ ಯಾತ್ರೆಯ ಮಾರ್ಗದ ಎಲ್ಲ ಡಾಬಾ ಮತ್ತು ಅಂಗಡಿಗಳ ಮಾಲೀಕರು ಮಂಡಳಿಯಲ್ಲಿ ನೋಂದಾಯಿಸಿರುವ ತಮ್ಮ ಹೆಸರುಗಳನ್ನು ಮತ್ತು ಅವರಿಗೆ ಹಂಚಿಕೆ ಮಾಡಿರುವ ಕ್ಯೂಆರ್ ಕೋಡ್ ಪ್ರದರ್ಶಿಸಬೇಕು ಎಂದು ಕಡ್ಡಾಯಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಮೇಲ್ನೋಟಕ್ಕೆ ಈ ವಿನೂತನ ಕ್ಯೂಆರ್ ಕೋಡ್ ಗುಣಮಟ್ಟ ನಿಯಂತ್ರಣದ ಉದ್ದೇಶ ಹೊಂದಿದೆ. ಗ್ರಾಹಕರು ಈ ಕ್ಯೂಆರ್ ಕೋಡ್ ಬಳಸಿ ಅಲ್ಲಿನ ಆಹಾರ ಅಥವಾ ಸೇವೆಗಳ ಬಗ್ಗೆ ಪುರಾವೆಗಳ ಚಿತ್ರಗಳನ್ನು ಅಪ್ಲೋಡ್ ಮಾಡಿ ಅಭಿಪ್ರಾಯಗಳನ್ನು ತಿಳಿಸಲು ಅಥವಾ ದೂರುಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಆದರೆ ಈ ಕ್ಯೂಆರ್ ಕೋಡ್, ಮಾಲೀಕರ ಹೆಸರು ಹಾಗೂ ಅವರ ಧರ್ಮವನ್ನು ಬಹಿರಂಗಪಡಿಸುತ್ತದೆ.

“ಅಂಗಡಿ ಮತ್ತು ಡಾಬಾ ಮಾಲೀಕರ ವಿವರಗಳನ್ನು ತಿಳಿಯಬಯಸುವವರು ಇಲಾಖೆಯ ಡಿಜಿಟಲ್ ಅಪ್ಲಿಕೇಶನ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಲೀಕರ ಗುರುತನ್ನು ತಿಳಿದುಕೊಳ್ಳಬಹುದು” ಎಂದು ಇಲಾಖೆಯ ಆದೇಶ ಸ್ಪಷ್ಟಪಡಿಸಿದೆ. “ಅಂಗಡಿ ಮತ್ತು ಹೋಟಲ್ ಮಾಲೀಕರು ನೋಂದಾಯಿತ ಹೆಸರು ಮತ್ತು ಸಂಖ್ಯೆಯನ್ನು ಹೊಂದಿರುತ್ತಾರೆ. ನಾವು ಕ್ಯೂಆರ್ ಕೋಡ್ ನೀಡುವ ಮೂಲಕ ಪ್ರತಿಯೊಬ್ಬರು ತಮ್ಮ ಫಲಕಗಳಲ್ಲಿ ಈ ಕ್ಯೂಆರ್ ಕೋರ್ಡ್ ಮುದ್ರಿಸುವುದನ್ನು ಕಡ್ಡಾಯಪಡಿಸಿದ್ದೇವೆ” ಎಂದು ಇಲಾಖೆ ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...