‘ರಾಷ್ಟ್ರಭಾಷೆ ಹಿಂದಿಯನ್ನು ಕಲಿಯಿರಿ’: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಆಕ್ರೋಶ

Date:

ನವದೆಹಲಿಯಲ್ಲಿ ನಡೆದ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿಂದಿ ಭಾಷೆಯ ಅನುವಾದದ ವಿಚಾರವಾಗಿ ಡಿಎಂಕೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ(ಡಿ.19) ನಡೆದಿದೆ.

ಇಂಡಿಯಾ ಒಕ್ಕೂಟ ಸಭೆಯಲ್ಲಿ ನಿತೀಶ್ ಕುಮಾರ್ ಅವರು ನಾಯಕರನ್ನು ಉದ್ದೇಶಿಸಿ ಮಾತನಾಡುವಾಗ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಮತ್ತು ಟಿ ಆರ್ ಬಾಲು ಸಹ ಉಪಸ್ಥಿತರಿದ್ದರು. ನಿತೀಶ್ ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವಾಗದೆ, ಟಿ ಆರ್ ಬಾಲು ಅವರು ಸಾಧ್ಯವಾದರೆ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸಲು ಇನ್ನೊಂದು ಬದಿಯಲ್ಲಿ ಕುಳಿತಿದ್ದ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರಿಗೆ ಸೂಚಿಸಿದರು.

ಮನೋಜ್ ಝಾ ಅವರು ನಿತೀಶ್ ಕುಮಾರ್ ಅವರ ಅನುಮತಿ ಕೇಳುತ್ತಿದ್ದಂತೆ, “ನಾವು ನಮ್ಮ ದೇಶವನ್ನು ಹಿಂದೂಸ್ತಾನ್ ಎಂದು ಕರೆಯುತ್ತೇವೆ ಮತ್ತು ಹಿಂದಿ ನಮ್ಮ ರಾಷ್ಟ್ರೀಯ ಭಾಷೆ, ನಮಗೆ ಭಾಷೆ ತಿಳಿದಿರಬೇಕು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬ್ರಿಟಿಷರ ವಿರುದ್ಧದ ಭಾರತೀಯ ಸ್ವಾತಂತ್ರ್ಯ ಹೋರಾಟ ಮತ್ತು ಇಂಗ್ಲಿಷ್ ಹೇರಿಕೆಯ ಬಗ್ಗೆ ಇದೇ ಸಂದರ್ಭದಲ್ಲಿ ನಿತೀಶ್ ಕುಮಾರ್ ಮಾತನಾಡಿದಾಗ ಸಭೆಯಲ್ಲಿ ಕೆಲವು ನಿಮಿಷಗಳವರೆಗೆ ಇದೇ ವಿಷಯದ ಬಗ್ಗೆ ಮಾತುಕತೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಯುಗದ ಜನತಂತ್ರ- ಆಡುವುದು ಒಂದು, ಮಾಡುವುದು ಇನ್ನೊಂದು

ನಿತೀಶ್ ಅವರನ್ನು ಸಮಾಧಾನಪಡಿಸಲು ಹಲವು ಮುಖಂಡರು ಮುಂದಾದರು. ಆದಾಗ್ಯೂ, ಯಾವುದೇ ಅನುವಾದವನ್ನು ಮಾಡಲಾಗಿಲ್ಲ. ನಂತರ ಮಾತನಾಡಿದ ಲಾಲು ಪ್ರಸಾದ್ ಯಾದವ್ ಅವರ ಭಾಷಣವನ್ನು ಅನುವಾದಿಸಲಿಲ್ಲ.

ನಿತೀಶ್ ಅವರು ತಮ್ಮ ಭಾಷಣವನ್ನು ಭಾಷಾಂತರಿಸದಂತೆ ಮನೋಜ್ ಝಾ ಅವರಿಗೆ ಹೇಳಿದರು.

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲವರು ತಮ್ಮ ಮಾತನ್ನು ಹಿಂದಿಯಿಂದ ಇಂಗ್ಲಿಷ್‌ಗೆ ಬದಲಾಯಿಸಿದರು.

ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಮತ್ತು ಪ್ರಚಾರ ಕಾರ್ಯತಂತ್ರಗಳಂತಹ ವಿಷಯಗಳ ಕುರಿತು ಚರ್ಚಿಸಲು ಇಂಡಿಯಾ ಒಕ್ಕೂಟ ಪಕ್ಷಗಳು ಮಂಗಳವಾರ ದೆಹಲಿಯಲ್ಲಿ ತಮ್ಮ ನಾಲ್ಕನೇ ಸಭೆಯನ್ನು ಆಯೋಜಿಸಿದ್ದವು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಭಾಷೆಯ ವಿಚಾರದಲ್ಲಿ ಕಚ್ಚಾಡಿ. ಸೀಟಿನ ವಿಚಾರದಲ್ಲಿ ಕಚ್ಚಾಡಿ. ಗೆದ್ದು ಬಂದರೆ ಯಾರು ಪ್ರಧಾನಿ ಎಂಬುದರ ಬಗ್ಗೆಯೂ ಕಚ್ಚಾಡಿ.
    ಬೆಂಬಲಿಗರು ಮತದಾನ ಮಾಡದೆ, ಮನೆಯಲ್ಲೇ ಕುಳಿತುಕೊಳ್ಳುತ್ತಾರೆ.
    NDA ಗೆಲ್ಲುತ್ತದೆ! I N D I A ಸೋಲುತ್ತದೆ? 😔

  2. ಪಕ್ಷ ಯಾವುದಾದರೂ ಇರಲಿ, ಹಿಂದಿ ರಾಜಕಾರಣಿಗಳ ಮನೋಬಾಬ ಬದಲಾಗಿಲ್ಲ. ಈ ಅವಿವೇಕಗಳು ಹಿಂದಿ ಮಾತ್ರ ರಾಷ್ಟ್ರಬಾಶೆ ಎಂದು ತಿಳಿದಿದ್ದಾರೆ. ಹಿಂದಿ ಹೇರಿಕೆಯ ವಿರುದ್ಧ ಹಿಂದಿಯೇತರ ರಾಜಕಾರಣಿಗಳು ಎಲ್ಲಾ ವೇದಿಕೆಗಳಲ್ಲೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎನ್‌ಯು ವಿವಿಯಲ್ಲಿ ಎಡ ಪಂಥೀಯ – ಎಬಿವಿಪಿ ವಿದ್ಯಾರ್ಥಿಗಳ ನಡುವೆ ಗಲಭೆ: ಹಲವರಿಗೆ ಗಾಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ...

ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ದ್ವೇಷ ಮತ್ತು ಕೋಮು ಸೌಹಾರ್ದತೆ ಕದಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಟೈಮ್ಸ್‌...

ಪೆಟ್ರೋಲಿಯಂ ಮೇಲಿನ ವಿಂಡ್‌ಫಾಲ್ ತೆರಿಗೆ ಹೆಚ್ಚಳ

ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ವಿಂಡ್‌ಫಾಲ್...

ಗುಜರಾತ್‌ | 2 ವರ್ಷದಿಂದ 3.8 ಲಕ್ಷ ಅರ್ಹ ಶಿಕ್ಷಕರು ನಿರುದ್ಯೋಗಿಗಳಾಗಿದ್ದಾರೆ

ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ....