ಹದಿಹರೆಯದ ಒಪ್ಪಿತ ಲೈಂಗಿಕತೆಯನ್ನು ಅಪರಾಧ ಎನ್ನಬೇಕೇ? ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Date:

Advertisements

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಒಪ್ಪಿತ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಬೇಕೇ? ಈ ವಿಚಾರದಲ್ಲಿ ಭಾರತಕ್ಕೆ ರೋಮಿಯೋ-ಜೂಲಿಯೆಟ್ ಕಾನೂನಿನ ಅನ್ವಯ ಮಾಡಬಹುದೇ? ಎಂಬುದರ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಹದಿಹರೆಯದ ಲಕ್ಷಾಂತರ ಹುಡುಗಿಯರು ಮತ್ತು ಹುಡುಗರು ಸಮ್ಮತಿಯ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಹೀಗಾಗಿ, ಇಂತಹ ಪ್ರಕರಣವನ್ನು ಅಪರಾಧವೆಂದು ಪರಿಗಣಿಸಬಾರದು. ಅನೇಕ ದೇಶಗಳಲ್ಲಿ ರೋಮಿಯೋ-ಜೂಲಿಯೆಟ್ ಕಾನೂನು ಜಾರಿಯಲ್ಲಿದ್ದು, ಆ ಕಾನೂನನ್ನು ದೇಶಕ್ಕೂ ಅನ್ವಯ ಮಾಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿದೆ.

ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದೆ. ಪೀಠದ ಮುಂದೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಹರ್ಷ ವಿಭೋರ್ ಸಿಂಘಾಲ್, “ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದರೆ, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರೆ, ಅದನ್ನು ಅತ್ಯಾಚಾರವೆಂದು ಪರಿಗಣಿಸಿ ಹುಡುಗನನ್ನು ಬಂಧಿಸಲಾಗುತ್ತದೆ. ಅಲ್ಲದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012ರ ಅಡಿಯಲ್ಲಿ ಲೈಂಗಿಕ ಕ್ರಿಯೆಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಒಪ್ಪಿಗೆ ಅಪ್ರಸ್ತುತವಾಗಿದೆ. ಅಂತಹ ಅಪ್ರಾಪ್ತೆಯೊಂದಿಗೆ ಲೈಂಗಿಕ ಚಟುವಟಿಕೆಗೆ ಪ್ರಯತ್ನಿಸುವ ಯಾವುದೇ ವ್ಯಕ್ತಿ ತಪ್ಪಿತಸ್ಥನಾಗುತ್ತಾನೆ. ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯೊಂದಿಗೆ ಲೈಂಗಿಕತೆ ನಡೆಸುವುದು (ಆಕೆ ಒಪ್ಪಿಗೆ ನೀಡಿದ್ದರೂ ಸಹ) ಅತ್ಯಾಚಾರವೇ ಆಗಿರುತ್ತದೆ” ಎಂದು ವಿವರಿಸಿದ್ದಾರೆ.

Advertisements

“ಅನೇಕ ವಿದೇಶಗಳಲ್ಲಿ ಜಾರಿಯಲ್ಲಿರುವ ರೋಮಿಯೋ-ಜೂಲಿಯೆಟ್ ಕಾನೂನು ಜಾರಿಯಾಗುವ ಮೊದಲು, ಹದಿಹರೆಯದ ಲೈಂಗಿಕತೆ ಪ್ರಕರಣಗಳಲ್ಲಿ ಹುಡುಗ ವಯಸ್ಕನಾಗಿದ್ದರೆ ಮಾತ್ರ ಅತ್ಯಾಚಾರವೆಂದು ಪರಿಗಣಿಸಲಾಗುತ್ತಿತ್ತು. ಆದರೆ, 2007ರಲ್ಲಿ ಅನೇಕ ದೇಶಗಳು ರೋಮಿಯೋ-ಜೂಲಿಯೆಟ್ ಕಾನೂನನ್ನು ಅಳವಡಿಸಿಕೊಂಡವು. ಈ ಕಾನೂನಿನ ಅಡಿಯಲ್ಲಿ ಅಪ್ತಾಪ್ತೆಯ ವಯಸ್ಸಿಗಿಂತ ಹುಡುಗನ ವಯಸ್ಸು ನಾಲ್ಕು ವರ್ಷಕ್ಕಿಂತ ಹೆಚ್ಚಿಲ್ಲದಿದ್ದರೆ, ಅದನ್ನು ರೋಮಿಯೋ-ಜೂಲಿಯೆಟ್ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಹುಡುಗರನ್ನು ಬಂಧನದಿಂದ ಪಾರುಮಾಡುತ್ತದೆ” ಎಂದು ತಿಳಿಸಿದ್ದಾರೆ.

“18 ವರ್ಷಕ್ಕಿಂತ ಮೇಲ್ಪಟ್ಟ ಅನೇಕ ಹುಡುಗರನ್ನು 16-18 ನಡುವಿನ ವಯೋಮಾನದ ಹುಡುಗಿಯರೊಂದಿಗೆ ಸಮ್ಮತಿಯ ಲೈಂಗಿಕತೆಯಲ್ಲಿ ತೊಡಗಿದ್ದಕ್ಕಾಗಿ ಬಂಧಿಸಲಾಗಿದೆ. 16 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 16-20 ವರ್ಷ ವಯಸ್ಸಿನ ಹುಡುಗರ ನಡುವಿನ ಸಮ್ಮತಿಯ ಲೈಂಗಿಕತೆಯನ್ನು ಅಪರಾಧವಲ್ಲ ಎಂದು ಪರಿಗಣಿಸಬೇಕು” ಎಂದು ಮನವಿ ಮಾಡಿದರು.

ಸಿಜೆಐ ನೇತೃತ್ವದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, 18-19 ವರ್ಷ ವಯಸ್ಸಿನ ಹುಡುಗರು ಮತ್ತು 16-18ರ ವಯಸ್ಸಿನ ಹುಡುಗಿಯರು ಸಮ್ಮತಿಯಿಂದ ಲೈಂಗಿಕತೆಯಲ್ಲಿ ತೊಡಗಿದರೆ, ಅದನ್ನು ಅಪರಾಧಿಕರಿಸಬಹುದೇ ಅಥವಾ ರೋಮಿಯೋ-ಜೂಲಿಯೆಟ್ ಕಾನೂನನ್ನು ಭಾರತಕ್ಕೆ ಅನ್ವಯಿಸಬಹುದೇ? ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬೆಂಕಿ ಅವಘಡ| ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

ಪಿಐಎಲ್ ಅರ್ಜಿದಾರರು ಕೇಂದ್ರ ಆರೋಗ್ಯ ಸಚಿವಾಲಯದ ಪರವಾಗಿ ನಡೆದ ಅಧ್ಯಯನವನ್ನು ಉಲ್ಲೇಖಿಸಿದ್ದಾರೆ. ಅದರ ಪ್ರಕಾರ, 25-49 ವರ್ಷ ವಯಸ್ಸಿನ 10% ಮಹಿಳೆಯರು ತಮಗೆ 15 ವರ್ಷ ವಯಸ್ಸಾಗುವ ಮೊದಲೇ ಲೈಂಗಿಕತೆಯನ್ನು ಹೊಂದಿದ್ದರು. 39% ರಷ್ಟು ಮಹಿಳೆಯರು ತಮ್ಮ 18 ವರ್ಷ ವಯಸ್ಸಿನಲ್ಲಿ ಮೊದಲ ಬಾರಿಗೆ ಲೈಂಗಿಕ ಚಟುವಟಿಕೆ ನಡೆಸಿದ್ದಾರೆ.

“ಭಾರತದಲ್ಲಿ ಅಪ್ರಾಪ್ತ ವಯಸ್ಸಿನ ಲೈಂಗಿಕತೆಯು ಪ್ರಚಲಿತವಾಗಿದೆ ಎಂಬುದು ಸ್ಪಷ್ಟವಾಗಿದೆ. ಸಿಕ್ಕಿಬಿದ್ದವರು ಅತ್ಯಾಚಾರ ಪ್ರಕರಣದಡಿ ಆರೋಪಿಗಳಾಗುತ್ತಿದ್ದಾರೆ. ಲಕ್ಷಾಂತರ ಜನರು 18 ವರ್ಷ ತುಂಬುವ ಮೊದಲು ಸಮ್ಮತಿಯ ಲೈಂಗಿಕತೆಯನ್ನು ಹೊಂದಿರುತ್ತಾರೆ. ಗರ್ಭನಿರೋಧಕಗಳನ್ನು ಬಳಸಿದ ಒಪ್ಪಿಗೆಯ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಲಾಗಿದೆ ಎಂಬುದು ವಿಪರ್ಯಾಸವಾಗಿದೆ” ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X