ರಾಜ್ಯ ಸ್ಥಾನಮಾನ ಕೇಳಿಕೊಂಡು ಶ್ವೇತಭವನಕ್ಕೆ ಹೋಗಬೇಕೇ: ಒಮರ್ ಅಬ್ದುಲ್ಲಾ ಪ್ರಶ್ನೆ

Date:

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪಡೆಯಲು ನಾವು ದೆಹಲಿಗಲ್ಲದೆ ಅಮೆರಿಕದ ಶ್ವೇತಭವನಕ್ಕೆ ಹೋಗಬೇಕೇ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪ್ರಸ್ತಾಪಿಸಿದ ಪ್ರತಿಭಟನೆಗೆ ಬಿಜೆಪಿ ಆಕ್ಷೇಪಿಸಿರುವುದನ್ನು ಖಂಡಿಸಿದ್ದಾರೆ.

- Advertisement -

ಜಮ್ಮುವಿನಲ್ಲಿ ನಡೆದ ನ್ಯಾಷನಲ್ ಕಾನ್ಫರೆನ್ಸ್‌ನ ‘ಚಲೋ ದೆಹಲಿ’ ರ‍್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ನಿಲುವನ್ನು ವಿರೋಧಿಸಿ, ನ್ಯಾಷನಲ್ ಕಾನ್ಫರೆನ್ಸ್ (NC) ಪಕ್ಷವು ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಇದಕ್ಕೆ ಬಿಜೆಪಿಯ ಕೆಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಒಮರ್ ಅಬ್ದುಲ್ಲಾ ಅವರು ಈ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನೂ ಓದಿ: ’20 ವರ್ಷಗಳಿಂದ ಕೊಲ್ಲಲು ಕಾಯುತ್ತಿದ್ದೆ’; ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನಿಸಿದ ಆರೋಪಿ ಹೇಳಿಕೆ

“ನಮ್ಮ ರಾಜ್ಯ ಸ್ಥಾನಮಾನವನ್ನು ಪಡೆಯಲು ನಾವು ಅಮೆರಿಕದಲ್ಲಿರುವ ಅಧ್ಯಕ್ಷ ಟ್ರಂಪ್ ಅವರ ಶ್ವೇತಭವನಕ್ಕೆ ಹೋಗಬೇಕೇ? ನಮ್ಮ ಸ್ವಂತ ದೇಶದ ರಾಜಧಾನಿಯಲ್ಲಿ ನಮಗೆ ನ್ಯಾಯ ಸಿಗದಿದ್ದರೆ, ನಾವು ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿಸಿ” ಎಂದು ಪ್ರಶ್ನಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡುವುದು ಕೇಂದ್ರ ಸರ್ಕಾರ ಮಾಡುತ್ತಿರುವ ಉಪಕಾರವಲ್ಲ. ಅದು ಪ್ರಧಾನಿ ನರೇಂದ್ರ ಮೋದಿ ಹಾಗೂ ಸುಪ್ರೀಂ ಕೋರ್ಟ್ ದೇಶದ ಜನರಿಗೆ ನೀಡಿರುವ ಬದ್ಧತೆ ಹಾಗೂ ಭರವಸೆಯಾಗಿದೆ, ಅದನ್ನು ತಕ್ಷಣವೇ ಈಡೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...