ಲೋಕಸಭೆ ಚುನಾವಣೆಗಾಗಿ ಮಾತ್ರ ರಚಿಸಿದ್ದರೆ ಇಂಡಿಯಾ ಒಕ್ಕೂಟ ವಿಸರ್ಜಿಸಿ: ಒಮರ್‌ ಅಬ್ದುಲ್ಲಾ

Date:

‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಿ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.

- Advertisement -

ದೆಹಲಿ ವಿಧಾನಸಭಾ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಗಾಗಿ ಮಾತ್ರ ‘ಇಂಡಿಯಾ’ ಮೈತ್ರಿಕೂಟವನ್ನು ರಚನೆ ಮಾಡಿದ್ದರೆ, ಅದನ್ನು ವಿಸರ್ಜಿಸುವುದು ಅನಿವಾರ್ಯ. ದೆಹಲಿ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ’ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ರಾಜಕೀಯ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅಬ್ದುಲ್ಲಾ, ‘ಈ ಬಗ್ಗೆ ನಾನು ಏನನ್ನೂ ಹೇಳಲಾರೆ, ಏಕೆಂದರೆ ನಮಗೂ ದೆಹಲಿ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಎಎಪಿ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಬಿಜೆಪಿಯನ್ನು ಹೇಗೆ ಎದುರಿಸಬೇಕೆಂದು ನಿರ್ಧರಿಸಬೇಕು. ಒಂದು ವೇಳೆ ‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

“ನನಗೆ ನೆನಪಿರುವಂತೆ ‘ಇಂಡಿಯಾ’ ಮೈತ್ರಿಕೂಟಕ್ಕೆ ಯಾವುದೇ ಕಾಲಮಿತಿ ಎಂಬುದು ಇರಲಿಲ್ಲ. ಆದರೆ, ಲೋಕಸಭೆ ಚುನಾವಣೆ ಬಳಿಕ ಇದುವರೆಗೆ ಯಾವುದೇ ಸಭೆ ನಡೆಯದಿರುವುದು ದುರದೃಷ್ಟಕರ. ಮೈತ್ರಿಕೂಟವನ್ನು ಯಾರು ಮುನ್ನಡೆಸುತ್ತಾರೆ? ಅಜೆಂಡಾ ಏನು? ಮೈತ್ರಿ ಹೇಗೆ ಮುಂದುವರಿಯುತ್ತದೆ? ನಾವು ಒಗ್ಗಟ್ಟಾಗಿ ಇರುತ್ತೇವೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ’ ಎಂದು ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದರು.

2024ರ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ –ಕಾಂಗ್ರೆಸ್ ಮೈತ್ರಿಕೂಟ ಸರಳ ಬಹುಮತ ಪಡೆದು ಸರ್ಕಾರ ರಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...