ನಿಷ್ಪಕ್ಷಪಾತತನ ಬೇಡವೇ: ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಸಿಜೆಐ ಹೊರಗಿಟ್ಟ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

Date:

ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಚುನಾವಣಾ ಆಯುಕ್ತರ (ECs) ನೇಮಕಾತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (CJI) ಆಯ್ಕೆ ಸಮಿತಿಯಿಂದ ಹೊರಗಿಡುವ ಕೇಂದ್ರ ಸರ್ಕಾರದ ಕಾಯ್ದೆಯು ಇದೀಗ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -

“ಸಂಸ್ಥೆಯೊಂದರ ಸ್ವಾಯತ್ತತೆ ಮತ್ತು ಪಾರದರ್ಶಕತೆ ಕೇವಲ ಕಾರ್ಯರೂಪದಲ್ಲಿದ್ದರೆ ಸಾಲದು, ಅದು ಸಾರ್ವಜನಿಕರಿಗೆ ನಿಷ್ಪಕ್ಷಪಾತವಾಗಿ ಕಾಣಿಸುವುದು ಅತ್ಯಗತ್ಯವಲ್ಲವೇ?” ಎಂಬ ಪ್ರಮುಖ ಪ್ರಶ್ನೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರರು ಎತ್ತಿದ್ದು, ನ್ಯಾಯಪೀಠವು ಈ ಕುರಿತು ಪ್ರಮುಖ ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನೂ ಓದಿ: ಚುನಾವಣಾ ಆಯುಕ್ತರ ನೇಮಕ ಆಯ್ಕೆ ಸಮಿತಿಯಿಂದ ಸಿಜೆಐ ಹೊರಗೆ: ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

ಈ ವಿವಾದದ ಮೂಲ 2023ರ ಮಾರ್ಚ್‌ನಲ್ಲಿ ನೀಡಲಾದ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠದ ಐತಿಹಾಸಿಕ ತೀರ್ಪಿನಲ್ಲಿದೆ. 2023 ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರ ನೇಮಕಾತಿಗೆ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (ಸಿಜೆಐ) ಒಳಗೊಂಡ ತ್ರಿ ಸದಸ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿತ್ತು. ಸಂಸತ್ತು ಸೂಕ್ತ ಕಾಯ್ದೆ ರೂಪಿಸುವವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಪೀಠ ಹೇಳಿತ್ತು.

ಆದರೆ 2023ರ ಡಿಸೆಂಬರ್‌ನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ‘ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ-2023’ ಅನ್ನು ಸಂಸತ್ತಿನಲ್ಲಿ ಅಂಗೀಕರಿಸಿತು. ಈ ಹೊಸ ಕಾಯ್ದೆಯಲ್ಲಿ CJI ಅವರನ್ನು ಸಮಿತಿಯಿಂದ ತೆಗೆದುಹಾಕಿ, ಅವರ ಜಾಗದಲ್ಲಿ ಪ್ರಧಾನಿ ನಾಮನಿರ್ದೇಶನ ಮಾಡುವ ಒಬ್ಬ ಕೇಂದ್ರ ಸಂಪುಟ ಸಚಿವರನ್ನು ಸೇರಿಸಲಾಯಿತು. ಅಂದರೆ ಸಿಜೆಐ ಯಾರು ಆಗಬೇಕು ಎಂಬುದನ್ನು ಆಡಳಿತಾರೂಢ ಬಿಜೆಪಿಯೇ ನಿರ್ಧರಿಸುವುದು!

ಇದರಿಂದಾಗಿ ತ್ರಿ ಸದಸ್ಯ ಸಮಿತಿಯಲ್ಲಿ ಪ್ರಧಾನಿ ಮತ್ತು ಅವರ ಸಂಪುಟ ಸಚಿವರು ಇರುವುದರಿಂದ, ಸರ್ಕಾರಕ್ಕೆ 2:1 ರ ಬಹುಮತ ದೊರೆಯುತ್ತದೆ. ಇದರಿಂದ ವಿರೋಧ ಪಕ್ಷದ ನಾಯಕನ ಧ್ವನಿ ನಗಣ್ಯವಾಗುತ್ತದೆ ಮತ್ತು ಕಾರ್ಯಾಂಗವೇ ತನಗೆ ಬೇಕಾದವರನ್ನು ಆಯುಕ್ತರನ್ನಾಗಿ ನೇಮಿಸಿಕೊಳ್ಳಬಹುದು. ಇದನ್ನೇ ಅರ್ಜಿದಾರರು ವಾದಿಸಿದ್ದಾರೆ.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಮತ್ತು ಕೇಂದ್ರದ ಪರ ವಕೀಲರು ಈ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಸಂವಿಧಾನದ ವಿಧಿಗಳನ್ನು ಹಾಗೂ ರಾಜಕೀಯ ತರ್ಕಗಳನ್ನು ಮುಂದಿಡುತ್ತಿದ್ದಾರೆ. ಸಂವಿಧಾನದ ವಿಧಿ 324(2) ರ ಪ್ರಕಾರ ಚುನಾವಣಾ ಆಯೋಗದ ನೇಮಕಾತಿ ನಿಯಮ ರೂಪಿಸುವ ಸಂಪೂರ್ಣ ಹಕ್ಕು ಸಂಸತ್ತಿಗಿದೆ. 2023ರ ಸುಪ್ರೀಂ ಕೋರ್ಟ್ ತೀರ್ಪು ಕೇವಲ ಸಂಸತ್ತು ಕಾಯ್ದೆ ಮಾಡುವವರೆಗಿನ ‘ಶೂನ್ಯತೆ ತುಂಬುವ’ ತಾತ್ಕಾಲಿಕ ಆದೇಶವಾಗಿತ್ತು. ಕಾರ್ಯಾಂಗದ ನೇಮಕಾತಿ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಪ್ರತಿ ಹಂತದಲ್ಲೂ ಹಸ್ತಕ್ಷೇಪ ಮಾಡುವುದು ಶಾಸಕಾಂಗ-ನ್ಯಾಯಾಂಗಗಳ ಅಧಿಕಾರ ವಿಭಜನೆಗೆ ಧಕ್ಕೆ ತರುತ್ತದೆ ಎಂದೆಲ್ಲ ಬಿಜೆಪಿ ಸಮರ್ಥಿಸಿಕೊಳ್ಳುತ್ತಾ ಬರುತ್ತಿದೆ.

ಇನ್ನೊಂದೆಡೆ ವಿಪಕ್ಷಗಳು ಸಮಿತಿಯಲ್ಲಿ 2:1 ಬಹುಮತ ಇರುವುದರಿಂದ ಆಡಳಿತಾರೂಢ ಬಿಜೆಪಿಯೇ ತನಗೆ ಅನುಕೂಲಕರವಾದವರನ್ನು ನೇಮಿಸಿಕೊಳ್ಳುತ್ತದೆ. CBI, CVC ಮಾದರಿಯಲ್ಲಿ ನ್ಯಾಯಾಂಗದ ಉಪಸ್ಥಿತಿ ಇಲ್ಲದಿದ್ದರೆ ಚುನಾವಣಾ ಆಯೋಗ ಸ್ವತಂತ್ರವಾಗಿರಲು ಸಾಧ್ಯವಿಲ್ಲ. ಚುನಾವಣೆಯನ್ನು ನಡೆಸುವ ಆಯೋಗವು ಸರ್ಕಾರದ ಹದಿನೈದನೇ ಇಲಾಖೆಯಂತೆ ಕಾರ್ಯಾಚರಿಸುವ ಅಪಾಯವಿದೆ.

ಬಿಜೆಪಿಯ ರಾಜಕೀಯ ಲೆಕ್ಕಾಚಾರ

ಲೋಕಸಭೆ ಮತ್ತು ರಾಜ್ಯ ಸಭೆಗಳ ಚುನಾವಣೆಯನ್ನು ನಡೆಸುವ ಅತ್ಯುನ್ನತ ಸಂಸ್ಥೆಯ ಮುಖ್ಯಸ್ಥರ ನೇಮಕದಲ್ಲಿ ತನ್ನ ನಿರ್ಣಾಯಕ ಪಾತ್ರವಿರಬೇಕು ಎಂಬುದು ಆಡಳಿತಾರೂಢ ಬಿಜೆಪಿಯ ಮೋಸದ ರಾಜಕೀಯ ತಂತ್ರ. “ಬಿಜೆಪಿಯು ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರುತ್ತಿದೆ” ಎಂದು ಕಾಂಗ್ರೇಸ್ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟ ಮತ್ತು ಜಯಾ ಠಾಕೂರ್, ADR ನಂತಹ ಸ್ವಯಂಸೇವಾ ಸಂಸ್ಥೆಗಳು ಗಂಭೀರವಾಗಿ ಆರೋಪಿಸಿವೆ. ಇದು ವಾಸ್ತವವೂ ಹೌದು.

ಈ ಸಂಬಂಧ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠವು, ಸಂಸತ್ತಿಗೆ ಕಾನೂನು ಮಾಡುವ ಹಕ್ಕಿದೆ ಎಂಬುದನ್ನು ಒಪ್ಪಿಕೊಂಡರೂ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಆಯೋಗದ ಸ್ವಾಯತ್ತತೆ ಕಾಪಾಡುವುದು ಪ್ರಜಾಪ್ರಭುತ್ವದ ಮೂಲಭೂತ ಚೌಕಟ್ಟು ಎಂಬುದನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಆಳವಾಗಿ ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

“ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕರ ನಂಬಿಕೆಯ ತಳಹದಿ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂಬುದು ಜನರಿಗೆ ಸ್ಪಷ್ಟವಾಗಿ ಕಾಣಿಸಬೇಕು” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...