ಶ್ರೀ ಸಿಮೆಂಟ್ಸ್‌ನಿಂದ 23 ಸಾವಿರ ಕೋಟಿ ರೂ. ತೆರಿಗೆ ವಂಚನೆ ಆರೋಪ; ಆದಾಯ ತೆರಿಗೆ ಇಲಾಖೆ ಪರಿಶೀಲನೆ

Date:

ದೇಶದ ಅತೀ ದೊಡ್ಡ ಸಿಮೆಂಟ್‌ ಕಂಪನಿಗಳಲ್ಲಿ ಒಂದಾದ ಶ್ರೀ ಸಿಮೆಂಟ್ಸ್ ₹ 23 ಸಾವಿರ ಕೋಟಿ ರೂಪಾಯಿಗೂ ಅಧಿಕ ತೆರಿಗೆ ವಂಚನೆ ಎಸಗಿದೆ ಎನ್ನುವ ಆರೋಪ ಕೇಳಿಬಂದಿದೆ.

- Advertisement -

ಶನಿವಾರ ರಾಜಸ್ಥಾನದ ಹಲವು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಸುಮಾರು 23 ಸಾವಿರ ಕೋಟಿ ರೂಪಾಯಿಗಳಷ್ಟು ತೆರಿಗೆ ವಂಚನೆ ನಡೆದಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ವರದಿ ಪ್ರಕಟವಾದ ಬಳಿಕ ಶ್ರೀ ಸಿಮೆಂಟ್ಸ್ ಷೇರುಗಳು ಶೇಕಡ 10ರಷ್ಟು ಕುಸಿತ ಕಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಮಾಧ್ಯಮಗಳ ವರದಿಯಂತೆ, ಶ್ರೀ ಸಿಮೆಂಟ್ಸ್ ಸಂಸ್ಥೆ ನಕಲಿ ಒಪ್ಪಂದಗಳ ಮೂಲಕ ಪ್ರತೀ ವರ್ಷವೂ 1,200 ರಿಂದ 1,400 ಕೋಟಿ ರೂನಷ್ಟು ತೆರಿಗೆ ಹಣ ವಂಚಿಸುತ್ತಿದೆ. ಇದರಿಂದ ಕೇಂದ್ರ ಮತ್ತು ರಾಜಸ್ಥಾನ ಸರ್ಕಾರದ ಆದಾಯಕ್ಕೆ ನಷ್ಟ ಉಂಟಾಗಿದೆ. ಆದರೆ ವಂಚನೆ ಬಗ್ಗೆ ತೆರಿಗೆ ಇಲಾಖೆ ಅಥವಾ ರಾಜಸ್ಥಾನ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಈ ಸುದ್ದಿ ಓದಿದ್ದೀರಾ? 16 ವರ್ಷದವರು ಲೈಂಗಿಕತೆಯ ಬಗ್ಗೆ ನಿರ್ಧರಿಸಬಲ್ಲರು ಎಂದ ಮೇಘಾಲಯ ಹೈಕೋರ್ಟ್; ಪೋಕ್ಸೋ ಎಫ್‌ಐಆರ್‌ ರದ್ದು

1979ರಲ್ಲಿ ರಾಜಸ್ಥಾನದಲ್ಲಿ ಆರಂಭಗೊಂಡ ಶ್ರೀ ಸಿಮೆಂಟ್ಸ್ ಕಂಪನಿ ಸದ್ಯ ಕೋಲ್ಕತಾದಲ್ಲಿ ಪ್ರಧಾನ ಕಚೇರಿ ಹೊಂದಿದೆ. ರಾಜಸ್ಥಾನ, ಉತ್ತರಾಖಂಡ್, ಹರ್ಯಾಣ, ಉತ್ತರಪ್ರದೇಶ, ಛತ್ತೀಸ್​ಗಡ ಮತ್ತು ಬಿಹಾರ ರಾಜ್ಯಗಳಲ್ಲಿ ಒಟ್ಟು 10ಕ್ಕೂ ಹೆಚ್ಚು ಸಿಮೆಂಟ್ ಉತ್ಪಾದಕ ಘಟಕಗಳು ಹಾಗೂ ವಿದ್ಯುತ್ ಘಟಕಗಳನ್ನು ಹೊಂದಿದೆ.

ತೆರಿಗೆ ವಂಚನೆ ಆರೋಪಗಳನ್ನು ತಳ್ಳಿ ಹಾಕಿರುವ ಸಂಸ್ಥೆಯು, ತಮ್ಮ ಕಚೇರಿಗಳಲ್ಲಿ ನಡೆಯುತ್ತಿರುವ ತೆರಿಗೆ ಪರಿಶೀಲನೆ ಇನ್ನೂ ಪೂರ್ಣಗೊಂಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಯು ಸತ್ಯಕ್ಕೆ ದೂರವಾದುದು. ಕಂಪನಿಯ ಆಡಳಿತವು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪೂರ್ಣ ಸಹಕಾರ ನೀಡುತ್ತಿದೆ ಎಂದು ತಿಳಿಸಿದೆ.

ತೆರಿಗೆ ದಾಳಿಯಿಂದಾಗಿ ಕಂಪನಿಯ ಷೇರುಗಳ ದರವು ಶೇಕಡ 10ರಷ್ಟು ಇಳಿಕೆ ಕಂಡುಬಂದು 22,630.75 ರೂಗೆ ತಲುಪಿದೆ. ಕಳೆದ ಮೂರು ವರ್ಷಗಳ ಬಳಿಕ ಕಂಪನಿಯ ಷೇರುಗಳ ದೊಡ್ಡ ಇಳಿಕೆ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...