“ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಮತ ಹಕ್ಕು ನಿರಾಕರಣೆಯ ಪ್ರಯೋಗ ನಡೆಸುತ್ತಿದೆ, ಅಂದಮೇಲೆ ಚುನಾವಣೆಯ ಅಗತ್ಯವಾದರೂ ಏನಿದೆ?” ಎಂದು ಚುನಾವಣಾ ಆಯೋಗದ ಮೇಲೆ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯಸಭಾ ಸಂಸದ ಸಿಬಲ್, ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ : ಬಿಜೆಪಿಯಿಂದ ಭಯೋತ್ಪಾದನೆ ಮಟ್ಟ ಹಾಕುವ ಮಂತ್ರ; ಪುಲ್ವಾಮ, ಪಹಲ್ಗಾಮ್ ದಾಳಿಯ ತನಿಖೆ ಏನಾಯ್ತು?
ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಕಪಿಲ್ ಸಿಬಲ್, “ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮತ ಹಕ್ಕು ನಿರಾಕರಣೆಯ ಪ್ರಯೋಗ ಮಾಡುತ್ತಿದೆ. ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ನೀಡಿ ಪುರಸ್ಕರಿಸಲೇಬೇಕು!” ಎಂದು ಛೇಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇಂದು ಮೊದಲ ಹಂತದ ಮತದಾನ ನಡೆದಿದೆ. ಈ ಬಾರಿಯ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ರಾಜ್ಯದಲ್ಲಿನ ಭ್ರಷ್ಟಾಚಾರ, ನಿರುದ್ಯೋಗದಂತಹ ವಿಷಯಗಳನ್ನು ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಆಧಾರ್, ಪೌರತ್ವದ ದಾಖಲೆಗಳು ಇಲ್ಲ ಎಂಬ ಕಾರಣ ನೀಡಿ ಮತಪಟ್ಟಿಯಿಂದ ಸುಮಾರು 91 ಲಕ್ಷ ಮತದಾರರ ಹೆಸರುಗಳನ್ನು ಅಳಿಸಿಹಾಕಿರುವ ವಿವಾದ ಆಕ್ರಮಿಸಿಕೊಂಡಿದೆ.





