ಗೃಹಲಕ್ಷ್ಮಿ ಯೋಜನೆ ಬಗ್ಗೆ ಬಿಜೆಪಿ ಸುಳ್ಳು ಜಾಹೀರಾತು, ಪ್ರಧಾನಿ ಕ್ಷಮೆಯಾಚಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

Date:

Advertisements

‘ಸುಳ್ಳೇ ಬಿಜೆಪಿಯ ಮನೆ ದೇವರು’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆ ‘ಗೃಹಲಕ್ಷ್ಮಿ’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ. ಮೋದಿ ಅವರು ಕೂಡಲೃ ಕ್ಷಮೆ ಕೇಳಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ. ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ” ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈ ವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು ₹30,285 ಕೋಟಿ ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ” ಎಂದು ತಿಳಿಸಿದ್ದಾರೆ.

Advertisements

“ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X