ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ, ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 22 ಸೇನಾ ಸಿಬ್ಬಂದಿ ಸೇರಿದಂತೆ 80 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವಿಗೀಡಾದವರ ಮತ್ತು ಕಣ್ಮರೆಯಾದವರ ಸಂಖ್ಯೆ ಇನ್ನೂ ಹೆಚ್ಚಿದೆ ಎನ್ನಲಾಗುತ್ತಿದೆ.
ಸಿಕ್ಕಿಂನಲ್ಲಿ ನಸುಕಿನ 1.30 ರ ಸುಮಾರಿಗೆ ಪ್ರಾರಂಭವಾದ ಪ್ರವಾಹವು ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡುವುದರಿಂದ ಉಲ್ಬಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಸುಮಾರು 3,000 ಪ್ರವಾಸಿಗರು ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿ ಬಿ ಪಾಠಕ್ ತಿಳಿಸಿದ್ದಾರೆ. ಚುಂಗ್‌ಥಾಂಗ್‌ನಲ್ಲಿ ತೀಸ್ತಾ ಮೂರನೇ ಹಂತದ ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ ಹಲವಾರು ಕಾರ್ಮಿಕರು ಕೂಡ ಅಣೆಕಟ್ಟಿನ ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪಾಠಕ್ ಹೇಳಿದರು.
ಉತ್ತರ ಬಂಗಾಳದಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರು ಸತ್ತವರನ್ನೂ ಒಳಗೊಂಡಂತೆ ಸತ್ತವರೆಲ್ಲರೂ ನಾಗರಿಕರು ಎಂದು ಗುರುತಿಸಲಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ 23 ಸೈನಿಕರಲ್ಲಿ ಒಬ್ಬನನ್ನು ನಂತರ ರಕ್ಷಿಸಲಾಗಿದೆ ಎಂದು ಅವರು ಹೇಳಿದರು.
14 ಸೇತುವೆಗಳು ಕುಸಿದು ಬಿದ್ದಿದ್ದು, ಅವುಗಳಲ್ಲಿ ಒಂಬತ್ತು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಮತ್ತು ಐದು ರಾಜ್ಯ ಸರ್ಕಾರಕ್ಕೆ ಸೇರಿದ್ದು, ಪ್ರವಾಹದಿಂದಾಗಿ ರಸ್ತೆಗಳಿಗೆ ವ್ಯಾಪಕ ಹಾನಿಯುಂಟಾಗಿದೆ ಎಂದು ಸಿಕ್ಕಿಂ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ಮಾತನಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಮತ್ತು ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಸಿಕ್ಕಿಂ ಮತ್ತು ಹಿಮಾಚಲ ಪ್ರದೇಶದ ದುರಂತಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
The situation in Sikkim is precarious as several people have lost their lives and many including our brave Army personnel are missing due to cloudburst and flash floods.
Our thoughts are with the people of Sikkim who are battling these distressing times.
The Union Govt must…
— Mallikarjun Kharge (@kharge) October 5, 2023