ಶಾಸಕ ಸ್ಥಾನಕ್ಕೆ ಸಿಕ್ಕಿಂ ಸಿಎಂ ಪತ್ನಿ ರಾಜೀನಾಮೆ: ಒಂದು ದಿನದ ಹಿಂದಷ್ಟೆ ಪ್ರೇಮ್ ಸಿಂಗ್‌ ಪ್ರಮಾಣವಚನ

Date:

ಒಂದು ದಿನದ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್‌ ತಮಾಂಗ್ ಅವರಿಗೆ ಸ್ವತಃ ಪತ್ನಿಯೇ ಆಘಾತ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿದ್ದ ಪ್ರೇಮ್‌ ಸಿಂಗ್‌ ಅವರ ಪತ್ನಿ ಕೃಷ್ಣ ಕುಮಾರಿ ರೈ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದಿಢೀರ್‌ ಬೆಳವಣಿಗೆಯಲ್ಲಿ ಕೃಷ್ಣ ಕುಮಾರಿ ರೈ ಅವರು ರಾಜೀನಾಮೆ ನೀಡಿದ ವಿಚಾರ ಅಸ್ಪಷ್ಟವಾಗಿದ್ದು, ಸ್ಪೀಕರ್‌ ಎಂ ಎನ್‌ ಶೆರ್ಪಾ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್‌ಕೆಎಂ) ಪಕ್ಷದಿಂದ ಸ್ಪರ್ಧಿಸಿದ್ದ ಕೃಷ್ಣ ಕುಮಾರಿ ಅವರು ನಾಮ್ಚಿ ಸಿಂಘಿತಾಂಗ್‌ ಕ್ಷೇತ್ರದಿಂದ ಎಸ್‌ಡಿಎಫ್‌ ಅಭ್ಯರ್ಥಿ ಬಿಮಲ್‌ ರಾಯ್‌ ವಿರುದ್ಧ 5 ಸಾವಿರ ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಇತ್ತೀಚಿಗಷ್ಟೆ ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಎಸ್‌ಕೆಎಂ ಪಕ್ಷ 32 ವಿಧಾನಸಭೆ ಕ್ಷೇತ್ರಗಳಲ್ಲಿ 31 ಸ್ಥಾನಗಳನ್ನು ಪಡೆದು ಅಭೂತಪೂರ್ವ ಗೆಲುವು ಸಾಧಿಸಿತ್ತು. ವಿಪಕ್ಷ ಎಸ್‌ಡಿಎಫ್ ಪಕ್ಷ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಜಯಗಳಿಸಿತ್ತು. ಏಕೈಕ ಲೋಕಸಭೆ ಕ್ಷೇತ್ರವನ್ನು ಕೂಡ ಎಸ್‌ಕೆಎಂ ತನ್ನದಾಗಿಸಿಕೊಂಡಿತ್ತು.

ಸಿಎಂ ಪ್ರೇಮ್ ಸಿಂಗ್‌ ತಮಾಂಗ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ವಿಜಯ ಸಾಧಿಸಿದ್ದರು. 2019ರಿಂದಲೂ ಪ್ರೇಮ್‌ ಸಿಂಗ್‌ ಅಧಿಕಾರದಲ್ಲಿದ್ದಾರೆ. ವಿಪಕ್ಷ ನಾಯಕ ಪವನ್‌ ಕುಮಾರ್ ಚಾಮ್ಲಿಂಗ್‌ 1994ರಿಂದ 2019ರ ವರೆಗೆ 25 ವರ್ಷಗಳ ಕಾಲ ದೀರ್ಘಕಾಲದವರೆಗೆ ಎಸ್‌ಕೆಎಂ ಪಕ್ಷದ  ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೀಲ್ಸ್ ಮಾಡುವಾಗ 300 ಅಡಿ ಜಲಪಾತಕ್ಕೆ ಬಿದ್ದು ‘ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್’ ಮೃತ್ಯು

ಮುಂಬೈ ಮೂಲದ 'ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್' ಆನ್ವಿ ಕಾಮ್ದಾರ್ (27) ರೀಲ್ಸ್...

ಬಿಜೆಪಿ ಭಿನ್ನಮತೀಯರಿಗೆ ‘ಮಾನ್ಸೂನ್ ಆಫರ್’ ನೀಡಿದ ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ...

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...