‘ಸೈಲೆಂಟ್ ಗಾರ್ಡಿಯನ್, ರಿಯಲ್ ಲೈಫ್ ಬ್ಯಾಟ್‌ಮ್ಯಾನ್’- ರಾಹುಲ್ ಗಾಂಧಿ ಪೋಸ್ಟರ್ ವೈರಲ್!

Date:

ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿ ‘ಇಂದಿರಾ ಭವನ’ ಹಾಗೂ ಭಾರತೀಯ ಯುವ ಕಾಂಗ್ರೆಸ್ (IYC) ಕಚೇರಿಯ ಸುತ್ತಮುತ್ತ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ರಿಯಲ್ ಲೈಫ್ ಬ್ಯಾಟ್‌ಮ್ಯಾನ್’ (Real-life Batman) ಎಂದು ಬಿಂಬಿಸುವ ಪೋಸ್ಟರ್‌ಗಳನ್ನು ಹಾಕಲಾಗಿದೆ.

- Advertisement -

ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಲಾಕ್ರಾ ನೇತೃತ್ವದಲ್ಲಿ ಈ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹೊಲಿಸೂಚಕವಾಗಿ “ದ ಸೈಲೆಂಟ್ ಗಾರ್ಡಿಯನ್, ಎ ವಾಚ್‌ಫುಲ್ ಪ್ರೊಟೆಕ್ಟರ್ LoP ರಾಹುಲ್ ಗಾಂಧಿ, ದ ರಿಯಲ್ ಲೈಫ್ ಬ್ಯಾಟ್‌ಮ್ಯಾನ್” (ರಕ್ಷಕ, ಜಾಗರೂಕ ಪೋಷಕ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿಜವಾದ ಜೀವನದ ಬ್ಯಾಟ್‌ಮ್ಯಾನ್) ಎಂಬ ಸಾಲುಗಳನ್ನು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಇದನ್ನೂ ಓದಿ: ಜೆನ್ ಝೀಗಳ‌ ಕ್ರಷ್ ಆದ್ರಾ ರಾಹುಲ್ ಗಾಂಧಿ? – ಪುಣೆ ಸಂವಾದದಲ್ಲಿ ಯುವತಿಯರ ಲವ್‌ ಮೆಸೇಜ್!

ಇತ್ತೀಚೆಗೆ ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳಿಗಾಗಿ ನಡೆಸಿದ “Ask Me Anything” (ನನ್ನನ್ನು ಏನನ್ನಾದರೂ ಕೇಳಿ) ಸಂವಾದ ಕಾರ್ಯಕ್ರಮದಲ್ಲಿ ಯುವಕನೊಬ್ಬ “ನೀವು ಬ್ಯಾಟ್‌ಮ್ಯಾನ್ ಸೂಪರ್‌ ಹಿರೋನಾ?” ಎಂದು ತಮಾಷೆಯಾಗಿ ಕೇಳಿದ್ದನು. ಅದಕ್ಕೆ ತಮಾಷೆಯಾಗಿಯೇ ಉತ್ತರಿಸಿದ್ದ ರಾಹುಲ್ ಗಾಂಧಿ, “ನನ್ನನ್ನು ಹಾಗೂ ಬ್ಯಾಟ್‌ಮ್ಯಾನ್‌ನನ್ನು ಇದುವರೆಗೆ ಯಾರೂ ಒಂದೇ ಕೊಠಡಿಯಲ್ಲಿ ಒಟ್ಟಿಗೆ ನೋಡಿಲ್ಲ” ಎಂದು ಹಾಸ್ಯಮಯವಾಗಿ ಹೇಳಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಅಲ್ಲದೆ, ಇತ್ತೀಚೆಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಯುವಕರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಹಾಗೂ ಗಾಯಗೊಂಡ ಯುವಕನಿಗೆ ನ್ಯಾಯ ಒದಗಿಸಲು ರಾಹುಲ್ ಗಾಂಧಿ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ನಡೆಸಿದ ಧರಣಿ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಆಯಿಷಾ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...