ಪುಣೆ | ಮಹಾನಗರ ಪಾಲಿಕೆಯ ವಾಹನವನ್ನೇ ನುಂಗಿದ ನೆಲ: ವಿಡಿಯೋ ವೈರಲ್

Date:

ನೋಡ ನೋಡುತ್ತಿದ್ದಂತೆ ಪುಣೆ ಮಹಾನಗರ ಪಾಲಿಕೆಗೆ ಸೇರಿದ ಭಾರೀ ತೂಕದ ಟ್ರಕ್‌ವೊಂದು ನೆಲದೊಳಗೆ ಮುಳುಗಿ ಹೋದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿದೆ.

- Advertisement -

ನಿಂತಿದ್ದ ಪುಣೆ ಮುನ್ಸಿಪಾಲಿಟಿಯ ನೀರಿನ ಟ್ಯಾಂಕರ್‌ ಒಂದು ಕೆಲವೇ ಸೆಕೆಂಡ್‌ಗಳಲ್ಲಿ ನೆಲದೊಳಗೆ ನಿರ್ಮಾಣವಾದ ಕುಳಿಯೊಳಕ್ಕೆ ಹೋಗಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಟ್ರಕ್‌ನೊಳಗಿದ್ದ ಚಾಲಕ ಹೊರಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸದ್ಯ ದೊಡ್ಡ ಕುಳಿಯಲ್ಲಿ ಮಣ್ಣು ನೀರು ತುಂಬಿಕೊಂಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೇ ಸ್ಥಳದಲ್ಲಿದ್ದ ಬೈಕ್ ಕೂಡಾ ಈ ಕುಳಿಯೊಳಕ್ಕೆ ಬಿದ್ದಿದೆ.

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುನ್ಸಿಪಾಲಿಟಿ ಅಧಿಕಾರಿಗಳು ದೌಡಾಯಿಸಿದ್ದು, ಎರಡು ಕ್ರೇನ್‌ಗಳ ಸಹಾಯದಿಂದ ಟ್ರಕ್ ಮತ್ತು ಬೈಕ್ ಅನ್ನು ಮೇಲಕ್ಕೆತ್ತಿದ್ದಾರೆ.

ಸದ್ಯ ಘಟನೆಯ ಬಗ್ಗೆ ತನಿಖೆ ಆರಂಭವಾಗಿದೆ. ಈ ಟ್ರಕ್‌ ನೆಲದಲ್ಲಿ ಮುಳುಗಿದ ಜಾಗದಲ್ಲಿ ಈ ಹಿಂದೆ ಬಾವಿ ಇತ್ತು. ಬಳಿಕ ಬಾವಿಯನ್ನು ಮುಚ್ಚಿ ಅಲ್ಲಿಯೇ ಅಂಚೆ ಕಚೇರಿ ಕಟ್ಟಡಕ್ಕೆ ಹೋಗುವ ರಸ್ತೆಯಾಗಿ ಅದನ್ನು ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...