ಕೇರಳ SIR ಎಫೆಕ್ಟ್: ಬಿಜೆಪಿ ಮಿತ್ರ ಪಕ್ಷದ ಅಭ್ಯರ್ಥಿಗಳ ಹೆಸರೇ ಕಣ್ಮರೆ!

Date:

ಕೇರಳ ವಿಧಾನಸಭೆ ಚುನಾವಣೆಗೆ ಹಲವು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಬಿಜೆಪಿಯು 39 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಿಜೋರಾಂನ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಮತ್ತು ರಿಯಾಲಿಟಿ ಶೋ ಖ್ಯಾತಿಯ ರಾಬಿನ್ ರಾಧಾಕೃಷ್ಣನ್ ಅಲಿಯಾಸ್ ರಾಬಿನ್ ಆರ್‌ಬಿ ಹೆಸರೂ ಕಾಣಿಸಿಕೊಂಡಿದೆ. ಬಿಜೆಪಿಯ ಮಿತ್ರ ಪಕ್ಷ ಕೇರಳದ ಕಿಟೆಕ್ಸ್ ಗ್ರೂಪ್ (Kitex Group) ಬೆಂಬಲಿತ ಟ್ವೆಂಟಿ-20 ಪಕ್ಷವೂ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದೆ. ಆದರೆ ಈ ಪಕ್ಷದ ಇಬ್ಬರು ಅಭ್ಯರ್ಥಿಗಳ ಹೆಸರು ಮತದಾರರ ಪಟ್ಟಿಯಲ್ಲೇ ಇಲ್ಲ!

- Advertisement -

ಈವರೆಗೆ ಬಿಜೆಪಿ ಕೇರಳಕ್ಕೆ 86 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇನ್ನೂ ಕೆಲವು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸುವುದು ಬಾಕಿಯುಳಿದಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಟಿ ರಮೇಶ್, ಗೋವಾ ಮಾಜಿ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ ಮತ್ತು ರಾಜ್ಯ ಕಾರ್ಯದರ್ಶಿ ಜೆ ಆರ್ ಪದ್ಮಕುಮಾರ್ ಅವರಂತಹ ಅನೇಕ ಹಿರಿಯರಿಗೆ ಇನ್ನೂ ಸ್ಥಾನ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ನಾಲ್ವರ ಪೈಪೋಟಿ; ಹಿಂದೆ ಸರಿಯುವ ಮಾತೇ ಇಲ್ಲ!

ಕೇರಳದಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರೂ ಆಗಿರುವ ರಾಜಶೇಖರನ್, ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಎಡ ಪ್ರಜಾಸತ್ತಾತ್ಮಕ ರಂಗದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪತ್ತನಂತಿಟ್ಟದ ಅರಣ್ಮುಲದಿಂದ ಸ್ಪರ್ಧಿಸಲಿದ್ದಾರೆ. ಮತ್ತೊಬ್ಬ ಪ್ರಮುಖ ನಾಯಕ ರಾಜ್ಯ ಉಪಾಧ್ಯಕ್ಷ ಬಿ ಗೋಪಾಲಕೃಷ್ಣನ್ ತ್ರಿಶೂರ್‌ನ ಗುರುವಾಯೂರ್ ಸ್ಥಾನದಲ್ಲಿ ಕಣಕ್ಕಿಳಿಸಲಾಗಿದೆ.

ಹಾಗೆಯೇ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ರಾಬಿನ್ ಆರ್‌ಬಿ ಕೊಲ್ಲಂ ಜಿಲ್ಲೆಯ ಕುಂದರದಿಂದ ಸ್ಪರ್ಧಿಸಲಿದ್ದಾರೆ. ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಹೃದ್ರೋಗ ತಜ್ಞ ಡಾ. ಪ್ರತಾಪ್ ಕುಮಾರ್ ಕೊಲ್ಲಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ | ಶೇ.70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಪ್ರಕರಣ: ಅರ್ಧಕ್ಕಿಂತ ಅಧಿಕ ಮಂದಿ ಕೋಟ್ಯಾಧಿಪತಿಗಳು!

ಈ ನಡುವೆ ಎನ್‌ಡಿಎ ಮಿತ್ರ ಪಕ್ಷ ಟ್ವೆಂಟಿ 20ಯಿಂದ ಸ್ಪರ್ಧಿಸುತ್ತಿರುವ ನಟಿಯರಾದ ವೀಣಾ ನಾಯರ್ ಮತ್ತು ಲಕ್ಷ್ಮಿ ಪ್ರಿಯಾ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಕಾಣೆಯಾಗಿದೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಇಬ್ಬರು ನಟಿಯರೂ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ.

ಆದ್ದರಿಂದ ಇಬ್ಬರೂ ಚುನಾವಣೆಯಲ್ಲಿ ಸ್ಪರ್ಧಿಸುವುದು ಇದೀಗ ಚರ್ಚೆಯ ವಿಷಯವಾಗಿದೆ. ವೀಣಾ ನಾಯರ್ ಕೊಟ್ಟಾಯಂನ ಎಟುಮನೂರ್‌ನಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಇನ್ನೊಂದೆಡೆ ಲಕ್ಷ್ಮಿ ಪ್ರಿಯಾ ಪೆರುಂಬವೂರ್‌ನಲ್ಲಿ ಕಣದಲ್ಲಿದ್ದಾರೆ. ಇಬ್ಬರಿಗೂ ಮತದಾನದ ಹಕ್ಕಿಲ್ಲದ ಕಾರಣ ಇದೀಗ ಬಿಜೆಪಿ ಮಿತ್ರ ಪಕ್ಷ ಟ್ವೆಂಟಿ 20 ಹೊಸ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...