ಎಸ್‌ಐಆರ್‌ ಆತಂಕ | ಬಂಗಾಳದಲ್ಲಿ ಒಂದೇ ವಾರದಲ್ಲಿ 7 ಮಂದಿ ಆತ್ಮಹತ್ಯೆ

Date:

ಬಿಹಾರದಲ್ಲಿ ಭಾರೀ ವಿವಾದ, ಆತಂಕ ಸೃಷ್ಟಿಸಿ ಲಕ್ಷಾಂತರ ಮತದಾರರನ್ನು ಹೊರಗಿಟ್ಟಿದ್ದ ಮತದಾರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ಈಗ ಪಶ್ಚಿಮ ಬಂಗಾಳಕ್ಕೆ ಕಾಲಿಟ್ಟಿದೆ. ಚುನಾವಣಾ ಆಯೋಗವು ಬಂಗಾಳದಲ್ಲಿ ಎಸ್‌ಐಆರ್‌ ಆಋಂಭಿಸಿದ್ದು, ತಮ್ಮ ದಾಖಲೆಗಳನ್ನು ತಪ್ಪುಗಳು ಇರುವ ಕಾರಣಕ್ಕೇ ತಮ್ಮನ್ನು ಈ ದೇಶದ ನಾಗರಿಕರೇ ಅಲ್ಲ, ಮತದಾನಕ್ಕೆ ಅರ್ಹರಲ್ಲವೆಂದು ಹೊರಹಾಕಿಬಿಡಬಹುದು ಎಂಬ ಆತಂಕದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್‌ಐಆರ್ ಆರಂಭವಾದ ಬಳಿಕ ಬಂಗಾಳದಲ್ಲಿ, ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

- Advertisement -

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಉಲುಬೇರಿಯಾ ಪಟ್ಟಣದ ನಿವಾಸಿ ಜಹೀರ್ ಮಾಲ್ (30) ತನ್ನ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಹೀರ್ ಅವರ ಅಧಿಕೃತ ದಾಖಲೆ ಪತ್ರವೊಂದರಲ್ಲಿ ‘ಸ್ಪೆಲ್ಲಿಂಗ್’ ತಪ್ಪು ಇರುವ ಕಾರಣಕ್ಕಾಗಿ, ಅವರು ಮತಪಟ್ಟಿಯಲ್ಲಿ ಹೆಸರು ಕಳೆದುಕೊಳ್ಳಬಹುದು ಎಂದು ಖಿನ್ನತೆಗೆ ಒಳಗಾಗಿದ್ದರು. ಅದೇ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

“ಅವರು ಕಳೆದ ಕೆಲವು ವಾರಗಳಿಂದ ತಮ್ಮ ದಾಖಲೆಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಸಲು ಸಂಬಂಧಿತ ಕಚೇರಿಗಳಿಗೆ ಅಲೆದಾಡುತ್ತಿದ್ದರು. ಆದರೂ, ದಾಖಲೆಗಳನ್ನು ಸರಿಪಡಿಸಲು ಸಾಧ್ಯವಾಗಿರಲಿಲ್ಲ. ದಾಖಲೆಯಲ್ಲಿನ ಸಣ್ಣ ತಪ್ಪಿನ ಕಾರಣಕ್ಕಾಗಿ ಎಸ್‌ಐಆರ್ ಪ್ರಕ್ರಿಯೆಯ ಸಂದರ್ಭದಲ್ಲಿ ತನ್ನ ಪೌರತ್ವ ಅಥವಾ ಮತದಾನದ ಅರ್ಹತೆಯನ್ನು ದಢಪಡಿಸಲು ಸಾಧ್ಯವಾಗದೇ ಹೊಗಬಹುದು ಎಂಬ ಆತಂಕ ಅವರಲ್ಲಿತ್ತು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಉತ್ತರಪ್ರದೇಶ | ಹೆಚ್ಚುತ್ತಲೇ ಇದೆ ದಲಿತರು, ಮಹಿಳೆಯರ ಮೇಲಿನ ದೌರ್ಜನ್ಯ; ಕಣ್ಣು-ಕಿವಿ -ಬಾಯಿ ಮುಚ್ಚಿ ಕೂತ ಯೋಗಿ

ಇದೇ ರೀತಿಯಲ್ಲಿ ಬಂಗಾಳದಲ್ಲಿ ಒಂದೇ ವಾರದೊಳಗೆ 7 ಮಂದಿ ಆತ್ಮಹತ್ಯೆಯ ತಪ್ಪು ಹಾದಿ ತುಳಿದಿದ್ದಾರೆ. ‘ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಣ್ಣ ತಪ್ಪುಗಳ ಕಾರಣಕ್ಕಾಗಿ ತಮ್ಮ ಹೆಸರನ್ನು ಮತಪಟ್ಟಿಯಿಂದ ತೆಗೆದುಹಾಕಬಹುದು ಎಂಬ ಭಯದಲ್ಲಿ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಕಳೆದ ವಾರ, ಬಂಗಾಳದ ಕೂಚ್‌ಬೆಹಾರ್‌ನಲ್ಲಿ 70 ವರ್ಷ ರೈತ ಖೈರುಲ್ ಶೇಖ್ ಅವರು ತಮ್ಮ ದಾಖಲೆಗಳಲ್ಲಿ ತಪ್ಪುಗಳಿವೆ ಎಂಬ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...