ಚುನಾವಣಾ ಆಯೋಗ ಪೌರತ್ವ ನಿರ್ಧರಿಸುವ ಸಂಸ್ಥೆಯಲ್ಲ: ಸುಪ್ರೀಂ ಕೋರ್ಟ್

Date:

ಚುನಾವಣಾ ಆಯೋಗವು ನಡೆಸುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಲ್ಲಿ (SIR) ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹೋದರೆ, ತಕ್ಷಣವೇ ಯಾವುದೇ ವ್ಯಕ್ತಿಯ ಪೌರತ್ವವು ರದ್ದಾಗುವುದಿಲ್ಲ. ಚುನಾವಣಾ ಆಯೋಗವು ದೇಶದ ನಾಗರಿಕರ ಪೌರತ್ವವನ್ನು ನಿರ್ಧರಿಸುವ ಅಂತಿಮ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -

ಎಸ್‌ಐಆರ್ ವೇಳೆ ಹೆಸರು ಕಳೆದುಕೊಂಡವರ ಅಪೀಲುಗಳನ್ನು ವಿಚಾರಣೆ ನಡೆಸುವ ‘ಮೇಲ್ಮನವಿ ಪ್ರಾಧಿಕಾರ’ಗಳ ಕಾರ್ಯವನ್ಮು ಇನ್ನಷ್ಟು ಸರಳಗೊಳಿಸಬೇಕು ಎಂದು ಕೋರಿ ಪ್ರಸೇನ್ಜಿತ್ ಬೋಸ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿಚಾರಣೆ ವೇಳೆ, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರು, “ಪ್ರಸ್ತುತ 19 ಮೇಲ್ಮನವಿ ನ್ಯಾಯಮಂಡಳಿಗಳ ಮುಂದೆ ಬರೋಬ್ಬರಿ 34 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಆದರೆ, ಇವುಗಳ ಪೈಕಿ ಕೇವಲ 38,000 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿದ್ದು, ಇಬ್ಬರು ನ್ಯಾಯಾಧೀಶರು ಈಗಾಗಲೇ ರಾಜೀನಾಮೆ ನೀಡಿದ್ದಾರೆ” ಎಂದು ಕೋರ್ಟ್ ಗಮನಕ್ಕೆ ತಂದರು.

ಅಷ್ಟೇ ಅಲ್ಲದೆ, “ಮೇಲ್ಮನವಿಗಳ ವಿಚಾರಣೆ ಬಾಕಿ ಇರುವಾಗಲೇ ಮತಪಟ್ಟಿಯಿಂದ ಹೆಸರು ಕಡಿತಗೊಂಡಿರುವ ಜನರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆ, ಅನ್ನಪೂರ್ಣ ಯೋಜನೆ ಹಾಗೂ ಜಾತಿ ಪ್ರಮಾಣಪತ್ರಗಳಂತಹ ಅಗತ್ಯ ಸರ್ಕಾರಿ ಸೌಲಭ್ಯಗಳನ್ನು ಪಶ್ಚಿಮ ಬಂಗಾಳ ಸರ್ಕಾರವು ನಿರಾಕರಿಸುತ್ತಿದೆ” ಎಂದು ನ್ಯಾಯಪೀಠದ ಮುಂದೆ ಕಳವಳ ವ್ಯಕ್ತಪಡಿಸಿದರು.

ವಾದವನ್ನು ಆಲಿಸಿದ ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಅವರು ಬಿಹಾರದ ಎಸ್‌ಐಆರ್ ಪ್ರಕರಣದ ಹಳೆಯ ತೀರ್ಪನ್ನು ನೆನಪಿಸಿದರು. “ಒಂದು ವೇಳೆ ಮತಪಟ್ಟಿಯಿಂದ ವ್ಯಕ್ತಿಯ ಹೆಸರನ್ನು ಕೈಬಿಟ್ಟರೆ, ಆತನ ಪೌರತ್ವದ ಬಗ್ಗೆ ಪೌರತ್ವ ಕಾಯ್ದೆಯನ್ವಯ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದು ಮಾತ್ರ ಚುನಾವಣಾ ಆಯೋಗದ ಜವಾಬ್ದಾರಿ. ಆಯೋಗವು ಪೌರತ್ವ ನಿರ್ಧರಿಸುವ ಪ್ರಾಧಿಕಾರವಲ್ಲ” ಎಂದು‌ ಮೌಖಿಕವಾಗಿ ಹೇಳಿದರು.

“ಮತಪಟ್ಟಿಯಿಂದ ಹೆಸರು ಕಳೆದುಕೊಂಡ ತಕ್ಷಣ ತಮಗೆ ಸಿಗುವ ಕಲ್ಯಾಣ ಯೋಜನೆಗಳು ಬಂದ್ ಆಗಬಹುದು ಎಂಬ ಭೀತಿ ಸಾರ್ವಜನಿಕರಲ್ಲಿ ಮೂಡದಂತೆ ಸರ್ಕಾರ ಕ್ರಮವಹಿಸಬೇಕು” ಎಂದು ವಕೀಲ ಗೋಪಾಲ್ ಶಂಕರನಾರಾಯಣ ಮನವಿ ಮಾಡಿದರು.

ಜೊತೆಗೆ, ಮೇಲ್ಮನವಿ ನ್ಯಾಯಮಂಡಳಿಗಳು ಪ್ರತಿದಿನ ಇತ್ಯರ್ಥಪಡಿಸುವ ಪ್ರಕರಣಗಳ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ವಿನಂತಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...