SIR : ಭವಾನಿಪುರ ಕ್ಷೇತ್ರದಲ್ಲಿ ಶೇ.51.8ರಷ್ಟು ಮುಸ್ಲಿಮ್ ಮತದಾರರನ್ನು ಅನಿಶ್ಚಿತ ಸ್ಥಿತಿಯಲ್ಲಿಟ್ಟ ಆಯೋಗ

Date:

ಪಶ್ಚಿಮ ಬಂಗಾಳದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಭವಾನಿಪುರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ ‘ಆಲ್ಟ್ ನ್ಯೂಸ್’ (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜ಼ುಬೇರ್ ಅವರು ಈ ಬಗ್ಗೆ ಆತಂಕಕಾರಿ ಅಂಕಿ-ಅಂಶಗಳನ್ನು ಮುಂದಿಟ್ಟು ಕೇಂದ್ರ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR – Special Intensive Revision) ಪ್ರಕ್ರಿಯೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

- Advertisement -

ಭವಾನಿಪುರದಲ್ಲಿರುವ ಶೇ.21.9 ಮುಸ್ಲಿಮ್ ಮತದಾರರ ಪೈಕಿ ಅರ್ಧಕ್ಕಿಂತ ಹೆಚ್ಚು, ಅಂದರೆ ಶೇ.51.8 ರಷ್ಟು ಮುಸ್ಲಿಮ್ ಮತದಾರರನ್ನು SIR ಪ್ರಕ್ರಿಯೆಯ ಮೂಲಕ ಅನಿಶ್ಚಿತ ಸ್ಥಿತಿಯಲ್ಲಿ (Suspended/under adjudication) ಇಡಲಾಗಿದೆ. “ಇದರ ಅರ್ಥವೇನು ಬಲ್ಲಿರಾ?” ಎಂದು ಅವರು ಕೇಳಿರುವ ಪ್ರಶ್ನೆ, ಮತದಾರರ ಹಕ್ಕು ಕಸಿದುಕೊಳ್ಳುವ ವ್ಯವಸ್ಥಿತ ಹುನ್ನಾರದ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

SIR ಎಂದರೆ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೆ ಕೈಗೊಳ್ಳುವ ವಿಶೇಷ ಪ್ರಕ್ರಿಯೆಯಾಗಿದೆ. ನಕಲಿ ಮತದಾರರು, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರನ್ನು ತೆಗೆದುಹಾಕುವುದು ಇದರ ಮೂಲ ಉದ್ದೇಶ. ಆದರೆ, ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಈ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿದಾಗ ಹಾಗೂ ಸಾಫ್ಟ್‌ವೇರ್ ಮೂಲಕ ಪರಿಶೀಲಿಸಿದಾಗ ಲಕ್ಷಾಂತರ ನೈಜ ಮತದಾರರ ಹೆಸರುಗಳು ತಾಂತ್ರಿಕ ದೋಷಗಳು ಅಥವಾ ಸಣ್ಣಪುಟ್ಟ ದೋಷಗಳಿಂದಾಗಿ ಡಿಲೀಟ್ ಆಗಿವೆ.

ಜ಼ುಬೇರ್ ಎತ್ತಿರುವ ಪ್ರಶ್ನೆ ಮತ್ತು ಭವಾನಿಪುರ ಕ್ಷೇತ್ರ :

ಮೊಹಮ್ಮದ್ ಜ಼ುಬೇರ್ ಅವರ ಪ್ರಶ್ನೆ ಈ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ. ಈ SIR ಪ್ರಕ್ರಿಯೆ ಅಲ್ಪಸಂಖ್ಯಾತರು, ಅದರಲ್ಲೂ ನಿರ್ದಿಷ್ಟವಾಗಿ ಮುಸ್ಲಿಮ್ ಮತದಾರರನ್ನು ಗುರಿಯಾಗಿಸಿ ನಡೆಯುತ್ತಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಭವಾನಿಪುರದ ಒಟ್ಟು ಮತದಾರರಲ್ಲಿ ಮುಸ್ಲಿಮರ ಪ್ರಮಾಣ ಶೇ.21.9 ರಷ್ಟಿದೆ. ಆದರೆ, ಮತದಾರರ ಪಟ್ಟಿಯಿಂದ ವಿಚಾರಣೆಯ ನೆಪದಲ್ಲಿ ತಡೆಹಿಡಿಯಲಾದ ಅಥವಾ ಅನಿಶ್ಚಿತ ಸ್ಥಿತಿಗೆ ತಳ್ಳಲ್ಪಟ್ಟವರಲ್ಲಿ ಶೇ.51.8 ರಷ್ಟು ಮಂದಿ ಇದೇ ಸಮುದಾಯದವರಾಗಿದ್ದಾರೆ. ಇದು ಸಾಮಾನ್ಯ ತಾಂತ್ರಿಕ ದೋಷವೋ ಅಥವಾ ಉದ್ದೇಶಪೂರ್ವಕವೋ ಎಂಬ ಪ್ರಶ್ನೆಯನ್ನು ಮೂಡಿಸಿದೆ.

ಕೇವಲ ಭವಾನಿಪುರ ಮಾತ್ರವಲ್ಲ, ಮುರ್ಷಿದಾಬಾದ್, ಮಾಲ್ಡಾದಂತಹ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಜಿಲ್ಲೆಗಳಲ್ಲೇ ಅತಿ ಹೆಚ್ಚು ಮತದಾರರ ಹಕ್ಕುಗಳನ್ನು ಅನಿಶ್ಚಿತ ಸ್ಥಿತಿಯಲ್ಲಿಡಲಾಗಿದೆ ಎಂದು ಮಾಧ್ಯಮ ವರದಿಗಳು ಬಹಿರಂಗಪಡಿಸಿವೆ. ಈ ರೀತಿ ಅನಿಶ್ಚಿತ ಸ್ಥಿತಿಯಲ್ಲಿರುವ ಮತದಾರರು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಹಾಗೂ ತಮ್ಮ ಹೆಸರನ್ನು ಪಟ್ಟಿಯಲ್ಲಿ ಮರುಸೇರ್ಪಡೆ ಮಾಡಲು ಈಗ ಕೋರ್ಟು ಕಚೇರಿ ಎಂದು ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಫ್‌ಲೈನ್ ಮೇಲ್ಮನವಿ ಸಲ್ಲಿಕೆಗೆ ಸ್ಪಷ್ಟ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸಿದೆ.

ರಾಜಕೀಯ ಮಹತ್ವ ಹಾಗೂ ಆಕ್ಷೇಪಗಳೇನು :

ಭವಾನಿಪುರ ಸಾಮಾನ್ಯ ಕ್ಷೇತ್ರವಲ್ಲ, ಇದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರ ಹಾಗೂ ಟಿಎಂಸಿ (TMC) ಪಕ್ಷದ ಭದ್ರಕೋಟೆಗಳಲ್ಲಿ ಒಂದು. ಇಲ್ಲಿ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಅಳಿಸಿಹಾಕುವುದು ಅಥವಾ ಅವರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡುವುದರಿಂದ ನೇರವಾಗಿ ವಿರೋಧ ಪಕ್ಷಗಳ (ಬಿಜೆಪಿ) ಪರವಾಗಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಬಹುದು ಎನ್ನುವ ಉದ್ದೇಶದಿಂದಲೇ ಮುಸ್ಲೀಮರ ಹೆಸರುಗಳನ್ನು ಅನಿಶ್ಚಿತ ಸ್ಥಿತಿಯಲ್ಲಿ ಇಡಲಾಗಿದೆ ಎನ್ನುವುದು ಪ್ರಮುಖ ಆರೋಪವಾಗಿದೆ.

ಈಗಾಗಲೇ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಟಿಎಂಸಿ ನಾಯಕರು, ಚುನಾವಣಾ ಆಯೋಗ ಉದ್ದೇಶಪೂರ್ವಕವಾಗಿ ಬಿಜೆಪಿಯ ಹಿತಾಸಕ್ತಿಗೆ ತಕ್ಕಂತೆ ನೈಜ ಮತದಾರರನ್ನು ಕೈಬಿಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ ಭವಾನಿಪುರದ ಚುನಾವಣಾ ಅಧಿಕಾರಿಯನ್ನು ವರ್ಗಾವಣೆ ಮಾಡಿ ಪ್ರಾಮಾಣಿಕ ಅಧಿಕಾರಿಯನ್ನು ನೇಮಿಸುವಂತೆಯೂ ಟಿಎಂಸಿ ಪಟ್ಟು ಹಿಡಿದಿದೆ. ಸ್ವತಃ ಮಮತಾ ಬ್ಯಾನಿರ್ಜಿ ಅವರೇ, ಸುಪ್ರೀಂ ಕೋರ್ಟ್‌ನಲ್ಲಿ ಈ ಎಸ್‌ಐಆರ್ ಬಗ್ಗೆ ಕಾನೂನು ಸಮರಕ್ಕಿಳಿದಿದ್ದಾರೆ ಎನ್ನುವುದು ಕೂಡ ಇಲ್ಲಿ ಉಲ್ಲೇಖನೀಯ.

ಪ್ರಜಾಪ್ರಭುತ್ವದ ಅಡಿಪಾಯವೇ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು. ಮತ ಪಟ್ಟಿ ತೀವ್ರ ಪರಿಷ್ಕರಣೆಯ ಹೆಸರಿನಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯು ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ಮತದಾರರನ್ನು ಕತ್ತಲಲ್ಲಿಟ್ಟಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವಂತಿದೆ. ಜ಼ುಬೇರ್ ಅವರು ಕೇಳಿರುವ “ಇದರ ಅರ್ಥವೇನು?” ಎಂಬ ಪ್ರಶ್ನೆ ಕೇವಲ ಒಂದು ಕ್ಷೇತ್ರದ ಸಮಸ್ಯೆಯಾಗಿರದೆ, ಭಾರತದ ಚುನಾವಣಾ ಆಯೋಗದ ಪಾರದರ್ಶಕತೆಯ ಬಗ್ಗೆ ಪ್ರಶ್ನಿಸುವಂತೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...