SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ ಆರೋಪಗಳ ಮೇಲೆ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ಸಂಸದರು ಮಂಗಳವಾರ ಸಂಸತ್‌ನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಮೆರವಣಿಗೆಯನ್ನು ಪೊಲೀಸರು ತಡೆದ ಬಳಿಕ ವಿರೋಧ ಪಕ್ಷಗಳ ಹಲವು ಸಂಸದರು ರಸ್ತೆ ಮೇಲೆಯೇ ಧರಣಿ ನಡೆಸಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

- Advertisement -

ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯಾನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವು ಪ್ರಮುಖ ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ವೇಳೆ ರಾಹುಲ್ ಗಾಂಧಿ ಹಾಗೂ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಬ್ಯಾರಿಕೇಡ್ ಮೇಲೆ ಹತ್ತಿದರು. ಬಳಿಕ ಪೊಲೀಸ್‌ ಅವರನ್ನು ವಶಕ್ಕೆ ಪಡೆದರು. ನಂತರ ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ಇತರ ವಿರೋಧ ಪಕ್ಷದ ಸಂಸದರೊಂದಿಗೆ ಬಸ್‌ನಲ್ಲಿ ಕರೆದೊಯ್ಯಲಾಯಿತು. ಆದರೆ ಇಬ್ಬರೂ ಬಸ್‌ನಿಂದ ಹೊರಬಂದು ಆಕಾಶವಾಣಿ ಭವನದ ಬಳಿ ಪ್ರತಿಭಟನೆಯಲ್ಲಿ ಮತ್ತೆ ಭಾಗವಹಿಸಿದರು. ಅಖಿಲೇಶ್ ಯಾದವ್ ಮತ್ತು ಅಭಿಷೇಕ್ ಬ್ಯಾನರ್ಜಿ ಅವರನ್ನು ಮತ್ತೊಂದು ಬಸ್‌ನಲ್ಲಿ ಕರೆದೊಯ್ಯಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

‘ಗ್ಯಾನೇಶ್, ನಿಮ್‌ ಕೆಲಸ ಮುಗೀತು ಬ್ರೋ, ರಾಜೀನಾಮೆ ನೀಡಿ’

ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ Gyanesh, it’s done bro! ಎಂಬ ಬರಹವಿದ್ದ ಪೋಸ್ಟರ್ ಹಿಡಿದು ಗಮನ ಸೆಳೆದರು. ಬಳಿಕ ಇದೇ ಘೋಷಣೆಯನ್ನು ಸಾಮಾಜಿಕ ಜಾಲತಾಣ ‘X’ನಲ್ಲೂ ಹಂಚಿಕೊಂಡ ಅವರು, ʼಇದೀಗ ರಾಜೀನಾಮೆ ನೀಡುವ ಸಮಯʼ ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನಾಕಾರರು “BJP hai CEC hai”, “Vote chor, gaddi chhod” ಹಾಗೂ “Democracy not for sale” ಸೇರಿದಂತೆ ವಿವಿಧ ಘೋಷಣೆಗಳನ್ನು ಕೂಗಿದರು. ಗ್ಯಾನೇಶ್ ಕುಮಾರ್ ಅವರ ಆರ್‌ಎಸ್‌ಎಸ್ ಸಮವಸ್ತ್ರದ ರೂಪದಲ್ಲಿರುವ ಕಟೌಟ್‌ಗಳನ್ನೂ ಪ್ರತಿಭಟನೆಯಲ್ಲಿ ಪ್ರದರ್ಶಿಸಲಾಯಿತು.

237 ಸಂಸದರು ಭಾಗಿ, DMK, AAP ಗೈರು

ಸೆಪ್ಟೆಂಬರ್ 30ರಂದು ನಡೆದ INDIA ಒಕ್ಕೂಟದ 19 ವಿರೋಧ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಈ ಮೆರವಣಿಗೆ ನಡೆಸಲಾಯಿತು. ಈ 19 ಪಕ್ಷಗಳಿಗೆ ಸೇರಿದ 237 ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. ಆದರೆ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಸದರು ಮೆರವಣಿಗೆಯಲ್ಲಿ ಭಾಗವಹಿಸಲಿಲ್ಲ. ಮತ್ತೊಂದೆಡೆ, INDIA ಒಕ್ಕೂಟದ ಭಾಗವಾಗಿರದ ಬಿಜು ಜನತಾ ದಳ (BJD) ತನ್ನ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಘೋಷಿಸಿತ್ತು. ಪಕ್ಷದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರ ನಿರ್ದೇಶನದಂತೆ ಸಂಸದರು ಭಾಗವಹಿಸುತ್ತಿದ್ದಾರೆ ಎಂದು ರಾಜ್ಯಸಭೆಯ BJD ಸಂಸದೀಯ ಪಕ್ಷದ ನಾಯಕ ಮಾನಸ್ ಮಂಗರಾಜ್ ತಿಳಿಸಿದ್ದಾರೆ. SIR ಪ್ರಕ್ರಿಯೆಯಲ್ಲಿ ಗ್ಯಾನೇಶ್ ಕುಮಾರ್ ಅವರ ಪಾತ್ರದ ಆರೋಪದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ BJD ಕೂಡ ಆಗ್ರಹಿಸುತ್ತಿದೆ.

ಮೆರವಣಿಗೆ ಹಿನ್ನೆಲೆಯಲ್ಲಿ ನವದೆಹಲಿ ಜಿಲ್ಲೆಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಸತ್‌ನ ಮಕರ ದ್ವಾರದಿಂದ ಚುನಾವಣಾ ಆಯೋಗದ ಕಚೇರಿವರೆಗೆ ಮಾರ್ಗದಲ್ಲಿ ಸ್ಥಳೀಯ ಪೊಲೀಸರೊಂದಿಗೆ ಐದಕ್ಕಿಂತ ಹೆಚ್ಚು ಅರೆಸೇನಾ ಪಡೆಗಳ ಕಂಪನಿಗಳನ್ನು ನಿಯೋಜಿಸಲಾಗಿತ್ತು. ಆಕಾಶವಾಣಿ ಹಾಗೂ ಚುನಾವಣಾ ಆಯೋಗದ ಕಚೇರಿ ಸುತ್ತಮುತ್ತ Rapid Action Force (RAF) ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು.

ಚುನಾವಣಾ ಆಯೋಗದ ಮುಖ್ಯ ಪ್ರವೇಶ ದ್ವಾರ ಹಾಗೂ ಜಂತರ್ ಮಂತರ್ ಸುತ್ತಮುತ್ತ ಬಹುಹಂತದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ನವದೆಹಲಿ ಜಿಲ್ಲೆಯಲ್ಲಿ BNSS ಸೆಕ್ಷನ್ 163 ಅಡಿಯಲ್ಲಿ ನಿರ್ಬಂಧಾಜ್ಞೆಗಳು ಜಾರಿಯಲ್ಲಿದ್ದು, ಸಾರ್ವಜನಿಕ ಸಭೆ ಹಾಗೂ ಗುಂಪು ಸೇರುವುದಕ್ಕೆ ಅನುಮತಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೆರವಣಿಗೆ ಬೆಳಗ್ಗೆ ಸುಮಾರು 10.30ರಿಂದ 11 ಗಂಟೆಯ ನಡುವೆ ಆರಂಭವಾಗುವ ನಿರೀಕ್ಷೆಯಿತ್ತು. ಆದರೆ ಸಂಸದರು ಚುನಾವಣಾ ಆಯೋಗದ ಕಚೇರಿ ಕಡೆಗೆ ಸಾಗುತ್ತಿದ್ದಂತೆ ಪೊಲೀಸರು ಅವರನ್ನು ತಡೆದರು. ಬಳಿಕ ಸಂಸದರು ಅಲ್ಲಿಯೇ ಧರಣಿ ನಡೆಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆಕಾಶವಾಣಿ ಭವನದ ಗ್ರಿಲ್ ಮೇಲೆ ಹತ್ತಿದರು. ಪೊಲೀಸರು ಅವರನ್ನು ಕೆಳಗಿಳಿಯುವಂತೆ ಮನವಿ ಮಾಡಿದರೂ ಅವರು ಪ್ರತಿಭಟನಾ ಸ್ಥಳದಿಂದ ತೆರಳಲು ನಿರಾಕರಿಸಿದರು. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥರಾಗಿದ್ದರಿಂದ ಪ್ರತಿಭಟನಾ ಸ್ಥಳದಿಂದ ಹೊರಟರು.

ಕಳೆದ ಐದು ದಿನಗಳಲ್ಲಿ 9 FIR, 18 ಮಂದಿ ಬಂಧನ

ಚುನಾವಣಾ ಆಯೋಗದ ವಿರುದ್ಧದ ಪ್ರತಿಭಟನೆಗಳು ಅಕ್ಟೋಬರ್ 2ರಿಂದ ನವದೆಹಲಿ ಜಿಲ್ಲೆಯಲ್ಲಿ ನಡೆಯುತ್ತಿವೆ. ಜಂತರ್ ಮಂತರ್ ಸುತ್ತ ಕಳೆದ ಐದು ದಿನಗಳಿಂದ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು 9 FIRಗಳನ್ನು ದಾಖಲಿಸಿದ್ದಾರೆ. ನಿರ್ಬಂಧಾಜ್ಞೆ ಉಲ್ಲಂಘನೆ, ಗಲಭೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ದಾಳಿ ಸೇರಿದಂತೆ ವಿವಿಧ ಆರೋಪಗಳಡಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಸಂಬಂಧ 18 ಮಂದಿಯನ್ನು ಬಂಧಿಸಲಾಗಿದ್ದು, 300ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಗಿದೆ.

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ SIR ವಿರುದ್ಧ INDIA ಒಕ್ಕೂಟ ಅಕ್ಟೋಬರ್ 1ರಂದು ಜಂಟಿ ಕ್ರಿಯಾ ಯೋಜನೆ ಪ್ರಕಟಿಸಿತ್ತು. ದೇಶಾದ್ಯಂತ ಪ್ರತಿಭಟನೆ, ವಿರೋಧ ಪಕ್ಷಗಳ ಸಂಸದರಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಮೆರವಣಿಗೆ ಹಾಗೂ ನವೆಂಬರ್ 1ರಂದು ದೆಹಲಿಯಲ್ಲಿ ಬೃಹತ್ ರ‍್ಯಾಲಿ ನಡೆಸುವುದು ಈ ಯೋಜನೆಯ ಭಾಗವಾಗಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಆರ್‌ಜೆಡಿಯ ತೇಜಸ್ವಿ ಯಾದವ್, ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಸಿಪಿಐ(ಎಂ) ಮುಖ್ಯಸ್ಥ ಎಂ.ಎ. ಬೇಬಿ, ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಹಾಗೂ ಸಿಪಿಐನ ಪಿ. ಸಂತೋಷ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಪ್ರತಿಭಟನೆಯ ದಿನವೇ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪಶ್ಚಿಮ ಬಂಗಾಳದ SIR ಕುರಿತು ಮತ್ತೊಮ್ಮೆ ಆರೋಪಗಳನ್ನು ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಪಶ್ಚಿಮ ಬಂಗಾಳದಲ್ಲಿ SIR ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಟ್ರಿಬ್ಯೂನಲ್‌ಗಳ ನ್ಯಾಯಾಧೀಶರು ಚುನಾವಣಾ ಆಯೋಗದ ಡಿಜಿಟಲ್ ಪೋರ್ಟಲ್‌ನಲ್ಲಿನ ಗಂಭೀರ ಕೊರತೆಗಳನ್ನು ಎತ್ತಿ ತೋರಿಸಿರುವ ವರದಿಯನ್ನು ಉಲ್ಲೇಖಿಸಿದ ಅವರು, “Election Omission of Indiaಯ ಕಪಾಟಿನಿಂದ ಇನ್ನಷ್ಟು ಅಸ್ಥಿಪಂಜರಗಳು ಹೊರಬರುತ್ತಿವೆ” ಎಂದು ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ “ಸಾಮೂಹಿಕ ಮತದಾರರ ಪಟ್ಟಿಯ ತಿರುಚುವಿಕೆ ಮತ್ತು ಅಕ್ರಮದ ಪಠ್ಯಪುಸ್ತಕದ ಉದಾಹರಣೆ” ಆಗಿದ್ದು, ಅದನ್ನು CEC ಜ್ಞಾನೇಶ್ ಕುಮಾರ್ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉಲ್ಲೇಖಿಸಿ, “ಗೊಂಬೆ ಹೋಗಬೇಕು, ಆದರೆ ಅದರ ಹಿಂದಿರುವ ಇಬ್ಬರು ಸೂತ್ರಧಾರರನ್ನೂ ಹೊಣೆಗಾರರನ್ನಾಗಿ ಮಾಡಬೇಕು” ಎಂಬರ್ಥದಲ್ಲಿ ಕಾಂಗ್ರೆಸ್ ಹೇಳಿಕೆ ನೀಡಿದೆ.

ಮೆರವಣಿಗೆಗೂ ಮುನ್ನ ದೆಹಲಿಗೆ ಆಗಮಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಆಕ್ಷೇಪಗಳು ಇದೇ ಮೊದಲಲ್ಲ ಎಂದು ಹೇಳಿದರು. “ಭಾರತೀಯ ಜನತಾ ಪಕ್ಷದ ಸದಸ್ಯರು ಮಾತ್ರ ಭಾರತೀಯ ನಾಗರಿಕರು ಎಂದು ಚುನಾವಣಾ ಆಯೋಗ ಭಾವಿಸುತ್ತಿರುವಂತಿದೆ. BJP ಸದಸ್ಯರಿಗೆ ಮಾತ್ರ ಮತದಾನದ ಹಕ್ಕು ಇದೆ ಎಂಬಂತೆ ಆಯೋಗದ ನಡೆ ಹಲವು ಸಂದರ್ಭಗಳಲ್ಲಿ ಕಾಣುತ್ತಿದೆ” ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

BJPಯನ್ನು ‘ಚುನಾವಣಾ ಯಂತ್ರ’ ಎಂದು ಕರೆಯುವ ಮಾತುಗಳು ಹಿಂದಿನಿಂದಲೂ ಕೇಳಿಬರುತ್ತಿವೆ ಎಂದ ಅಖಿಲೇಶ್, ಹಣದ ಬಲದ ಜೊತೆಗೆ ಚುನಾವಣಾ ಪ್ರಕ್ರಿಯೆಯ ಹೊರತಾಗಿಯೂ ಪ್ರಭಾವ ಬೀರುವ ಆರೋಪಗಳಿವೆ ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಬಲಪ್ರಯೋಗದ ಮೂಲಕ ಮತಗಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ; ಇದಕ್ಕೂ ಮೊದಲು ಉತ್ತರ ಪ್ರದೇಶದಲ್ಲೂ ಇಂತಹ ಘಟನೆಗಳು ನಡೆದಿವೆ ಎಂದು ಅವರು ಆರೋಪಿಸಿದರು.

ಮತದಾರರ ಪಟ್ಟಿಯ SIR, ಮತದಾರರ ಹೆಸರುಗಳ ಸೇರ್ಪಡೆ–ತೆಗೆದುಹಾಕುವಿಕೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು INDIA ಒಕ್ಕೂಟ ಮತ್ತು ಇತರ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮಂಗಳವಾರದ ಮೆರವಣಿಗೆ ವೇಳೆ ಕೇಂದ್ರ ದೆಹಲಿಯಲ್ಲಿ ಸಂಸದರು ಮತ್ತು ಪೊಲೀಸರ ನಡುವೆ ಮುಖಾಮುಖಿ ಪರಿಸ್ಥಿತಿ ನಿರ್ಮಾಣವಾಯಿತು.

CEC ಗ್ಯಾನೇಶ್ ಕುಮಾರ್ ರಾಜೀನಾಮೆ ಹಾಗೂ SIR ಹಿಂಪಡೆಯುವಂತೆ ಆಗ್ರಹಿಸಿರುವ ವಿರೋಧ ಪಕ್ಷಗಳ ಈ ಪ್ರತಿಭಟನೆ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ರಾಜಕೀಯ ಮತ್ತು ಕಾನೂನು ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

SIR | ಮಲ್ಲೇಶ್ವರಂನಲ್ಲಿ ಬಿಜೆಪಿಯಿಂದ ಭಾರೀ ಅಕ್ರಮ; ಮೇಲಧಿಕಾರಿಗಳೇ ಶಾಮೀಲು ಶಂಕೆ- ʼಈ ದಿನʼಕ್ಕೆ ಸಿಕ್ಕಿದೆ ಸಾಕ್ಷ್ಯ

ಬಿಜೆಪಿಯ ಬಿಎಲ್‌ಎಗಳು ಸಲ್ಲಿಸಿರುವ ಅರ್ಜಿಗಳಲ್ಲಿ ನೂರಕ್ಕೆ ನೂರು ಹೆಸರುಗಳು ಮುಸ್ಲಿಮರದ್ದು. ಕಳೆದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...