EC ವಿವಾದ | ದಶಕಗಳ ವೈರತ್ವ ಮರೆತು ಒಂದಾದ TMC-CPIM

Date:

ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ರಾಜಕೀಯ ಎದುರಾಳಿಗಳಾಗಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಮತ್ತು CPI(M) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಚುನಾವಣಾ ಆಯೋಗದ (ECI) ವಿಶ್ವಾಸಾರ್ಹತೆ ಕುಸಿಯುತ್ತಿರುವ ಕುರಿತು ಕಳವಳ ವ್ಯಕ್ತಪಡಿಸುವ ವಿಚಾರದಲ್ಲಿ ಇಬ್ಬರೂ ನಾಯಕರು ಒಮ್ಮತಕ್ಕೆ ಬಂದಿದ್ದಾರೆ.

- Advertisement -

ಈ ಮಾತುಕತೆ ಸುಮಾರು ಮೂರು ದಶಕಗಳ ರಾಜಕೀಯ ವೈಷಮ್ಯದ ನಡುವೆ ನಡೆದಿರುವುದು ಗಮನಾರ್ಹವಾಗಿದೆ. 1997ರಲ್ಲಿ ಕಾಂಗ್ರೆಸ್‌ನ ಪಶ್ಚಿಮ ಬಂಗಾಳ ಘಟಕವು ಸಿಪಿಐ(ಎಂ) ನೇತೃತ್ವದ ಎಡರಂಗದ ವಿರುದ್ಧ ಸಾಕಷ್ಟು ಕಠಿಣ ನಿಲುವು ತಳೆಯುತ್ತಿಲ್ಲ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿದ್ದರು. ಬಳಿಕ 2011ರಲ್ಲಿ 34 ವರ್ಷಗಳ ಎಡರಂಗದ ಆಡಳಿತಕ್ಕೆ ತೆರೆ ಎಳೆದು ಅಧಿಕಾರಕ್ಕೆ ಬಂದಿದ್ದರು. ಮಮತಾ ಅವರ 15 ವರ್ಷಗಳ ಆಡಳಿತದ ಅವಧಿಯಲ್ಲೂ ಸಿಪಿಐ(ಎಂ) ಪ್ರಮುಖ ವಿರೋಧ ಪಕ್ಷವಾಗಿ ಟಿಎಂಸಿಯನ್ನು ನಿರಂತರವಾಗಿ ಟೀಕಿಸುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಸಹ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಹಲವು ಸಂದರ್ಭಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹಿನ್ನೆಲೆಯಲ್ಲಿ ಎಂ.ಎ. ಬೇಬಿ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಸಂಪರ್ಕಿಸಿದ್ದರು.

ವರದಿ ಪ್ರಕಾರ, ಕಳೆದ 10 ತಿಂಗಳಲ್ಲಿ ಸಂಧು ಮತ್ತು ಜೋಶಿ ಅವರು ಚುನಾವಣಾ ಆಯೋಗದ ಕೆಲವು ನಿರ್ಧಾರಗಳ ಬಗ್ಗೆ ಕನಿಷ್ಠ 14 ಬಾರಿ ಲಿಖಿತ ಆಕ್ಷೇಪ ದಾಖಲಿಸಿದ್ದರು. ಹೊಸ ಮತದಾರರ ಸೇರ್ಪಡೆ, ಮತದಾರರ ಹೆಸರುಗಳ ಅಳಿಸುವಿಕೆ, ಚುನಾವಣಾ ಪಟ್ಟಿಯ ನಿರ್ವಹಣೆ ಹಾಗೂ ಎಸ್‌ಐಆರ್‌ (Special Intensive Revision) ಪ್ರಕ್ರಿಯೆಗೆ ಸಂಬಂಧಿಸಿದ ನಿರ್ಧಾರಗಳ ಬಗ್ಗೆ ಅವರು ಪ್ರಶ್ನೆಗಳನ್ನು ಎತ್ತಿದ್ದರು.

ಈ ಹಿನ್ನೆಲೆಯಲ್ಲಿ ಸೆ.23ರಂದು ಬೇಬಿ ರಾಜಕೀಯ ಪಕ್ಷಗಳಿಗೆ ಪತ್ರ ಬರೆದು, “ಅಸಾಮಾನ್ಯ ಪರಿಸ್ಥಿತಿ” ಎದುರಾಗಿದ್ದು, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲ ಪಕ್ಷಗಳು ಒಟ್ಟಾಗಿ ಚರ್ಚೆ ನಡೆಸಬೇಕಿದೆ ಎಂದು ಮನವಿ ಮಾಡಿದ್ದರು. ಇಂಡಿಯಾ ಮೈತ್ರಿಕೂಟದ ಪಕ್ಷಗಳ ಜತೆಗೆ ಡಿಎಂಕೆ, ಬಿಆರ್‌ಎಸ್‌, ಆಮ್ ಆದ್ಮಿ ಪಾರ್ಟಿ, ಬಿಜೆಡಿ ಸೇರಿದಂತೆ ಮೈತ್ರಿಕೂಟದ ಹೊರಗಿನ ಪಕ್ಷಗಳಿಗೂ ಅವರು ಪತ್ರ ಕಳುಹಿಸಿದ್ದರು.

ಬೇಬಿ ಅವರ ಮನವಿಗೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಹಾಗೂ ಪ್ರಜಾಪ್ರಭುತ್ವದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಳಿಕ ಶುಕ್ರವಾರ ಇಬ್ಬರೂ ದೂರವಾಣಿಯಲ್ಲಿ ಮಾತನಾಡಿದ್ದು, ಮಾತುಕತೆ ಸೌಹಾರ್ದಯುತವಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್

ಇದೇ ವೇಳೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿ, ಇಂಡಿಯಾ ಮೈತ್ರಿಕೂಟದ ಸಭೆಯನ್ನು ಶೀಘ್ರದಲ್ಲೇ ಕರೆಯುವಂತೆ ಮನವಿ ಮಾಡಿರುವುದಾಗಿ ಮಮತಾ ಬ್ಯಾನರ್ಜಿ ಬೇಬಿ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ ಟಿಎಂಸಿ ಮತ್ತು ಸಿಪಿಐ(ಎಂ) ನಡುವೆ ಹಲವು ವರ್ಷಗಳಿಂದ ರಾಜಕೀಯ ಅಂತರ ಮುಂದುವರಿದಿತ್ತು. ಇದೀಗ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತ ಕಳವಳದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ನಾಯಕರ ನಡುವೆ ನಡೆದ ಈ ನೇರ ಮಾತುಕತೆ ರಾಜಕೀಯವಾಗಿ ಗಮನ ಸೆಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಅರ್ನಾಬ್ ಗೋಸ್ವಾಮಿ ವಿರುದ್ಧ ₹45 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂಗ್ರೆಸ್ ಸಂಸದ

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು...

ಲಾಪತಾ ಲೇಡೀಸ್: ಮನೆ ಒಳಗೂ ಹೊರಗೂ ಕಳೆದುಹೋಗುವ ಮಹಿಳೆಯರ ಹುಡುಕಾಟ

'ಲಾಪತಾ ಲೇಡೀಸ್' ಕೇವಲ ರೈಲಿನಲ್ಲಿ ಕಾಣೆಯಾದ ಇಬ್ಬರು ವಧುಗಳ ಕಥೆಯಲ್ಲ. ಮಹಿಳೆ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...