SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಸಿಇಸಿ ಮೇಲೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

ಮಂಗಳವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಮಾತನಾಡಿದ ಖರ್ಗೆ, ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದರ ಜತೆಗೆ ದೇಶಾದ್ಯಂತ ಹೋರಾಟ ನಡೆಸುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

SIRಗೆ ಸಂಬಂಧಿಸಿದಂತೆ ಕಾಂಗ್ರೆಸ್ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಮತದಾರರ ಪಟ್ಟಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು, ಪಟ್ಟಿಯಿಂದ ಹೆಸರು ಕೈಬಿಡಲಾದ ಪ್ರತಿಯೊಬ್ಬ ಮತದಾರನಿಗೂ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಮತ್ತು ಎಲ್ಲ ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ಸರಳ ಸ್ವರೂಪದಲ್ಲಿ ಸಮಯಕ್ಕೆ ಸರಿಯಾಗಿ ಒದಗಿಸಬೇಕು ಎಂದು ಖರ್ಗೆ ಆಗ್ರಹಿಸಿದರು.

ಗಂಭೀರ ಅಸಂಗತತೆಗಳು ಕಂಡುಬರುವ ಕಡೆ ಸ್ವತಂತ್ರ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿನ ಮಾಹಿತಿಯನ್ನು ಮುಚ್ಚಿಡಲಾಗುತ್ತಿದೆ ಎಂಬ ಅನುಮಾನ ಯಾರಿಗೂ ಬಾರದಂತೆ ಸಂಪೂರ್ಣ ಪಾರದರ್ಶಕತೆ ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು.

ಚುನಾವಣಾ ಆಯೋಗದ ಇಬ್ಬರು ಆಯುಕ್ತರು ಸಿಇಸಿಯ ಕೆಲವು ಕ್ರಮಗಳನ್ನು ‘ಅನಿಯಂತ್ರಿತ ಮತ್ತು ಅಸಮಂಜಸ’ ಎಂದು ಆಕ್ಷೇಪಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗ್ಯಾನೇಶ್ ಕುಮಾರ್ ಅವರು ಸಿಇಸಿ ಹುದ್ದೆಯಲ್ಲಿ ಮುಂದುವರಿಯುವ ಹಕ್ಕು ಹೊಂದಿಲ್ಲ. ಅವರನ್ನು ತಕ್ಷಣ ತೆಗೆದುಹಾಕಬೇಕು ಎಂದು ಆಗ್ರಹಿಸಿದರು.

ಚುನಾವಣಾ ಪಟ್ಟಿಯಲ್ಲಿ ಪಾರದರ್ಶಕತೆ, ಚುನಾವಣಾ ಪ್ರಕ್ರಿಯೆಯ ನಿಷ್ಪಕ್ಷಪಾತತೆ ಹಾಗೂ ಚುನಾವಣಾ ಸಂಸ್ಥೆಗಳ ಸ್ವಾಯತ್ತತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯನಿರ್ವಹಿಸಲಿದೆ. ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದರ ಜತೆಗೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಖರ್ಗೆ ಘೋಷಿಸಿದರು. ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಸಂಬಂಧಿಸಿದ ವಿಷಯ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಚುನಾವಣಾ ಆಯೋಗದ ಇಬ್ಬರು ಆಯುಕ್ತರು SIR ಸೇರಿದಂತೆ ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ ಹಾಗೂ ಚುನಾವಣಾ ಪಟ್ಟಿಗೆ ಸಂಬಂಧಿಸಿದ ಕೆಲವು ಅಕ್ರಮಗಳ ಬಗ್ಗೆ ಹಲವು ಬಾರಿ ಲಿಖಿತ ಆಕ್ಷೇಪ ದಾಖಲಿಸಿರುವ ಕುರಿತು ವರದಿಗಳು ಪ್ರಕಟವಾಗಿವೆ.

CEC ಯನ್ನು ವಜಾ ಮಾಡಬಹುದೇ?

ಮುಖ್ಯ ಚುನಾವಣಾ ಆಯುಕ್ತರನ್ನು (CEC) ಹುದ್ದೆಯಿಂದ ತೆಗೆದುಹಾಕುವ ಪ್ರಕ್ರಿಯೆಗೆ ಸಂವಿಧಾನದಲ್ಲಿ ವಿಶೇಷ ರಕ್ಷಣೆ ಇದೆ. CEC ಅವರನ್ನು ಸುಲಭವಾಗಿ ಸರ್ಕಾರ ಅಥವಾ ಚುನಾವಣಾ ಆಯೋಗವೇ ನೇರವಾಗಿ ವಜಾಗೊಳಿಸಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯನ್ನು ತೆಗೆದುಹಾಕಲು ಇರುವ ಪ್ರಕ್ರಿಯೆಯಂತೆಯೇ, ಸಂಸತ್ತಿನಲ್ಲಿ ವಿಶೇಷ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ.

CEC ವಿರುದ್ಧ ದುರ್ವರ್ತನೆ ಅಥವಾ ಅಸಮರ್ಥತೆ ಸೇರಿದಂತೆ ಗಂಭೀರ ಆರೋಪಗಳಿದ್ದಲ್ಲಿ, ಸಂಸತ್ತಿನ ಎರಡೂ ಸದನಗಳಲ್ಲಿ ನಿರ್ದಿಷ್ಟ ಬಹುಮತದೊಂದಿಗೆ ನಿರ್ಣಯ ಅಂಗೀಕಾರವಾಗಬೇಕು. ಬಳಿಕ ರಾಷ್ಟ್ರಪತಿಗಳು ಅವರನ್ನ ಹುದ್ದೆಯಿಂದ ತೆಗೆದುಹಾಕುವ ಆದೇಶ ಹೊರಡಿಸಬಹುದು. ಆದರೆ, ಇತರ ಚುನಾವಣಾ ಆಯುಕ್ತರನ್ನು CECಯ ಶಿಫಾರಸಿಲ್ಲದೆ ಇದೇ ರೀತಿಯಲ್ಲಿ ತೆಗೆದುಹಾಕಲು ಸಾಧ್ಯವಿಲ್ಲ ಎಂಬ ವಿಶೇಷ ವ್ಯವಸ್ಥೆಯೂ ಇದೆ.

ಇದನ್ನೂ ಓದಿ: SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಮತದಾರರ ಪಟ್ಟಿಯಿಂದ ಹೆಸರು ಕಳೆದುಹೋದರೆ ಏನು ಮಾಡಬೇಕು?

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ, ಮೊದಲು ECIಯ ಅಧಿಕೃತ ಮತದಾರರ ಸೇವಾ ಪೋರ್ಟಲ್‌ನಲ್ಲಿ ಹೆಸರು ಪರಿಶೀಲಿಸಬಹುದು. ECI ವೆಬ್‌ಸೈಟ್, Voter Helpline ಸೇವೆ ಅಥವಾ 1950 ಸಹಾಯವಾಣಿ ಮೂಲಕವೂ ಮತದಾರರ ನೋಂದಣಿ ಸ್ಥಿತಿಯನ್ನು ಪರಿಶೀಲಿಸಬಹುದು.

ಹೆಸರು ತಪ್ಪಾಗಿ ಕೈಬಿಡಲಾಗಿದೆ ಎಂದು ಕಂಡುಬಂದರೆ, ಸಂಬಂಧಿತ ಚುನಾವಣಾ ನೋಂದಣಿ ಅಧಿಕಾರಿ (ERO) ಮುಂದೆ ಆಕ್ಷೇಪ ಅಥವಾ ಅರ್ಜಿ ಸಲ್ಲಿಸುವ ಅವಕಾಶವಿದೆ. ಹೊಸದಾಗಿ ಹೆಸರು ಸೇರ್ಪಡೆಗೆ Form 6, ಹೆಸರು ಅಳಿಸುವಿಕೆ ಕುರಿತು ಆಕ್ಷೇಪಕ್ಕೆ Form 7, ವಿಳಾಸ ಬದಲಾವಣೆ ಅಥವಾ ಮತದಾರರ ವಿವರ ತಿದ್ದುಪಡಿಗೆ Form 8 ಬಳಸಲಾಗುತ್ತದೆ. SIR ಪ್ರಕ್ರಿಯೆಯಲ್ಲಿಯೂ ಹೆಸರು ಸೇರ್ಪಡೆ ಅಥವಾ ಕೈಬಿಡುವಿಕೆ ಕುರಿತು ನೋಟಿಸ್, ಆಕ್ಷೇಪ ಮತ್ತು ವಿಚಾರಣೆಗೆ ಅವಕಾಶ ನೀಡುವ ಪ್ರಕ್ರಿಯೆಯನ್ನು ECI ವಿವರಿಸಿದೆ. ಮತದಾರರ ಗುರುತಿನ ಚೀಟಿ (EPIC) ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಮತ ಚಲಾಯಿಸಲು ಸಾಧ್ಯವಿಲ್ಲ. ಮತದಾನದ ಹಕ್ಕಿಗೆ ಹೆಸರು ಚುನಾವಣಾ ಪಟ್ಟಿಯಲ್ಲಿ ಇರುವುದು ಮುಖ್ಯ. ಇದೀಗ ಖರ್ಗೆ ಅವರು SIR ಸಂಬಂಧಿಸಿದಂತೆ ಮುಂದಿಟ್ಟಿರುವ ಬೇಡಿಕೆಗಳೂ ಇವೇ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...