SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

Date:

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಹಾಲಿ ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳನ್ನು ತಕ್ಷಣವೇ ವಿಸರ್ಜಿಸಿ, ಹಳೆಯ ಮತದಾರರ ಪಟ್ಟಿಯ ಆಧಾರದಲ್ಲೇ ಹೊಸದಾಗಿ ಪಾರದರ್ಶಕ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

- Advertisement -

“ಭಾರತೀಯ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಂಪೂರ್ಣ ಕಾನೂನುಬಾಹಿರ ಹಾಗೂ ಅಕ್ರಮಗಳಿಂದ ಕೂಡಿದೆ. ಎಸ್‌ಐಆರ್ ಎನ್ನುವುದು ಮತದಾರರ ಹಕ್ಕುಗಳನ್ನು ಕಸಿಯುವ ವೋಟ್ ಡೆಮೊನೆಟೈಸೇಶನ್ (ಮತಗಳ ಅಪಮೌಲ್ಯೀಕರಣ) ಯೋಜನೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಇದನ್ನೂ ಓದಿ: ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

“ಎಸ್‌ಐಆರ್‌ ಪ್ರಕ್ರಿಯೆ ಹೆಸರಿನಲ್ಲಿ ಕೋಟ್ಯಂತರ ಅರ್ಹ ಮತದಾರರನ್ನು ಅದರಲ್ಲೂ ವಿಶೇಷವಾಗಿ ಬಡವರು, ದಲಿತರು ಹಾಗೂ ಹಿಂದುಳಿದ ವರ್ಗದವರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಆದ್ದರಿಂದ ಪ್ರಸ್ತುತ ಮತದಾರರ ಪಟ್ಟಿಯ ಆಧಾರದಲ್ಲಿ ನಡೆದ ಚುನಾವಣೆಗಳು ಶಂಕೆಗೆ ಈಡಾಗಿದೆ. ಈ ನಿಟ್ಟಿನಲ್ಲಿ ಶಾಸನಸಭೆಗಳನ್ನು ರದ್ದುಗೊಳಿಸಿ ಹೊಸದಾಗಿ ಮತದಾನ ಪ್ರಕ್ರಿಯೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಇನ್ನು ಈ ಪ್ರಕ್ರಿಯೆ ಮತ್ತು ಚುನಾವಣೆ ಸಂಬಂಧಿತ ಇತರೆ ವಿಚಾರಗಳಲ್ಲಿ ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡಿರು ಆರೋಪ ಹೊತ್ತಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧವೂ ಮಲ್ಲಿಕಾರ್ಜುನ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈಗೊಂಬೆಯಾಗಿದೆ. ಆದ್ದರಿಂದ ಸಿಇಸಿ ಗ್ಯಾನೇಶ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...