SIR ಕಾನೂನುಬದ್ಧ, ಆದರೆ ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ: ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸ ಕಳವಳ

Date:

ಭಾರತೀಯ ಚುನಾವಣಾ ಆಯೋಗವು (ಇಸಿಐ) ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಕಾನೂನುಬದ್ಧವಾಗಿದ್ದರೂ ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಪ್ರಥಮ ‘ಜಗ್ದೀಪ್ ಛೋಕರ್ ಸ್ಮಾರಕ ಉಪನ್ಯಾಸ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಸ್ತುತ ಜಾರಿಯಲ್ಲಿರುವ SIR ಪ್ರಕ್ರಿಯೆಯಿಂದ ದೇಶಾದ್ಯಂತ ಲಕ್ಷಾಂತರ ಹಾಗೂ ಕೋಟ್ಯಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆರವುಗೊಳಿಸಿರುವುದನ್ನು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನೂ ಓದಿ: ಮತದಾನದ ವಿವರ ಪ್ರಕಟಿಸಲು 11 ದಿನ ವಿಳಂಬ; ಚುನಾವಣಾ ಆಯೋಗದ ಮೇಲಿನ ಗುಮಾನಿಗಳೇನು?

ಈ ಪ್ರಕ್ರಿಯೆಯನ್ನು ನ್ಯಾಯಾಂಗವು ಕಾನೂನುಬದ್ಧವೆಂದು ಎತ್ತಿ ಹಿಡಿದಿರಬಹುದು. ಆದರೆ ನ್ಯಾಯ ಎನ್ನುವುದು ಕೇವಲ ಕಾನೂನಿನ ಅಕ್ಷರಗಳನ್ನು ಜಾರಿಗೊಳಿಸುವುದಷ್ಟೇ ಅಲ್ಲ, ಅದರ ಆಶಯ ಮತ್ತು ಆತ್ಮವನ್ನು ಎತ್ತಿಹಿಡಿಯುವುದಾಗಿದೆ ಎಂದು ಲವಾಸ ಪ್ರತಿಪಾದಿಸಿದ್ದಾರೆ.

ಸಂವಿಧಾನಾತ್ಮಕ ಮತ್ತು ಶಾಸನಬದ್ಧ ಸಂಸ್ಥೆಗಳು ‘ಬಲವುಳ್ಳದ್ದೇ ಸರಿ’ ಎಂಬ ಮಧ್ಯಕಾಲೀನ ಮನಸ್ಥಿತಿಯಲ್ಲಿ ವರ್ತಿಸುತ್ತಿವೆ ಎಂದು ತೀವ್ರವಾಗಿ ಟೀಕಿಸಿದರು. ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅನುಕಂಪ ಮತ್ತು ನೈತಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ದುರ್ಬಲ ವರ್ಗದವರ ಧ್ವನಿಗೆ ಕಿವಿಗೊಡಬೇಕು ಎಂದು ಮನವಿ ಮಾಡಿದರು.

ಈ ಹೊಸ ಪರಿಷ್ಕರಣಾ ವಿಧಾನದಿಂದಾಗಿ ಸಾಮಾನ್ಯ ನಾಗರಿಕರಲ್ಲಿ, ವಿಶೇಷವಾಗಿ ಬಡ ಮತ್ತು ಹಿಂದುಳಿದ ವರ್ಗದ ಮತದಾರರಲ್ಲಿ ತಮ್ಮ ಮೂಲಭೂತ ಹಕ್ಕಿನ ಕುರಿತು ತೀವ್ರ ಆತಂಕ ಹಾಗೂ ಗೊಂದಲ ನಿರ್ಮಾಣವಾಗಿದೆ. ಈವರೆಗೆ ಮತದಾನದ ಹಕ್ಕು ಕಳೆದುಕೊಂಡವರಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರಾಗಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...