SIR ಮುಸ್ಲಿಮರನ್ನು ಗುರಿಯಾಗಿಸುವ ಅಸ್ತ್ರವಾಗಬಾರದು: ಮಾಜಿ CEC ಖುರೇಷಿ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಸ್ಲಿಂ ಮತದಾರರನ್ನು ಗುರಿಯಾಗಿಸಲು ಬಳಸಬಾರದು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌.ವೈ. ಖುರೇಷಿ ಎಚ್ಚರಿಸಿದ್ದಾರೆ.

- Advertisement -

ಭುವನೇಶ್ವರದಲ್ಲಿ ಶನಿವಾರ ನಡೆದ 14ನೇ ಆವೃತ್ತಿಯ ಒಡಿಶಾ ಸಾಹಿತ್ಯೋತ್ಸವದಲ್ಲಿ ಪತ್ರಕರ್ತೆ ಕಾವೇರಿ ಬಮ್ಜಾಯಿ ಅವರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಮತ್ತು ಪೌರತ್ವದ ಕುರಿತು ನಡೆಯುತ್ತಿರುವ ಚರ್ಚೆ ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಸ್ವರೂಪದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಮುಸ್ಲಿಮರನ್ನು ‘ಬಾಂಗ್ಲಾದೇಶಿ ನುಸುಳುಕೋರರು’ ಎಂದು ಬಿಂಬಿಸುವ ರಾಜಕೀಯ ಹೇಳಿಕೆಗಳ ನಡುವೆ, SIR ಪ್ರಕ್ರಿಯೆಯ ಮೂಲಕ ಅವರನ್ನು ಮತದಾರರ ಪಟ್ಟಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಹೊರಗಿಡುವ ಅಪಾಯವಿದೆ ಎಂಬ ಆತಂಕ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖುರೇಷಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಈ ಹಿಂದೆ ಕೂಡ SIR ಪ್ರಕ್ರಿಯೆಯನ್ನು ಖುರೇಷಿ ಟೀಕಿಸಿದ್ದರು. ಈ ಪ್ರಕ್ರಿಯೆಯ ಗಮನ ಮತದಾರರನ್ನು ಸೇರಿಸುವುದಕ್ಕಿಂತ ಅವರನ್ನು ಪಟ್ಟಿಯಿಂದ ಹೊರಗಿಡುವುದರತ್ತ ಹೆಚ್ಚು ಕೇಂದ್ರೀಕೃತವಾಗಿದೆ ಎಂದು ಅವರು ಆಕ್ಷೇಪಿಸಿದ್ದರು. ವಿದೇಶಿಗರನ್ನು ಪತ್ತೆಹಚ್ಚುವ ನೆಪದಲ್ಲಿ ಲಕ್ಷಾಂತರ ಮತದಾರರು ದಾಖಲೆಗಳನ್ನು ಒದಗಿಸಿ, ಸುದೀರ್ಘ ಪರಿಶೀಲನಾ ಪ್ರಕ್ರಿಯೆಗೆ ಒಳಗಾಗಬೇಕಾದ ಅಗತ್ಯವೇನು ಎಂದೂ ಅವರು ಪ್ರಶ್ನಿಸಿದ್ದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಸಂವಿಧಾನ ನೀಡಿರುವ ಹಕ್ಕು. ಅದನ್ನು ಚುನಾವಣಾ ಆಯೋಗ ನೀಡುವ ಯಾವುದೋ ಅನುಕೂಲ ಅಥವಾ ದಯೆಯಂತೆ ಪರಿಗಣಿಸಬಾರದು ಎಂದು ಖುರೇಷಿ ಹೇಳಿದ್ದಾರೆ.

ತಮ್ಮ ಸಾರ್ವಜನಿಕ ಜೀವನ ಹಾಗೂ ವೈಯಕ್ತಿಕ ಗುರುತಿನ ಕುರಿತು ಮಾತನಾಡಿದ ಅವರು, ಭಾರತ ಸಾಂಪ್ರದಾಯಿಕವಾಗಿ ವಿಶ್ವದ ಅತ್ಯಂತ ಜಾತ್ಯತೀತ ರಾಷ್ಟ್ರಗಳಲ್ಲಿ ಒಂದಾಗಿತ್ತು. ವಿಭಜನೆಯ ಸಂದರ್ಭದಲ್ಲಿ ಧಾರ್ಮಿಕ ಆಧಾರದ ಮೇಲೆ ಪಾಕಿಸ್ತಾನವನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಭಾರತ ಜಾತ್ಯತೀತ ರಾಷ್ಟ್ರವಾಗಿ ಉಳಿಯುವ ಆಯ್ಕೆಯನ್ನು ಮಾಡಿಕೊಂಡಿತು ಎಂದು ಅವರು ನೆನಪಿಸಿದರು.

ಆದರೆ, ಇಂದು ಜಾತ್ಯತೀತತೆಯೇ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಇದು ತಾತ್ಕಾಲಿಕ ಹಂತವಾಗಿರಲಿ ಹಾಗೂ ಅಂತಿಮವಾಗಿ ‘ಭಾರತದ ಆತ್ಮ’ ತನ್ನ ಮೂಲ ಸ್ವರೂಪವನ್ನು ಮರಳಿ ಪಡೆಯಲಿ ಎಂಬ ಆಶಯ ವ್ಯಕ್ತಪಡಿಸಿದರು.

ಮುಸ್ಲಿಮರ ವಿರುದ್ಧದ ದ್ವೇಷದ ವಾತಾವರಣಕ್ಕೆ ಕಾರಣವಾಗಿರುವ ವಿಚಾರಗಳನ್ನು ಅರ್ಥಮಾಡಿಕೊಳ್ಳುವ ಉದ್ದೇಶದಿಂದ ಮುಸ್ಲಿಂ ನಿಯೋಗವೊಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ್ದ ಸಂದರ್ಭವನ್ನೂ ಖುರೇಷಿ ನೆನಪಿಸಿಕೊಂಡರು.

ಇದನ್ನೂ ಓದಿ: SIR ಕಾನೂನುಬದ್ಧ, ಆದರೆ ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ: ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸ ಕಳವಳ

ಮುಸ್ಲಿಮರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಭಾಷಣ ಹಾಗೂ ಕೋಮು ಧ್ರುವೀಕರಣಕ್ಕೆ ಕಾರಣವಾಗಿರುವ ನಿರೂಪಣೆಯ ಮೂಲವನ್ನು ಅರ್ಥಮಾಡಿಕೊಂಡು, ಅದನ್ನು ಪರಿಹರಿಸುವ ಉದ್ದೇಶದಿಂದ ನಿಯೋಗ ಸಂವಾದ ನಡೆಸಿತ್ತು ಎಂದು ಅವರು ಹೇಳಿದರು.

ಮುಸ್ಲಿಮರ ವಿರುದ್ಧ ನಡೆಯುತ್ತಿದೆ ಎನ್ನಲಾದ ದ್ವೇಷದ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರವಾಗಿ ಚರ್ಚಿಸುವ ಸಾಧ್ಯತೆ ಬಗ್ಗೆ ಕೇಳಿದಾಗಲೂ, ಇಂತಹ ವಿಚಾರಗಳನ್ನು ಪರಿಹರಿಸಲು ಸಂವಾದವೇ ಮುಖ್ಯ ಎಂದು ಖುರೇಷಿ ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...