SIR | ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

Date:

ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್ ಅವರಿಗೆ ತಾಯ್ನಾಡಿನಲ್ಲೇ ತಮ್ಮ ನಾಗರಿಕ ಗುರುತನ್ನು ಸಾಬೀತುಪಡಿಸಲು ಹೋರಾಟ ನಡೆಸಬೇಕಾದ ಗಂಭೀರ ಪರಿಸ್ಥಿತಿ ಎದುರಾಗಿದೆ. ರಾಜಗೋಪಾಲ್ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ಯಾಲಿಗಂಜ್ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದರು. ಆದರೆ, ಇತ್ತೀಚೆಗೆ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತಪಟ್ಟಿಯಿಂದ ಅವರ ಹೆಸರನ್ನು ಕಿತ್ತುಹಾಕಲಾಗಿದೆ. ಪರಿಣಾಮ, ಅವರ ಪಾಸ್‌ಪೋರ್ಟ್ ನವೀಕರಣದ ಅರ್ಜಿಗೆ ಕೋಲ್ಕತ್ತಾ ಪೊಲೀಸರು ಪ್ರತಿಕೂಲ ವರದಿ (Adverse Report) ನೀಡಿದ್ದಾರೆ. ಈಗ ತಾವು ತಮ್ಮ ನಾಗರಿಕತ್ವವನ್ನು ಸಾಬೀತು ಮಾಡಲು ಹೋರಾಡುವಂತಾಗಿದೆ ಎಂದು ರಾಜಗೋಪಾಲ್ ಅವರು ಆತಂಕ ವ್ಯಕ್ತಪಡಿಡಿಸಿದ್ದಾರೆ.

- Advertisement -

“ಇದೇ ವರ್ಷದ ಮಾರ್ಚ್‌ನಲ್ಲಿ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನನ್ನ ತಂದೆಯ ಹೆಸರನ್ನು 2002ರ ಮತಪಟ್ಟಿಯಲ್ಲಿ ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂಬ ಕಾರಣ ನೀಡಿ, ‘ತಾರ್ಕಿಕ ವ್ಯತ್ಯಾಸ’ದ (ಲಾಜಿಕಲ್ ಡಿಸ್ಕ್ರಿಪೆನ್ಸಿ) ಆಧಾರದಲ್ಲಿ ನನ್ನ ಹೆಸರನ್ನು ಮತದಾರ ಪಟ್ಟಿಯಿಂದ ಅಳಿಸಿ ಹಾಕಲಾಗಿದೆ. ನನ್ನ ತಂದೆ ಒಬ್ಬ ಗಾಂಧಿವಾದಿ, ನಿವೃತ್ತ ಪ್ರೊಫೆಸರ್ ಮತ್ತು ಕೇರಳದ ಗಾಂಧಿ ಸ್ಮಾರಕ ನಿಧಿಯ ಮಾಜಿ ರಾಜ್ಯ ಕಾರ್ಯದರ್ಶಿಯಾಗಿದ್ದರು. ಅವರು 2016ರಲ್ಲಿ ನಿಧನರಾದರು. ನಾನು ನನ್ನ ಎಸ್ಎಸ್‌ಎಲ್‌ಸಿ ಅಂಕಪಟ್ಟಿಯನ್ನು ಸಲ್ಲಿಸಿದ್ದರೂ, ಅಧಿಕಾರಿಗಳು ಯಾವುದೇ ಕಾರಣ ನೀಡದೆ ನನ್ನ ಅಪೀಲನ್ನು ತಿಸ್ಕರಿಸಿದ್ದಾರೆ. ಈಗ, ಸುಪ್ರೀಂ ಕೋರ್ಟ್‌ ರಚಿಸಿರುವ ನ್ಯಾಯಮಂಡಳಿಯ ಎದುರು ನನ್ನ ಅಪೀಲು ಅರ್ಜಿ ವಿಚಾರಣೆಗೆ ಬಾಕಿ ಇದೆ. ಈ ಪರಿಸ್ಥಿತಿಯಲ್ಲಿ ನಾನು ನನ್ನ ಪಾಸ್‌ಪೋರ್ಟ್‌ಅನ್ನು ನವೀಕರಣ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ರಾಜಗೋಪಾಲ್‌ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮತದಾರರ ಪಟ್ಟಿಯಿಂದ ಹೆಸರು ಕಿತ್ತುಹಾಕಿದ ಪರಿಣಾಮವಾಗಿ ರಾಜಗೋಪಾಲ್ ಅವರ ಪಾಸ್‌ಪೋರ್ಟ್ ನವೀಕರಣಕ್ಕೆ ದೊಡ್ಡ ಕಂಟಕ ಎದುರಾಗಿದೆ. 2026ರ ಮಾರ್ಚ್ 19ರಂದು ಅವರ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೂ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ ಪೊಲೀಸರು ವೆರಿಫಿಕೇಶನ್ ಪ್ರಕ್ರಿಯೆಯನ್ನು ಅಂತಿಮಗೊಳಿಸಿಲ್ಲ. ಬದಲಾಗಿ, ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿರುವುದನ್ನು ಉಲ್ಲೇಖಿಸಿ ಕೋಲ್ಕತ್ತಾ ಪೊಲೀಸರು ಪ್ರತಿಕೂಲ ವರದಿ ಕಳುಹಿಸಿದ್ದಾರೆ. ಪರಿಣಾಮ, ಪಾಸ್‌ಪೋರ್ಟ್‌ಅನ್ನು ನವೀಕರಿಸಲು ಸಾಧ್ಯವಿಲ್ಲ ಎಂದು ಪಾಸ್‌ಪೋರ್ಟ್ ಪ್ರಾಧಿಕಾರವು ರಾಜಗೋಪಾಲ್ ಅವರಿಗೆ ಅಧಿಕೃತವಾಗಿ ತಿಳಿಸಿದೆ.

ಈ ಲೇಖನ ಓದಿದ್ದೀರಾ?: ಭಾರತೀಯರ ಬೆನ್ನತ್ತಿದೆ ‘ಪೌರತ್ವ’ ಪ್ರಶ್ನೆ; SIR ಜೊತೆಗೆ ಪಾಸ್‌ಪೋರ್ಟ್‌ ತಂದ ಅಸ್ಮಿತೆಯ ಆತಂಕ!

“ತಮಗೆ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ತಕ್ಷಣ ಹಾಜರಾಗಲು ಸೂಚಿಸಲಾಗಿದೆ. ಆದರೂ, ಅಪಾಯಿಂಟ್‌ಮೆಂಟ್ ಸಿಕ್ಕಿರುವುದು ಮಾತ್ರ ಜುಲೈ 17ಕ್ಕೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಾಸ್‌ಪೋರ್ಟ್ ಬಿಕ್ಕಟ್ಟಿನಿಂದಾಗಿ, ಕ್ಯಾಲಿಫೋರ್ನಿಯಾದಲ್ಲಿ ಪತ್ರಕರ್ತೆಯಾಗಿರುವ ತಮ್ಮ ಮಗಳ ವಿವಾಹಕ್ಕೂ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸದ್ಯ ನಾಗರಿಕ ಹಕ್ಕುಗಳ ಅನಿಶ್ಚಿತ ಸ್ಥಿತಿಯಲ್ಲಿರುವ ರಾಜಗೋಪಾಲ್ ಅವರು, ತಮ್ಮ ಹೆತ್ತವರ ಅಸ್ತಿತ್ವವನ್ನು ಸಾಬೀತುಪಡಿಸಲು ದಶಕಗಳಷ್ಟು ಹಳೆಯ ದಾಖಲೆಗಳನ್ನು ಮರುಸೃಷ್ಟಿಸುವ ಹೋರಾಟದಲ್ಲಿ ತೊಡಗಿದ್ದಾರೆ. 1965ರಲ್ಲಿ ಅವರ ತಾಯಿ ಬೋಧಿಸುತ್ತಿದ್ದ ಕಾಲೇಜು ಮತ್ತು 1959ರಲ್ಲಿ ಅವರು ಉತ್ತೀರ್ಣರಾದ ಶಾಲೆಗೆ ಪತ್ರ ಬರೆದು ದಾಖಲೆಗಳನ್ನು ಕೋರುತ್ತಿದ್ದಾರೆ. ಹಾಗೆಯೇ ಕೇರಳದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಕೋಮುವಾದದ ವಿರುದ್ಧ ತಮ್ಮ ತಂದೆ ನಡೆಸಿದ ಹೋರಾಟಗಳ ಪತ್ರಿಕಾ ವರದಿಗಳು ಅಥವಾ ಛಾಯಾಚಿತ್ರಗಳಿಗಾಗಿ ಹಳೆಯ ಹೋರಾಟಗಾರರನ್ನು ಸಂಪರ್ಕಿಸುತ್ತಿದ್ದಾರೆ.

“ಇಡೀ ವೃತ್ತಿಜೀವನವನ್ನು ಪತ್ರಿಕೋದ್ಯಮದಲ್ಲೇ ಕಳೆದು, ದೇಶದ ಪ್ರಸಿದ್ಧ ಪತ್ರಿಕೆಯೊಂದರ ಸಂಪಾದಕರಾಗಿದ್ದ ತಮಗೇ ಇಂತಹ ಪರಿಸ್ಥಿತಿ ಎದುರಾಗಿರುವಾಗ, ಸಮಾಜದ ಕಟ್ಟಕಡೆಯ ಮತ್ತು ಸೌಲಭ್ಯವಂಚಿತ ಜನರ ಸ್ಥಿತಿ ಏನಾಗಿರಬೇಡ” ಎಂದು ರಾಜಗೋಪಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...