SIR | ಮುಸ್ಲಿಮರು, ಅಲ್ಪಸಂಖ್ಯಾತರ ಮೇಲೆ ತೀವ್ರ ಪರಿಣಾಮ; ವಿಶ್ವಸಂಸ್ಥೆ ಕಳವಳ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ಹೆಚ್ಚಿನ ಪರಿಣಾಮವನ್ನು ಅಲ್ಪಸಂಖ್ಯಾತ ಸಮುದಾಯಗಳು, ವಿಶೇಷವಾಗಿ ಮುಸ್ಲಿಮರು ಮತ್ತು ಬಂಗಾಳಿ ಮೂಲದ ಜನರು ಎದುರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಮೂವರು ವಿಶೇಷ ವರದಿಗಾರರು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಅಲ್ಪಸಂಖ್ಯಾತರ ವಿಷಯಗಳ ವಿಶೇಷ ವರದಿಗಾರ ನಿಕೋಲಸ್ ಲೆವ್ರಾಟ್, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಶೇಷ ವರದಿಗಾರ ಐರಿನ್ ಖಾನ್ ಹಾಗೂ ಧರ್ಮ ಅಥವಾ ನಂಬಿಕೆಯ ಸ್ವಾತಂತ್ರ್ಯದ ವಿಶೇಷ ವರದಿಗಾರ ನಜಿಲಾ ಘಾನಿಯಾ ಅವರು ಈ ಕುರಿತು ಕೇಂದ್ರ ಸರ್ಕಾರಕ್ಕೆ ಜಂಟಿ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

“ಎಸ್‌ಐಆರ್ ಪ್ರಕ್ರಿಯೆಯ ಸಂದರ್ಭದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರದ ಹಿರಿಯ ಪ್ರತಿನಿಧಿಗಳು ಮುಸ್ಲಿಮರು, ಬಂಗಾಳಿಗಳು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ತಾರತಮ್ಯಪೂರಿತ ಹೇಳಿಕೆಗಳನ್ನು ನೀಡಿರುವುದಾಗಿ ವರದಿಯಾಗಿದೆ. ‘ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು’ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಹೇಳಿಕೆಗಳು ಭಾರತೀಯ ಮುಸ್ಲಿಂ ನಾಗರಿಕರನ್ನು ವಿದೇಶಿಯರೊಂದಿಗೆ ತಳುಕು ಹಾಕುವ ಅಪಾಯ ಹೊಂದಿವೆ” ಎಂದು ವರದಿಗಾರರು ಅಭಿಪ್ರಾಯಪಟ್ಟಿದ್ದಾರೆ.

ಎಲ್ಲ ಅರ್ಹ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸುವುದು ಹಾಗೂ ಅನರ್ಹ ಮತದಾರರನ್ನು ಹೊರಗಿಡುವುದು ಎಸ್‌ಐಆರ್ ಉದ್ದೇಶ ಎಂದು ಚುನಾವಣಾ ಆಯೋಗ ಹೇಳಿದೆ. ಆದರೆ, ವಾಸ್ತವ ಪರಿಸ್ಥಿತಿ ಭಿನ್ನವಾಗಿದೆ ಎಂದು ವಿಶ್ವಸಂಸ್ಥೆಯ ವರದಿಗಾರರು ಹೇಳಿದ್ದಾರೆ.

ಎಸ್‌ಐಆರ್ ನಡೆದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 5.2 ಕೋಟಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಪಶ್ಚಿಮ ಬಂಗಾಳವೊಂದರಲ್ಲೇ 91 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಾನ್ಯ ಗುರುತಿನ ದಾಖಲೆಗಳನ್ನು ಹೊಂದಿದ್ದ ಹಲವರ ಹೆಸರುಗಳನ್ನೂ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದಲ್ಲಿ ಅಳಿಸಲಾದ ಮತದಾರರ ಹೆಸರುಗಳಲ್ಲಿ 95%ರಷ್ಟು ಮುಸ್ಲಿಮರದ್ದಾಗಿವೆ ಎಂದು ಆರೋಪಿಸಲಾಗಿದೆ. ಆದರೆ, ಕ್ಷೇತ್ರದ ಒಟ್ಟು ಮತದಾರರಲ್ಲಿ ಮುಸ್ಲಿಮರ ಪ್ರಮಾಣ 25%ರಷ್ಟಿದೆ. ಹೆಸರು ಕಳೆದುಕೊಂಡವರಲ್ಲಿ ಮಾನ್ಯ ದಾಖಲೆ ಹೊಂದಿರುವ ಪುರುಷರು, ಮಹಿಳೆಯರು ಹಾಗೂ ಹಿರಿಯ ನಾಗರಿಕರೂ ಸೇರಿದ್ದಾರೆ ಎಂದು ಪತ್ರ ಹೇಳಿದೆ.

ದಾಖಲೆಗಳಲ್ಲಿನ ಸಣ್ಣ ಕಾಗುಣಿತ ವ್ಯತ್ಯಾಸಗಳನ್ನೂ ಹೆಸರು ತೆಗೆದುಹಾಕಲು ಕಾರಣವಾಗಿ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತದಾರರ ದತ್ತಾಂಶದಲ್ಲಿನ ‘ಅಸಂಗತತೆ’ಗಳನ್ನು ಗುರುತಿಸಲು ಚುನಾವಣಾ ಆಯೋಗ ಬಳಸಿರುವ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆಯ ಪಾರದರ್ಶಕತೆ, ಸಂಭವನೀಯ ದೋಷಗಳು ಹಾಗೂ ಪಕ್ಷಪಾತದ ಕುರಿತೂ ಕಳವಳ ವ್ಯಕ್ತವಾಗಿದೆ.

ಮತದಾರರ ಪಟ್ಟಿಯಿಂದ ತೆಗೆದುಹಾಕಲಾದವರ ನಿಖರ ಸಂಖ್ಯೆ, ಹೆಸರು ಅಳಿಸಲು ನೀಡಿದ ಕಾರಣಗಳು ಹಾಗೂ ಅವರ ಧಾರ್ಮಿಕ ಮತ್ತು ಜನಾಂಗೀಯ ವಿವರಗಳನ್ನು ನೀಡುವಂತೆ ವಿಶ್ವಸಂಸ್ಥೆಯ ವಿಶೇಷ ವರದಿಗಾರರು ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ. ತಪ್ಪಾಗಿ ಹೆಸರು ತೆಗೆದುಹಾಕಲ್ಪಟ್ಟು ಮತದಾನದ ಹಕ್ಕು ಕಳೆದುಕೊಂಡವರಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸಲು ಕೈಗೊಂಡ ಕ್ರಮಗಳ ವಿವರಗಳನ್ನೂ ಕೋರಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...