SIR | 16 ರಾಜ್ಯಗಳಿಗೆ ಕಾಲಿಟ್ಟ ಎಸ್‌ಐಆರ್; ಕರ್ನಾಟಕದಲ್ಲಿ ಜೂನ್‌ 30ರಿಂದ ಆರಂಭ

Date:

ದೇಶದಾದ್ಯಂತ ಮತದಾರರನ್ನು ಬೃಹತ್ ಸಂಖ್ಯೆಯಲ್ಲಿ ಹೊರಹಾಕುತ್ತಿರುವ ಮತ್ತು ಜನಾಕ್ರೋಶಕ್ಕೆ ತುತ್ತಾಗಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪೆಡಂಭೂತ ಕರ್ನಾಟಕಕ್ಕೂ ಕಾಲಿಟ್ಟಿದೆ. 3ನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 16 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಯಲಿದ್ದು, ಪ್ರಕ್ರಿಯೆಯು ಇದೇ ತಿಂಗಳ (ಮೇ) 30ರಿಂದ ಹಂತ-ಹಂತವಾಗಿ ಆರಂಭವಾಗಲಿದೆ. ಕರ್ನಾಟಕದಲ್ಲಿ ಜೂನ್ 30ರಿಂದ ಪ್ರಕ್ರಿಯೆಯು ಅಧಿಕೃತವಾಗಿ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.   

- Advertisement -

ಈಗಾಗಲೇ ದೇಶದ ಒಟ್ಟು 99 ಕೋಟಿ ಮತದಾರರ ಪೈಕಿ ಸುಮಾರು 60 ಕೋಟಿ ಜನರನ್ನು ಮೊದಲ ಎರಡು ಹಂತಗಳ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಳ್ಳಲಾಗಿದೆ. ಉಳಿದ 40 ಕೋಟಿ ಮತದಾರರನ್ನು ಎಸ್‌ಐಆರ್‌ಗೆ ಒಳಪಡಿಸಲು ಮೂರನೇ ಹಂತದಲ್ಲಿ ಪ್ರಕ್ರಿಯೆ ಆರಂಭವಾಗಿದೆ. ಈ ಹಂತದಲ್ಲಿ ಕರ್ನಾಟಕ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಪಂಜಾಬ್‌ನಂತಹ ದೊಡ್ಡ ರಾಜ್ಯಗಳಲ್ಲಿ ಎಸ್‌ಐಆರ್ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

3ನೇ ಹಂತದಲ್ಲಿ ಕರ್ನಾಟಕ, ದೆಹಲಿ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ನಾಗಾಲ್ಯಾಂಡ್, ತ್ರಿಪುರ ಹಾಗೂ ದಾದರ್ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ ಪ್ರಕ್ರಿಯೆ ನಡೆಯಲಿದೆ.

16 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಸುಮಾರು 3.94 ಲಕ್ಷಕ್ಕೂ ಹೆಚ್ಚು ಬೂತ್‌ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಕಾರ್ಯನಿರ್ವಹಿಸಲಿದ್ದಾರೆ. ಈ ಅಧಿಕಾರಿಗಳು ಒಟ್ಟು 36.73 ಕೋಟಿ ಮತದಾರರ ಮನೆ ಬಾಗಿಲಿಗೆ ತೆರಳಿ, ದಾಖಲೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಆಯೋಗ ತಿಳಿಸಿದೆ.

Advertisements
image 130

“ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಂತಹ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ವೈಪರೀತ್ಯ ಹಾಗೂ ಹಿಮಪಾತದ ಸಾಧ್ಯತೆ ಇರುವುದರಿಂದ, ಅಲ್ಲಿನ ಎಸ್‌ಐಆರ್ ವೇಳಾಪಟ್ಟಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಪರಿಸ್ಥಿತಿ ಸುಧಾರಿಸಿದ ನಂತರ ಆ ಭಾಗದ ದಿನಾಂಕಗಳನ್ನು ಪ್ರತ್ಯೇಕವಾಗಿ ಘೋಷಿಸಲಾಗುತ್ತದೆ” ಎಂದು ಆಯೋಗ ಹೇಳಿದೆ.

ಈ ಲೇಖನ ಓದಿದ್ದೀರಾ?: ಮೋದಿ VS ಇಂದಿರಾ ; ಯಾವುದು ಸತ್ಯ, ಯಾವುದು ಸುಳ್ಳು?

ಈಗಾಗಲೇ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಗುಜರಾತ್ ಸೇರಿದಂತೆ 13 ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಟ್ಟು 5.6 ಕೋಟಿ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಇವರಲ್ಲಿ ಹೆಚ್ಚಿನವರು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರೇ ಆಗಿದ್ದಾರೆ. ಗಮನಾರ್ಹವಾಗಿ, ವಿಪಕ್ಷಗಳಿಗೆ ಮತ ಚಲಾಯಿಸುವವರಾಗಿದ್ದಾರೆ ಎಂದು ಹೇಳಲಾಗಿದೆ. ಇದೇ ತಿಂಗಳು ಆರಂಭವಾಗಲಿರುವ 16 ರಾಜ್ಯಗಳಲ್ಲಿ ಮತ್ತೂ 5 ಕೋಟಿಗೂ ಹೆಚ್ಚು ಮತದಾರರನ್ನು ಆಯೋಗವು ಹೊರಗಟ್ಟುವ ಆತಂಕವಿದೆ. ಆದ್ದರಿಂದ, ಎಸ್‌ಐಆರ್ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ-ವಿರೋಧ ವ್ಯಕ್ತವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...

SIR: ‘ನಮ್ಮ ಸಂವಿಧಾನ-ನಮ್ಮ ಹೋರಾಟ-ನಮ್ಮ ಹಕ್ಕು; ನಾವು ಹೋರಾಟಕ್ಕೆ ಸಿದ್ಧ’- ಪ್ರಕಾಶ್ ರಾಜ್

“SIR ಪ್ರಕ್ರಿಯೆ ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ? ಖಂಡಿತ ಇಲ್ಲ. ದಾಖಲೆಗಳ ಹೆಸರಿನಲ್ಲಿ ದೇಶದ...