SIR | ಸ್ಪೆಲ್ಲಿಂಗ್ ತಪ್ಪು, ಹೆಸರು ವ್ಯತ್ಯಾಸ; ಮಹಾರಾಷ್ಟ್ರದ 1.22 ಕೋಟಿ ಮತದಾರರ ಹಕ್ಕಿನ ಭವಿಷ್ಯ ಅತಂತ್ರ

Date:

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕರಡು ವರದಿ ಪ್ರಕಟವಾಗಿದೆ.  ಕರಡು ಪಟ್ಟಿಯಲ್ಲಿ 7.71 ಕೋಟಿ ಮತದಾರರ ಹೆಸರಿದ್ದು, ಈ ಪೈಕಿ ಬರೊಬ್ಬರಿ 1.22 ಕೋಟಿಗೂ ಹೆಚ್ಚು ಮತದಾರರಿಗೆ ನೋಟಿಸ್‌ ನೀಡಲು ಚುನಾವಣಾ ಆಯೋಗ ಮುಂದಾಗಿದೆ. ನೋಟಿಸ್‌ ಪಡೆಯಲಿರುವ ಮತದಾರರಲ್ಲಿ 62,48,281 ಮತದಾರರ ಸಂಬಂಧಿಕರ ವಿವರಗಳಲ್ಲಿ ವ್ಯತ್ಯಾಸಗಳಿದ್ದರೆ, 59,75,726 ಮತದಾರರು ತಮ್ಮ ಸಂಬಂಧಿಕರ ಹಳೆಯ ದಾಖಲೆಗಳೊಂದಿಗೆ ಮ್ಯಾಪಿಂಗ್ ಆಗಿಲ್ಲ ಎಂದು ಆಯೋಗ ಹೇಳಿಕೊಂಡಿದೆ. ಇದೀಗ, 1.22 ಕೋಟಿ ಮತದಾರರ ಮತದಾನದ ಹಕ್ಕಿನ ಭವಿಷ್ಯ ಅತಂತ್ರಕ್ಕೆ ಸಿಲುಕಿದೆ.

- Advertisement -

ಗಮನಾರ್ಹವಾಗಿ, ಎಸ್‌ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ, ಮಹಾರಾಷ್ಟ್ರದಲ್ಲಿ ಒಟ್ಟು 9.78 ಕೋಟಿ ನೋಂದಾಯಿತ ಮತದಾರರಿದ್ದರು. ಆದರೆ, ಕರಡು ಪಟ್ಟಿಯಲ್ಲಿ 7.71 ಕೋಟಿ ಮತದಾರರಷ್ಟೇ ಸೇರ್ಪಡೆಯಾಗಿದ್ದಾರೆ. ಅಂದರೆ, ಸುಮಾರು 2.06 ಕೋಟಿಗೂ ಹೆಚ್ಚು ಹೆಸರುಗಳನ್ನು ಎಎಸ್‌ಡಿಡಿಒ ಅಡಿಯಲ್ಲಿ ಈಗಾಗಲೇ ಹೊರಹಾಕಲಾಗಿದೆ. ಇದೀಗ, ನೋಟಿಸ್‌ ನೀಡುವ ಮೂಲಕ 1.22 ಕೋಟಿ ಮತದಾರರನ್ನು ಕಚೇರಿಗೆ ಅಲೆಯುವಂತೆ ಮಾಡಲಾಗುತ್ತಿದೆ. ಇವರಲ್ಲಿಯೇ ಬಹುಸಂಖ್ಯಾತರು ಮತದಾರನ ಹಕ್ಕು ಕಳೆದುಕೊಳ್ಳುವ ಆತಂಕವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಇಂದಿನ ಮತ್ತು ಹಳೆಯ ಮತದಾರರ ಪಟ್ಟಿಯ ನಡುವಿನ ಮಾಹಿತಿಯಲ್ಲಿ ಹೊಂದಾಣಿಕೆಯಿಲ್ಲ, ಹೆಸರಿನಲ್ಲಿನ ಸ್ಪೆಲ್ಲಿಂಗ್ ವ್ಯತ್ಯಾಸ, ಮನೆತನದ ಹೆಸರು ಬದಲಾವಣೆಗಳ ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ. ಅಲ್ಲದೆ, ಕುಟುಂಬದ ಸದಸ್ಯರ ಹಳೆಯ ದಾಖಲೆಗಳಲ್ಲಿನ ಬದಲಾವಣೆಗಳಿಂದಾಗಿ ಹಲವರನ್ನು ‘Unmapped’ ಪಟ್ಟಿಯಲ್ಲಿ ಸೇರಿಸಲಾಗಿದೆ. ಈಗ ಈ ಎಲ್ಲರಿಗೂ ನೋಟಿಸ್‌ ನೀಡಲಾಗಿದ್ದು, ನೋಟಿಸ್‌ ಪಡೆದವರು ನಾನಾ ದಾಖಲೆಗಳನ್ನು ಹೊಂದಿಸಿಕೊಂಡು, ಚುನಾವಣಾಧಿಕಾರಿಗಳ ಕಚೇರಿಗೆ ಅಲೆಯಬೇಕಾಗಿದೆ.

ಮಹಾರಾಷ್ಟ್ರದ ಮಲಾಡ್, ಧರಾವಿ, ಪನ್ವೇಲ್, ಕಲ್ಯಾಣ್ ರೂರಲ್, ಖಡಕ್ವಾಸ್ಲಾ, ಹಡಪ್ಸರ್, ನಾಗಪುರ ಹಾಗೂ ಸೋಲ್ಲಾಪುರ ಸೇರಿದಂತೆ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೊಂದೇ ಕ್ಷೇತ್ರದಲ್ಲಿ ಲಕ್ಷಕ್ಕೂ ಹೆಚ್ಚು ಮತದಾರರ ದಾಖಲೆಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ.

ದಾಖಲೆಗಳಲ್ಲಿನ ವ್ಯತ್ಯಾಸದ ಕಾರಣಕ್ಕಾಗಿ ನೋಟಿಸ್‌ ನೀಡಿರುವ ಮತದಾರರ ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೂ, ಸಾರ್ವಜನಿಕವಾಗಿ ಪ್ರಕಟಿಸುವುದಿಲ್ಲ ಎಂದು ಆಯೋಗ ನಿರ್ಧರಿಸಿದೆ. ಸಾರ್ವಜನಿಕವಾಗಿ ಪಟ್ಟಿ ಪ್ರಕಟಿಸಿದರೆ ಅಂತಹ ಮತದಾರರ ಖಾಸಗಿತನಕ್ಕೆ ಧಕ್ಕೆ ಬರಬಹುದು ಮತ್ತು ಅವರನ್ನೇ ನಿರ್ದಿಷ್ಟವಾಗಿ ಗುರಿಯಾಗಿಸುವ ಸಾಧ್ಯತೆಯಿರುತ್ತದೆ ಎಂದು ಆಯೋಗ ನೆಪವೊಡ್ಡಿದೆ.

ಯಾವುದೇ ನಿರ್ದಿಷ್ಟ ಸಮುದಾಯ ಅಥವಾ ವರ್ಗದ ಮತದಾರರ ಹೆಸರುಗಳನ್ನು ಗುರಿಯಾಗಿಸಿ ಆಕ್ಷೇಪಣೆ ಸಲ್ಲಿಸುವ ಆತಂಕಗಳಿರುವುದರಿಂದ, ಪ್ರತಿಯೊಬ್ಬ ಮತದಾರನಿಗೂ ತಮ್ಮ ಪರ ದಾಖಲೆಗಳನ್ನು ಸಲ್ಲಿಸಲು ಮತ್ತು ವಿಚಾರಣೆಗೆ ಹಾಜರಾಗಲು ಪೂರ್ಣ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚಿಸಿರುವುದಾಗಿ ತಿಳಿಸಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನ ಥೇಣಿ ಕಾರಾಗೃಹದಿಂದ 17 ಖೈದಿಗಳ ಪರಾರಿ: ನಾಟಕವಾಡಿ ಸಿಬ್ಬಂದಿ ಮೇಲೆ ಹಲ್ಲೆ

ತಮಿಳುನಾಡಿನ ಥೇಣಿ ಉಪ ಕಾರಾಗೃಹದಲ್ಲಿ ಸೋಮವಾರ ತಡರಾತ್ರಿ ಸಿನಿಮೀಯ ರೀತಿಯಲ್ಲಿ 17...

‌ಅ.28ರಂದು ಅಪ್ಪಳಿಸಲಿರುವ ʼಅರ್ನಬ್ʼ ಚಂಡಮಾರುತ | 89 ಸಾವಿರ ಜನರ ಸ್ಥಳಾಂತರ; ಆಂಧ್ರದಲ್ಲಿ ಹೈ ಅಲರ್ಟ್

ಆಂಧ್ರಪ್ರದೇಶದ ಕರಾವಳಿಗೆ ‘ಅರ್ನಬ್’ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ...