ರಾಮಮಂದಿರ ಅಕ್ರಮ: ಅಯೋಧ್ಯೆ ತೊರೆಯದಂತೆ ಟ್ರಸ್ಟ್, ದೇವಾಲಯ ಸಿಬ್ಬಂದಿಗೆ ಎಸ್‌ಐಟಿ ಸೂಚನೆ

Date:

ಅಯೋಧ್ಯೆಯ ರಾಮಮಂದಿರದಲ್ಲಿ ಹಣ ದುರುಪಯೋಗ ಮಾಡಿದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಟ್ರಸ್ಟ್ ಮತ್ತು ದೇವಾಲಯದ ಪದಾಧಿಕಾರಿಗಳಿಗೆ ಅಯೋಧ್ಯೆಯನ್ನು ತೊರೆಯದಂತೆ ಸೂಚನೆ ನೀಡಿದೆ. ಮೂವರು ಸದಸ್ಯರ ಎಸ್‌ಐಟಿ ತಂಡವು ಭಾನುವಾರ ಲಕ್ನೋಗೆ ತೆರಳುವ ಮೊದಲು ಈ ಸೂಚನೆ ನೀಡಿದೆ.

- Advertisement -

ಟ್ರಸ್ಟ್ ಅಧಿಕಾರಿಗಳು ಮತ್ತು ತನಿಖೆಗೆ ಸಂಬಂಧಿಸಿದ ಇತರ ವ್ಯಕ್ತಿಗಳ ವಿಚಾರಣೆಗೆ ಸಂಬಂಧಿಸಿದ ದೈನಂದಿನ ತನಿಖಾ ವರದಿಗಳನ್ನು ಡಿಜಿಟಲ್ ರೂಪದಲ್ಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಸಲ್ಲಿಸುವ ಮೊದಲು ವರದಿಗೆ ಅಂತಿಮ ರೂಪ ನೀಡಲಾಗುವುದು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ

ಇನ್ನು ಎಸ್‌ಐಟಿ ತನ್ನ ಸಂಶೋಧನೆಗಳ ವರದಿಗಳನ್ನು ಪ್ರತಿದಿನ ಮುಖ್ಯಮಂತ್ರಿ ಕಚೇರಿಗೆ ಕಳುಹಿಸುತ್ತಿದೆ. ಮಧ್ಯಂತರ ವರದಿಯನ್ನು ಜೂನ್ 22 (ನಾಳೆ) ನೀಡಲಿದೆ.

ಎಸ್‌ಐಟಿಯು ನಿಧಿ ದುರುಪಯೋಗದ ಆರೋಪ ಬಗ್ಗೆ ಮಾತ್ರವಲ್ಲದೆ ದೇವಾಲಯದ ಟ್ರಸ್ಟ್‌ ಖರೀದಿಸಿರುವ ಭೂಮಿ ಮತ್ತು ದೇವಾಲಯಕ್ಕೆ ಕಟ್ಟಡ ಸಾಮಗ್ರಿಗಳ ಖರೀದಿಯ ಬಗ್ಗೆಯೂ ನಡೆಸುತ್ತಿದೆ ಎಂದು ವರದಿಯಾಗಿದೆ.

ದೇವಾಲಯದ ಟ್ರಸ್ಟ್ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಭೂಮಿಯನ್ನು ಖರೀದಿಸಿದೆ ಎಂದು ಆರೋಪಿಸಲಾಗಿದೆ. ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಈ ವಿಷಯವನ್ನು ಬಹಿರಂಗವಾಗಿ ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...