ರಾಮಮಂದಿರ ದೇಣಿಗೆ ದುರುಪಯೋಗ: ಎಸ್‌ಐಟಿಯಿಂದ ದೇವಾಲಯದಲ್ಲಿ ಹಲವು ಮಂದಿಯ ವಿಚಾರಣೆ

Date:

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ಆರಂಭಿಸಿದ್ದು ದೇವಾಲಯದಲ್ಲಿ ಹಲವು ಮಂದಿಯನ್ನು ಪ್ರಶ್ನಿಸಿದೆ. ಭಕ್ತರು ನೀಡುವ ಕಾಣಿಕೆಗಳನ್ನು ಸ್ವೀಕರಿಸುವ, ಎಣಿಸುವ ಮತ್ತು ಠೇವಣಿ ಇಡುವ ಕಾರ್ಯವಿಧಾನಗಳು ಹಾಗೂ ಬೆಲೆಬಾಳುವ ವಸ್ತುಗಳು ಮತ್ತು ನಿಧಿಗಳ ಲೆಕ್ಕಪತ್ರದ ಬಗ್ಗೆ ಮುಖ್ಯವಾಗಿ ತನಿಖೆ ನಡೆಸಲಾಗುತ್ತಿದೆ. ಜೂನ್ 16ರಂದು ಅಯೋಧ್ಯೆಗೆ ಆಗಮಿಸಿದ ತಂಡವು 24 ಗಂಟೆಗಳ ಕಾಲ ತನಿಖೆ ಮುಂದುವರೆಸಿದೆ ಎಂದು ವರದಿಯಾಗಿದೆ.

- Advertisement -

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಎಸ್‌ಐಟಿ ತಂಡವು ದೇಣಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ದೇವಾಲಯದ ಖಾತೆಗಳನ್ನು ನಿರ್ವಹಿಸುವ ಎಲ್ಲ ಅಧಿಕಾರಿಗಳು, ಉದ್ಯೋಗಿಗಳು ಮತ್ತು ವ್ಯಕ್ತಿಗಳ ವಿವರಗಳನ್ನು ಕೋರಿದೆ. ಭಕ್ತರು ದಾನ ಮಾಡುವ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳ ಲೆಕ್ಕಪತ್ರ ನಿರ್ವಹಣೆ ಮತ್ತು ಭದ್ರತೆಯಲ್ಲಿ ತೊಡಗಿರುವವರ ಬಗ್ಗೆಯೂ ಎಸ್ಐಟಿ ಪರಿಶೀಲನೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ

ದೇವಾಲಯದ ದೇಣಿಗೆ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳಲು ನ್ಯಾಯಾಂಗ ತನಿಖೆಗೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಒತ್ತಾಯಿಸಿದೆ. ರಾಮಮಂದಿರದಲ್ಲಿ ಭಕ್ತರ ದೇಣಿಗೆ ದುರುಪಯೋಗ ಮಾಡಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೇರಿದಂತೆ ಹಲವು ಮಂದಿ ಆರೋಪಿಸಿದ್ದಾರೆ.

ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡಾ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ನಡೆದಿದೆ ಎಂದು ಆರೋಪಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ರಾಮಮಂದಿರ ಟ್ರಸ್ಟ್‌ ಕೆಲವು ಪ್ರಮುಖ ಪದಾಧಿಕಾರಿಗಳನ್ನು ಉಲ್ಲೇಖಿಸಿ ಮಾತನಾಡುತ್ತಾ, “ಕೆಲವರು ರಾಮಮಂದಿರ ಆಂದೋಲನವನ್ನು ತಮ್ಮ ವೈಯಕ್ತಿಕ ಆಸ್ತಿ ಮತ್ತು ರಾಜಕೀಯ ಬೆಳವಣಿಗೆಗೆ ಬಳಸಿಕೊಂಡರು. ಜನಸಾಮಾನ್ಯರು ಭಕ್ತಿಯಿಂದ ನೀಡಿದ ಹಣ ದುರುಪಯೋಗವಾಗಿದೆ” ಎಂದು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...