ಕೇವಲ ಒಂದು ಚಾಕೊಲೇಟ್‌ ಕದ್ದಿದ್ದಕ್ಕೆ ಐದು ಮಕ್ಕಳಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ

Date:

ಕೇವಲ ಒಂದು ಚಾಕೊಲೇಟ್‌ ಕದ್ದಿದ್ದಕ್ಕೆ ಐದು ಮಕ್ಕಳ ಬಟ್ಟೆ ಬಿಚ್ಚಿಸಿ, ಒಂದೇ ಹಗ್ಗದಿಂದ ಎಲ್ಲರನ್ನೂ ಬಿಗಿದು ಮಾರುಕಟ್ಟೆಯಲ್ಲಿ ತುಂಬಿದ ಜನಸಂದಣಿಯ ನಡುವೆ ಬೆತ್ತಲೆ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

- Advertisement -

ಅಂಗಡಿಯೊಂದರಿಂದ ಚಾಕೊಲೇಟ್ ಕದ್ದ ಆರೋಪದಲ್ಲಿ ಎಲ್ಲ ಮಕ್ಕಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಸೀತಾಮರಿಯ ಮಲ್ಲಾಹಿ ಎಂಬ ಗ್ರಾಮದ ಅಂಗಡಿ ಮಾಲೀಕ ಕ್ಯಾಮೆರಾ ಮುಂದೆ ಮಕ್ಕಳು ತಮ್ಮ ಹಾಗೂ ತಮ್ಮ ತಂದೆಯಂದಿರ ಹೆಸರು ಹೇಳುವಂತೆ ಬಲವಂತಪಡಿಸಿದ್ದಾನೆ. ಬಾಲಕರ ಪೈಕಿ ಒಬ್ಬನಿಗೆ ಹಲ್ಲೆ ಮಾಡಿ ಕ್ಯಾಮೆರಾ ನೋಡು ಎಂದು ದೌರ್ಜನ್ಯ ಮೆರೆದಿರವುದು ದೃಢಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಕ್ಕಳತ್ತ ಗುರಿ ಮಾಡಿ ಕೈಯಲ್ಲಿ ಬಡಿಗೆ ಹಿಡಿದಿರುವ ಅಂಗಡಿ ಮಾಲೀಕ, “ಎಲ್ಲ ಮಕ್ಕಳನ್ನು ನನ್ನ ಅಂಗಡಿಯಿಂದ ಕಳವು ಮಾಡಿದಾಗ ಹಿಡಿಯಲಾಗಿದೆ” ಎಂದು ಹೇಳಿದ್ದಾನೆ. ಅವಮಾನದಿಂದ ಮಕ್ಕಳು ಮುಖಮುಚ್ಚಿಕೊಂಡಿದ್ದರೆ, ಅವರ ಸುತ್ತಲೂ ಗ್ರಾಮಸ್ಥರು ಅಣಕವಾಡುತ್ತಿದ್ದರು.

ಇದನ್ನು ಓದಿದ್ದೀರಾ? ಮಾರ್ಚ್ 1, 2027 ರಿಂದ ಕೇಂದ್ರದಿಂದ ಜಾತಿ, ಜನ ಗಣತಿ; ಕೆಲ ರಾಜ್ಯಗಳಲ್ಲಿ ಮುಂದಿನ ವರ್ಷದಿಂದ ಪ್ರಾರಂಭ

“ನಾನು ಒಂದೇ ಒಂದು ಸ್ನಿಕ್ಕರ್ ಚಾಕೊಲೇಟ್ ಎತ್ತಿಕೊಂಡಿದ್ದೆ” ಎಂದು ಒಬ್ಬ ಬಾಲಕ ಹೇಳಿದ್ದಾನೆ. ಜನನಿಬಿಡ ಮಾರುಕಟ್ಟೆಯಲ್ಲಿ ಮಕ್ಕಳನ್ನು ಬೆತ್ತಲು ಮೆರವಣಿಗೆ ಮಾಡಿದರೂ, ಈ ಹಿಂಸೆ ತಡೆಯಲು ಯಾರೂ ಮಧ್ಯಪ್ರವೇಶಿಸುವ ಬದಲು ಘಟನೆಯನ್ನು ಚಿತ್ರೀಕರಿಸಿಕೊಳ್ಳುವುದರಲ್ಲಿ ನಿರತರಾಗಿದ್ದರು. ವಿಡಿಯೊ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂಗಡಿ ಮಾಲೀಕ ಹಾಗೂ ಇತರ ಇಬ್ಬರನ್ನು ಈ ಸಂಬಂಧ ಬಂಧಿಸಲಾಗಿದೆ. ಈ ಘಟನೆಯ ವಿಡಿಯೊ ಚಿತ್ರೀಕರಣ ಮಾಡಿ ಪ್ರಸಾರ ಮಾಡಿದ ಮಾಧ್ಯಮದವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಸೀತಾಮರಿ ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...