ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್‌ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿದೆ.
72 ವರ್ಷದ ಯೆಚೂರಿ ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐಎಂ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
ಇದನ್ನು ಓದಿದ್ದೀರಾ? ಪ್ರಶ್ನೆ ಪತ್ರಿಕೆ ಸೋರಿಕೆ| ನೈತಿಕ ಹೊಣೆ ಹೊತ್ತ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸೀತಾರಾಮ್ ಯೆಚೂರಿ
ವೈದ್ಯರ ತಂಡವು ಯೆಚೂರಿ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸ್ಥಿತಿ ಈ ಸಮಯದಲ್ಲಿ ಗಂಭೀರವಾಗಿದೆ ಎಂದು ಹೇಳಿದೆ.
ನ್ಯುಮೋನಿಯಾ ರೀತಿಯ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಆಗಸ್ಟ್ 19ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಗೆ ದಾಖಲಿಸಲಾಗಿತ್ತು.
