ಆರು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬಲಾಯ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
“ಅಮಾನವೀಯ ಘಟನೆ ಮಾರ್ಚ್ 7 ರಂದು ನಡೆದಿದೆ. ಘಟನೆಯ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಆರೋಪಿಗಳಿಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗಾ ಪ್ರಸಾದ್ ತಿವಾರಿ ಹೇಳಿದ್ದಾರೆ.
ಪೊಲೀಸರು ಇಬ್ಬರು ಆರೋಪಿ ಬಾಲಕರ ವಿರುದ್ಧ ಐಪಿಸಿ ಸೆಕ್ಷನ್ 376 ಡಿ (ಗ್ಯಾಂಗ್ ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
“ಪ್ರಕರಣದ ತನಿಖೆ ನಡೆಯುತ್ತಿದೆ. ಅಪ್ರಾಪ್ತ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ” ಎಂದು ತಿವಾರಿ ತಿಳಿಸಿದ್ದಾರೆ.