ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಈ ದಾಳಿಯಿಂದ 26 ಪ್ರವಾಸಿಗರು ಮೃತಪಟ್ಟಿದ್ದಾರೆ.
ಸದ್ಯ ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರರ ದಾಳಿ: ಕನ್ನಡಿಗರ ಮೃತದೇಹಗಳು ಸಂಜೆ ರಾಜ್ಯಕ್ಕೆ ಆಗಮನ
ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ (ಎಲ್‌ಇಟಿ) ಪ್ರತಿನಿಧಿಯಾದ ರೆಸಿಸ್ಟೆನ್ಸ್ ಫ್ರಂಟ್ ನಿನ್ನೆಯ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಸದ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಭಯೋತ್ಪಾದಕ ದಾಳಿಯ ನಂತರ ದೆಹಲಿ ಮತ್ತು ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
