ಪಹಲ್ಗಾಮ್ ದಾಳಿ | ಮೂವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಈ ದಾಳಿಯಿಂದ 26 ಪ್ರವಾಸಿಗರು ಮೃತಪಟ್ಟಿದ್ದಾರೆ.

- Advertisement -

ಸದ್ಯ ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರರ ದಾಳಿ: ಕನ್ನಡಿಗರ ಮೃತದೇಹಗಳು ಸಂಜೆ ರಾಜ್ಯಕ್ಕೆ ಆಗಮನ

ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ (ಎಲ್‌ಇಟಿ) ಪ್ರತಿನಿಧಿಯಾದ ರೆಸಿಸ್ಟೆನ್ಸ್ ಫ್ರಂಟ್ ನಿನ್ನೆಯ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಸದ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಪೆಹಲ್ಗಾಮ್

ಭಯೋತ್ಪಾದಕ ದಾಳಿಯ ನಂತರ ದೆಹಲಿ ಮತ್ತು ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...