ಜೀತ ಪದ್ದತಿ | ಬಾಲಕನ ಸಾವಿನಿಂದ ಬೆಳಕಿಗೆ ಬಂದ ಜೀತ ಪ್ರಕರಣ

Date:

ಅಕ್ರಮ ಬಂಧನದಲ್ಲಿದ್ದ 9 ವರ್ಷದ ಬುಡಕಟ್ಟು ಬಾಲಕ ಯಾನಾಡಿ ವೆಂಕಟೇಶು ಭೂಮಾಲೀಕರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ. ಅವರ ಸಾವಿನ ಬಳಿಕ, ಕಾನೂನುಬಾಹಿರ ಜೀತ ಪದ್ದತಿಯು ಬೆಳಕಿಗೆ ಬಂದಿದೆ. ಆರೋಪಿಗಳನ್ನು ಪೊಲೀಸರುಬಂಧಿಸಿದ್ದಾರೆ.

- Advertisement -

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು ಮಂಡಲದ ಎನ್.ಆರ್ ಅಗ್ರಹಾರದಲ್ಲಿ ಜೀತ ಪದ್ದತಿ ಇನ್ನೂ ಜೀವಂತವಾಗಿದೆ ಎಂಬುದು ಪ್ರಕರಣದಿಂದ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಬಾಲಕ ಮತ್ತು ಆತನ ಕುಟುಂಬವನ್ನು ಜೀತಕ್ಕೆ ಇರಿಸಿಕೊಂಡು ಶೋಷಿಸುತ್ತಿದ್ದ ಭೂಮಾಲೀಕ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಪ್ರಕರಣದ ಬಗ್ಗೆ ಸತ್ಯವೇಡು ಪೊಲೀಸ್‌ ಠಾಣೆಯಲ್ಲಿ ಪುತ್ತೂರು ಡಿಎಸ್‌ಪಿ ಜಿ. ರವಿಕುಮಾರ್ ಅವರು ವಿವರಿಸಿದ್ದಾರೆ. “ಪ್ರಕರಣದಲ್ಲಿ ಭೂಮಾಲಿಕರಾದ ಎನ್ ಮುತ್ತು (60), ಅವರ ಪತ್ನಿ ಎಂ ಧನಭಾಗ್ಯಂ (52) ಹಾಗೂ ಅವರ ಮಗ ಎಂ ರಾಜಶೇಖರ್ (32) ಎಂಬವರನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಗುಡೂರು ಮಂಡಲದ ಚವಟಪಾಲೆಂ ಮೂಲದ ದಂಪತಿಗಳಾದ ಅನಕಮ್ಮ ಮತ್ತು ಪ್ರಕಾಶ್ ತಮ್ಮ ಪುತ್ರ ಮೃತ ವೆಂಕಟೇಶು ಸೇರಿದಂತೆ ಮೂವರು ಮಕ್ಕಳೊಂದಿಗೆ ನೆಲ್ಲೂರು ಜಿಲ್ಲೆಯ ದತ್ತಲೂರು ಮಂಡಲದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅವರನ್ನು ಆರೋಪಿ ಮುತ್ತು ಮತ್ತು ಆತನ ಪತ್ನಿ ಸಂಪರ್ಕಿಸಿದ್ದು, ತಮ್ಮ ಜಮೀನಿನಲ್ಲಿ ಕೆಲಸಕ್ಕೆ ಬಂದರೆ, ಮಾಸಿಕ 10,000 ರೂ. ಸಂಬಳ ನೀಡುವ ಭರವಸೆ ಕೊಟ್ಟಿದ್ದರು. ಅಲ್ಲದೆ, 15,000 ರೂಪಾಯಿನ್ನು ಮುಂಗಡವಾಗಿ ಪಾವತಿಸಿದ್ದರು. ಅವರ ಭರವಸೆಯಂತೆ ಪ್ರಕಾಶ್ಅವರ ಕುಟುಂಬವು ಮುತ್ತು ಅವರ ಜಮೀನಿಗೆ ಕೆಲಸಕ್ಕೆ ಬಂದಿತ್ತು” ಎಂದು ಅವರು ಹೇಳಿದ್ದಾರೆ.

ಆದರೆ, ಕೆಲಸಕ್ಕೆ ಬಂದ ಬಳಿಕ, ಸಂತ್ರಸ್ತ ಕುಟುಂಬ ಒಂದು ವರ್ಷ ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಯಿತು. ಮುತ್ತು ಅವರ ಜಮೀನಿನಲ್ಲಿ ಕೃಷಿ, ಬಾತುಕೋಳಿಗಳ ನಿರ್ವಹಣೆ ಸೇರಿದಂತೆ ವಿವಿಧ ರೀತಿಯ ಕೆಲಸಗಳನ್ನು ಮಾಡಿತ್ತು. ಸಂಬಳ ಹೆಚ್ಚಳಕ್ಕೆ ಬೇಡಿಕೆ ಇಟ್ಟಾಗ ಮುತ್ತು ನಿರಾಕರಿಸಿದ್ದರು. ಈ ನಡುವೆ ಪ್ರಕಾಶ್ ನಿಧನರಾಗಿದ್ದರು. ಅನಕಮ್ಮ ತನ್ನ ಪತಿಯ ಅಂತಿಮ ವಿಧಿವಿಧಾನಗಳಿಗಾಗಿ ಊರಿಗೆ ತೆರಳಿದ್ದರು.

ಅನಕಮ್ಮ ತೆರಳುವ ವೇಳೆ, ಇಲ್ಲೇ ಕೆಲಸ ಮುಂದುವರಿಸಿದರೆ 25,000 ರೂಪಾಯಿ ಬಾಕಿ ಹಣವನ್ನು ಕೊಡುವುದಾಗಿ ಮುತ್ತು ಭರವಸೆ ಕೊಟ್ಟಿದ್ದರು. ಆದರೆ, ಕೆಲಸದ ಪರಿಸ್ಥಿತಿ ಅಸಹನೀಯವಾಗಿದ್ದ ಕಾರಣ ಅದನ್ನು ಬಿಟ್ಟು ಹೋಗಲು ಅನಕಮ್ಮ ಮುಂದಾಗಿದ್ದರು. ಈ ವೇಳೆ ತನಗೆ 45,000 ರೂಪಾಯಿ ಪಾವತಿಸುವಂತೆ ಮುತ್ತು ಬೇಡಿಕೆ ಇಟ್ಟಿದ್ದ. ತಕ್ಷಣ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಸಾಧ್ಯವಾಗದೆ, ಊರಿಗೆ ಹೋಗಿ ಹಣದೊಂದಿಗೆ ಹಿಂತಿರುಗುವ ಭರವಸೆ ನೀಡಿದ ಅನಕಮ್ಮ ತನ್ನ ಮಗನನ್ನು ಮುತ್ತು ಬಳಿ ಬಿಟ್ಟು ಹೋಗಿದ್ದರು.

ಅನಕಮ್ಮ ಊರಿಗೆ ಹೋಗಿ ಹಣ ಹೊಂದಿಸಿ 9 ತಿಂಗಳು ಕಳೆದು ವಾಪಸ್ ಬರುವ ಹೊತ್ತಿಗೆ, ವೆಂಕಟೇಶುವಿನಿಂದ ಕಠಿಣ ಕೆಲಸಗಳನ್ನು ಮಾಡಿಸಿದ್ದ ಭೂ ಮಾಲೀಕ ಮುತ್ತು ಮತ್ತು ಆತನ ಕುಟುಂಬ, ಕೊನೆಗೆ ಆತ ಅನಾರೋಗ್ಯಕ್ಕೆ ತುತ್ತಾಗಿ ಸಾಯಲು ಕಾರಣರಾಗಿದ್ದರು. ಆದರೆ, ವೆಂಕಟೇಶು ಮೃತಪಟ್ಟ ಬಳಿಕ, ಆತ ತಪ್ಪಿಸಿಕೊಂಡಿರುವುದಾಗಿ ಮುತ್ತು ಕಥೆ ಕಟ್ಟಿದ್ದ. ಆತನನ್ನು ಕೆಲಸಕ್ಕೆಂದು ಹೊರಗಡೆ ಕಳಿಸಿದ್ದೆ. ಅಲ್ಲಿ ಅವನು ಅನಾರೋಗ್ಯಕ್ಕೆ ಒಳಗಾಗಿದ್ದ, ಆಸ್ಪತ್ರೆಗೆ ದಾಖಲಿಸಿದ್ದೆ. ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿಸಿದ್ದ.

ವರದಿಗಳ ಪ್ರಕಾರ, ಅನಕಮ್ಮ ಬಿಟ್ಟು ಹೋದ ಬಳಿ ಮುಂದಿನ ಒಂಬತ್ತು ತಿಂಗಳು ಆರೋಪಿ ಮುತ್ತು ಬಾಲಕ ವೆಂಕಟೇಶುವಿನಿಂದ ಕಠಿಣ ಕೆಲಸಗಳನ್ನು ಮಾಡಿಸಿದ್ದ. ಆತ ಪದೇ ಪದೇ ತಾಯಿಯ ಬಳಿಗೆ ಹೋಗಲು ಅವಕಾಶ ನೀಡುವಂತೆ ಅಳುತ್ತಿದ್ದ. ಆದರೆ, ಮುತ್ತು ಅದಕ್ಕೆ ಅವಕಾಶ ನೀಡಿರಲಿಲ್ಲ. ಅನಕಮ್ಮ ಕೂಡ ತನ್ನ ಮಗನನ್ನು ಬಿಟ್ಟು ಕಳಿಸುವಂತೆ ಬೇಡಿಕೊಂಡಿದ್ದರು. ಆದರೆ, ಮುತ್ತು ಬೇರೆ ಬೇರೆ ಕಾರಣ ಕೊಟ್ಟು ಬಾಯಿ ಮುಚ್ಚಿಸುತ್ತಿದ್ದ.ಕಠಿಣ ಪರಿಸ್ಥಿತಿಯಿಂದ ತನ್ನನ್ನು ರಕ್ಷಿಸುವಂತೆ ವೆಂಕಟೇಶು ಅಮ್ಮನ ಬಳಿ ಬೇಡಿಕೊಂಡಿದ್ದ. ಅಮ್ಮ-ಮಗನ ಕೊನೆಯ ಸಂಭಾಷಣೆ ಫೋನ್ ಮೂಲಕ ಏಪ್ರಿಲ್ 15ರಂದು ನಡೆದಿತ್ತು.

ಈ ವರದಿ ಓದಿದ್ದೀರಾ?: ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳು: ಆಗಿದ್ದೇನು, ಆಗಬೇಕಿರುವುದೇನು?

ಮಗನ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆ ಅನಕಮ್ಮ ಮೇ 19ರಂದು ಸತ್ಯವೇಡು ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಜೀತಪದ್ಧತಿ (ನಿರ್ಮೂಲನೆ) ಕಾಯ್ದೆ, ಬಾಲಕಾರ್ಮಿಕ (ತಡೆ) ಕಾಯ್ದೆ, ಬಾಲ ನ್ಯಾಯ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ (ತಡೆ) ಕಾಯ್ದೆ ಸೇರಿದಂತೆ ಹಲವು ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ತನಿಖೆಯ ಭಾಗವಾಗಿ ಬಾಲಕ ಕೆಲಸ ಮಾಡುತ್ತಿದ್ದ ಮನೆಯ ಯಜಮಾನ ಮುತ್ತು, ಆತನ ಪತ್ನಿ ಧನಭಾಗ್ಯಂ ಮತ್ತು ಅವರ ಮಗ ರಾಜಶೇಖರ್ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

ತನಿಖೆಯ ಆರಂಭದಲ್ಲಿ ಬಾಲಕ ವೆಂಕಟೇಶು ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆ, ಏಪ್ರಿಲ್ 11ರಂದು ತಮಿಳುನಾಡಿನ ಪುದುಪಾಲಂನ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರೂ ಫಲಕಾರಿಯಾಗದೆ ಏಪ್ರಿಲ್ 12ರಂದು ಆತನ ಕೊನೆಯುಸಿರೆಳೆದಿದ್ದ. ಕಾನೂನಿಗೆ ಹೆದರಿ ಮುತ್ತು ಹಾಗೂ ಆತನ ಕುಟುಂಬ ಬಾಲಕನ ಶವವನ್ನು ಪಾಲಾರ್ ನದಿಯಲ್ಲಿ ಹೂತು ಹಾಕಿದ್ದಾರೆ ಎಂಬುವುದು ಬಯಲಾಗಿತ್ತು. ಅದಕ್ಕೆ ಪುಷ್ಠಿ ನೀಡುವ ಸಿಸಿಟಿವಿ ವಿಡಿಯೋಗಳು ಲಭ್ಯವಾಗಿತ್ತು.

ತಮಿಳುನಾಡಿನ ಪುದುಪಾಲಂನಲ್ಲಿ ಮುತ್ತುವಿನ ಅತ್ತೆಯನ್ನು ನೋಡಿಕೊಳ್ಳುವುದು, ಅವರ ಬಾತುಕೋಳಿಗಳನ್ನು ನಿರ್ವಹಣೆ ಮಾಡುವುದು ಸೇರಿದಂತೆ ವಿವಿಧ ಕೆಲಸಗಳಿಗೆ ಬಾಲಕ ವೆಂಕಟೇಶುವನ್ನು ನೇಮಿಸಲಾಗಿತ್ತು. ಆತ ಸಾವನ್ನಪ್ಪಿದ ಬಳಿಕ ಶವವನ್ನು ಕಾಂಚಿಪುರಂ ಬಳಿ ಪಾಲಾರ್ ನದಿಯಲ್ಲಿ ಸಮಾಧಿ ಮಾಡಲಾಗಿತ್ತು.

ಕಾಂಚಿಪುರಂ ಸಬ್-ಕಲೆಕ್ಟರ್ ಮತ್ತು ಮ್ಯಾಜಿಸ್ಟ್ರೇಟ್ ರಫೀಕ್ ಅವರ ಮೇಲ್ವಿಚಾರಣೆಯಲ್ಲಿ, ಪೊಲೀಸರು ಶವವನ್ನು ಹೊರತೆಗೆದು ಚೆಂಗಲ್ಪಟ್ಟು ವೈದ್ಯಕೀಯ ಕಾಲೇಜಿನಲ್ಲಿ ಶವ ಪರೀಕ್ಷೆ ನಡೆಸಿದ್ದಾರೆ. ವಶಕ್ಕೆ ಪಡೆದಿದ್ದ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...