ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ಘಟನೆ ಎಲ್ಲಡೆ ವೈರಲ್‌ ಆಗುತ್ತಿದೆ.

- Advertisement -

ಷೇರು ಮಾರುಕಟ್ಟೆಯ ಗ್ರಾಹಕರೊಬ್ಬರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಷೇರು ಮಾರುಕಟ್ಟೆ ಗ್ರಾಹಕರಿಗೆ(ಬ್ರೋಕರ್‌ಗಳು) ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಗಳಿಗೆ ಹೆಚ್ಚು ತೆರಿಗೆಯನ್ನು ವಿಧಿಸಲಾಗುತ್ತಿರುವ ಬಗ್ಗೆ ಪ್ರಶ್ನೆ ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು ನಾನು ನಿಮ್ಮ ವಿಷಯಕ್ಕೆ ಸಂಬಂಧಪಡದ ವ್ಯಕ್ತಿಯಾಗಿದ್ದು, ನಾನು ನಿಮ್ಮ ಈ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ತಮ್ಮದೆ ಭಾಷೆಯಲ್ಲಿ ಹೇಳಿ ಜಾರಿಕೊಂಡರು.

ಮುಂಬೈನಲ್ಲಿ ಭಾರತೀಯ ಷೇರು ಮಾರುಕಟ್ಟೆ ವಿನಿಮಯ(ಬಿಎಸ್‌ಇ) ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಷೇರು ಮಾರುಕಟ್ಟೆ ಗ್ರಾಹಕರು, ಹೂಡಿಕೆ ಮತ್ತು ತೊಂದರೆಗಳು, ಸರ್ಕಾರವು ಜಿಎಸ್‌ಟಿ, ಐಜಿಎಸ್‌ಟಿ, ಮುದ್ರಾಂಕ ಶುಲ್ಕ,ಭದ್ರತಾ ವಹಿವಾಟು ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳನ್ನು ವಿಧಿಸುತ್ತಿರುವ ಬಗ್ಗೆ ಪ್ರಶ್ನೆಗಳನ್ನು ಕೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಈ ಸಂದರ್ಭದಲ್ಲಿ ಬ್ರೋಕರ್‌ ಒಬ್ಬರು, ”ಇಂದು ಭಾರತ ಸರ್ಕಾರ ಬ್ರೋಕರ್‌ಗಳಿಂಗಿತ ಹೆಚ್ಚು ಲಾಭ ಗಳಿಸುತ್ತಿದೆ. ನಾನು ಎಲ್ಲದರಲ್ಲಿಯೂ ಹೂಡಿಕೆ ಮಾಡಿದ್ದೇನೆ. ನಾನು ಎಲ್ಲ ರೀತಿಯ ಸವಾಲುಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಕೇಂದ್ರ ಸರ್ಕಾರ ಕೂಡ ನನ್ನ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುತ್ತಿದೆ. ನೀವು(ಸರಕಾರ) ನನ್ನ ಸ್ಲೀಪಿಂಗ್‌ ಪಾರ್ಟ್ನ್‌ರ್ ಆಗಿದ್ದೀರಿ. ನಾನು ನನ್ನ ಹಣಕಾಸು, ನನ್ನ ಜವಾಬ್ದಾರಿಗಳು, ನನ್ನ ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದೇನೆ. ಷೇರು ಮಾರುಕಟ್ಟೆ ಗ್ರಾಹಕರಿಗೆ(ಬ್ರೋಕರ್‌ಗಳು) ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಗಳಿಗೆ ಹೆಚ್ಚು ತೆರಿಗೆಯನ್ನು ವಿಧಿಸಲಾಗುತ್ತಿದೆ. ಸರ್ಕಾರ ಸ್ಲೀಪಿಂಗ್‌ ಪಾರ್ಟ್ನ್‌ರ್ ಆಗಿದೆ. ನಾನು ನನ್ನ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಪಾರ್ಟ್ನ್‌ರ್ ಆಗಿದ್ದೇನೆ. ಇದಕ್ಕೆ ನಿಮ್ಮ ಉತ್ತರವೇನು” ಎಂದು ಪ್ರಶ್ನೆ ಕೇಳಿದರು.

ಈ ಪ್ರಶ್ನೆಗೆ ಅಸಂಬದ್ಧವಾಗಿ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್‌ ”ಇಲ್ಲಿ ಕುಳಿತುಕೊಂಡಿರುವ ಸ್ಲೀಪಿಂಗ್‌ ಪಾರ್ಟ್ನ್‌ರ್ ನಿಮ್ಮ ಪ್ರಶ್ನೆಗೆ ಉತ್ತರ ಕೊಡಲು ಸಾಧ್ಯವಿಲ್ಲ” ಎಂದು ವಿಷಯವನ್ನು ಬೇರೆಡೆ ತಿರುಗಿಸಿದರು.

ನಿರ್ಮಲಾ ಸೀತಾರಾಮನ್‌ ನೀಡಿದ ಉತ್ತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಹಣಕಾಸು ಸಂಬಂಧಿತ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸದ ಸಚಿವರು ತಮ್ಮ ಹುದ್ದೆಗೆ ಅನರ್ಹರು ಎಂದು ನೆಟ್ಟಿಗರು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...