ಕರ್ನಾಟಕದ ಮಾಜಿ ಮುಖ್ಯಮಂತ್ರಿ, ದೇಶದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಅವರು ನಿಧನ ಹೊಂದಿದ್ದಾರೆ.
92 ವರ್ಷ ವಯಸ್ಸಿನ ಎಸ್‌ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಒಳ ಮೀಸಲಾತಿ ತೀರ್ಮಾನ: ಹೋರಾಟಕ್ಕೆ ಸಂದ ಜಯ, ಕಾಯಿಸದಿರಲಿ ಸರ್ಕಾರ
1932ರ ಮೇ 1ರಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ ಜನಿಸಿದ ಎಸ್ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮದ್ದೂರಿನಲ್ಲೇ ಪ್ರಾಥಮಿಕ ಶಿಕ್ಷಣ ಪಡೆದ ಕೃಷ್ಣ ಅವರು ಬಳಿಕ ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
— Siddaramaiah (@siddaramaiah) December 10, 2024
ಮುತ್ಸದ್ದಿ…
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ಬಳಿಕ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಲ್ಲಿ ಪದವಿ ಪಡೆದರು.
ಎಸ್‌ಎಂ ಕೃಷ್ಣ ಅವರು ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿದ್ದರು. ಹಾಗೆಯೇ ದೇಶದ ವಿದೇಶಾಂಗ ಸಚಿವರಾಗಿದ್ದರು. ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
