ಮನಾಲಿಯಲ್ಲಿ ಹಿಮಪಾತ: ರಸ್ತೆಯಲ್ಲಿ ಸಿಕ್ಕಿಕೊಂಡಿವೆ 1,000ಕ್ಕೂ ಹೆಚ್ಚು ವಾಹನಗಳು

Date:

Advertisements

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಭಾರೀ ಹಿಮಪಾತ ಉಂಟಾಗಿದ್ದು, 1,000ಕ್ಕೂ ಹೆಚ್ಚು ವಾಹನಗಳು ಹಿಮದಲ್ಲಿ ಸಿಲುಕಿಕೊಂಡಿವೆ. ಪರಿಣಾಮವಾಗಿ, ಹಲವಾರು ಪ್ರವಾಸಿಗರು ಸೋಲಾಂಗ್ ಮತ್ತು ರೋಹ್ತಾಂಗ್‌ ನಡುವಿನ ಅಟಲ್ ಸುರಂಗ ಮಾರ್ಗದಲ್ಲಿ ಗಂಟೆಗಟ್ಟಲೆ ಸಿಲುಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು 1,000 ವಾಹನಗಳು ರಸ್ತೆಯಲ್ಲಿದ್ದು, ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್‌ ಉಂಟಾಗಿದೆ. ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಈವರೆಗೆ ಸುಮಾರು 700 ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

ಹಿಮಪಾತವು ಮುಂದುವರೆದಿದ್ದು, ಪ್ರವಾಸಿಗರು ಮತ್ತು ವಾಹನ ಚಾಲಕರು ತಮ್ಮ ವಾಹನಗಳನ್ನು ಚಲಾಯಿಸಲಾಗುತ್ತಿಲ್ಲ. ಅವರೆಲ್ಲರನ್ನೂ ರಕ್ಷಿಸುವಲ್ಲಿ ಪೊಲೀಸ್ ಸಿಬ್ಬಂದಿ ನಿರತರಾಗಿದ್ದಾರೆ. ಸ್ಥಳೀಯ ಅಧಿಕಾರಿಗಳು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Advertisements

ಹಿಮದಿಂದ ಆವೃತವಾದ ಪರ್ವತಗಳಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷವನ್ನು ಆಚರಿಸಲು ಪ್ರವಾಸಿಗರು ಹೆಚ್ಚಾಗಿ ಮನಾಲಿ, ಶಿಮ್ಲಾಗೆ ತೆರಳಿದ್ದಾರೆ. ಆದರೆ, ಹಿಮಪಾತದಿಂದ ಅವರೆಲ್ಲರೂ ಆತಂಕಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ, ಡಿಸೆಂಬರ್ 8ರಂದು ಕೂಡ ಹಿಮಪಾತವಾಗಿದ್ದು, ಇದೀಗ ಮತ್ತೆ ಹಿಮಪಾತವಾಗುತ್ತಿದೆ. ಪರಿಣಾಮವಾಗಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗಾಗಿ ತೆರಳಿದ್ದವರು, ಹಬ್ಬ ಆಚರಣೆಗೂ ಮುನ್ನವೇ ಮನಾಲಿ ತೊರೆಯಲು ಮುಂದಾಗಿದ್ದಾರೆ.

ಕೋವಿಡ್-19 ಹೊಡೆತದಿಂದ ತತ್ತರಿಸಿದ್ದ ಹಿಮಾಚಲ ಪ್ರದೇಶದ ಪ್ರವಾಸೋದ್ಯಮವು ಚೇತರಿಕೆಯ ಹಾದಿಯಲ್ಲಿದೆ. ಈ ಬಾರಿಯ ಚಳಿಗಾಲದಲ್ಲಿ ಸ್ಥಳೀಯ ವ್ಯಾಪಾರಗಳು, ಪ್ರವಾಸೋದ್ಯಮ ಹೆಚ್ಚು ಆದಾಯದ ನಿರೀಕ್ಷೆಯಲ್ಲಿದ್ದರು. ಆದರೆ, ಹಿಮಪಾತವು ಪ್ರವಾಸಿಗರನ್ನು ಮತ್ತೆ ಮನಾಲಿ, ಶಿಮ್ಲಾಗಳಿಂದ ದೂರವಿಡುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X