ಅದಾನಿ ಸಮೂಹದ ಬಂದರು ಅಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸಿದ ಮಮತಾ ಸರ್ಕಾರ

Date:

ತಾಜ್‌ಪುರ ಆಳ ಸಮುದ್ರ ಬಂದರನ್ನು ಅಭಿವೃದ್ಧಿಪಡಿಸಲು ಕಳೆದ ವರ್ಷ ಅದಾನಿ ಬಂದರುಗಳಿಗೆ ಹಸ್ತಾಂತರಿಸಲಾಗಿದ್ದ ಒಪ್ಪಿಗೆ ಪತ್ರವನ್ನು (ಎಲ್‌ಒಐ) ವಿಸರ್ಜಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಮಗಳು ವರದಿ ಮಾಡಿವೆ.

- Advertisement -

ಎಲ್‌ಒಐ ಪತ್ರವು ಔಪಚಾರಿಕ ಒಪ್ಪಂದವನ್ನು ಅಂತಿಮಗೊಳಿಸುವ ಮೊದಲು ಎರಡು ಅಥವಾ ಹೆಚ್ಚಿನ ವ್ಯಕ್ತಿಗಳ ನಡುವೆ ಏರ್ಪಡುವ ಪ್ರಾಥಮಿಕ ಹಂತದ ಸಮ್ಮತಿಸುವ ದಾಖಲೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಂಗಳವಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯಲ್ಲಿ ಈ ಘೋಷಣೆ ಮಾಡಿದರು. ತಮ್ಮ ಸರ್ಕಾರವು 25,000 ಕೋಟಿ ರೂ. ಗಳ ತಾಜ್‌ಪುರ ಆಳ ಸಮುದ್ರ ಬಂದರು ಯೋಜನೆಗೆ ಹೊಸ ಬಿಡ್‌ಗಳನ್ನು ಕೋರುವ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಮರುಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ.

“ತಾಜ್‌ಪುರದಲ್ಲಿ ಪ್ರಸ್ತಾವಿತ ಆಳ ಸಮುದ್ರ ಬಂದರು ಸಿದ್ಧವಾಗಿದೆ. ನೀವೆಲ್ಲರೂ ಟೆಂಡರ್‌ನಲ್ಲಿ ಭಾಗವಹಿಸಬಹುದು. ಇದು ಸುಮಾರು 25,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸುತ್ತದೆ” ಎಂದು ಬ್ಯಾನರ್ಜಿ ಹೇಳಿದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೋಲ್ಕತ್ತಾದಲ್ಲಿ ಬ್ಯಾನರ್ಜಿ ಅವರು ಅದಾನಿ ಪೋರ್ಟ್ಸ್ ಸಿಇಒ ಕರಣ್ ಅವರಿಗೆ ಎಲ್‌ಒಐಅನ್ನು ಹಸ್ತಾಂತರಿಸಿದ್ದರು. ಕೈಗಾರಿಕೋದ್ಯಮಿ ಗೌತಮ್ ಅದಾನಿ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆ 2022 ರಲ್ಲಿ ಭಾಗವಹಿಸಿ 10,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಘೋಷಿಸಿದ ಎರಡು ತಿಂಗಳ ನಂತರ ಸಮ್ಮತಿ ಪತ್ರವನ್ನು ಹಸ್ತಾಂತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಆದಾಗ್ಯೂ, ಈ ವರ್ಷ, ಪಶ್ಚಿಮ ಬಂಗಾಳ ಸರ್ಕಾರದ ಶೋಪೀಸ್ ಔದ್ಯಮಿಕ ಸಮಾರಂಭದಲ್ಲಿ ಅದಾನಿ ಸಮೂಹದಿಂದ ಯಾವುದೇ ಪ್ರಾತಿನಿಧ್ಯ ಇರಲಿಲ್ಲ.

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಕಾಸಿಗಾಗಿ ಪ್ರಶ್ನೆ ವಿವಾದಕ್ಕೆ ಸಿಲುಕಿಸಿದ ನಂತರ ಅದಾನಿ ಒಪ್ಪಂದ ನಿರಾಕರಿಸುವ ನಿರ್ಧಾರವನ್ನು ಟಿಎಂಸಿ ಸರ್ಕಾರ ಕೈಗೊಂಡಿದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಅದಾನಿ ಸಮೂಹ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಆದೇಶದ ಮೇರೆಗೆ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಮೊಯಿತ್ರಾ ವಿರುದ್ಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿದ್ದರು.

ಮೊಯಿತ್ರಾ ಅವರು ಈ ಆರೋಪವನ್ನು ಕಟುವಾಗಿ ನಿರಾಕರಿಸಿದ್ದು, ಲೋಕಸಭೆಯ ನೀತಿಸಂಹಿತೆ ಸಮಿತಿ ಪ್ರಕರಣದ ವಿಚಾರಣೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...