ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

Date:

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅವರನ್ನು ಅಕ್ರಮವಾಗಿ ಗೃಹಬಂಧನದಲ್ಲಿರಿಸಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್, ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

- Advertisement -

ಸೋಮವಾರ ವಿಚಾರಣೆ ನಡೆಸಿದ ನಿಕಟಪೂರ್ವ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನಿತಿನ್ ವಾಸುದೇವ್ ಸಾಂಬ್ರೆ ಮತ್ತು ನ್ಯಾಯಮೂರ್ತಿ ಸಂಜಯ್ ಶರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠವು, “ನಿಮ್ಮ ಕರ್ತವ್ಯವನ್ನು ನಿರ್ವಹಿಸುವ ಹಕ್ಕು ನಿಮಗಿದೆ, ಆದರೆ ಒಬ್ಬ ವ್ಯಕ್ತಿಯ ಮನೆಗೆ ನೀವು ಹೇಗೆ ಪ್ರವೇಶಿಸುತ್ತೀರಾ? ಅವರನ್ನು ಬಂದಿಸುವುದಕ್ಕೆ ನಿಮಗಿರುವ ಕಾನೂನಾತ್ಮಕ ಆಧಾರವೇನು” ಎಂದು ಪೊಲೀಸರಿಗೆ ಕಠಿಣವಾಗಿ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಪ್ರತಿಭಟನೆಗೆ ಅನುಮತಿ ನಿರಾಕರಿಸುವುದು ಪೊಲೀಸರ ಹಕ್ಕಾಗಿದ್ದರೂ, ಕಾನೂನುಬಾಹಿರವಾಗಿ ಮನೆಗೆ ನುಗ್ಗಿ ಅವರ ಚಲನವಲನಗಳನ್ನು ನಿರ್ಬಂಧಿಸುವುದು ಸೂಕ್ತವಲ್ಲ ಎಂದು ಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಾತುಕತೆಗೆ ಮಂತ್ರಿಗಳ ಮನೆಗೆ ಅಲೆಯುವುದಿಲ್ಲ, ಸರ್ಕಾರವೇ ಜಂತರ್ ಮಂತರ್‌ಗೆ ಬರಲಿ: ದೀಪ್ಕೆ ಗುಡುಗು

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ವಕೀಲರು ವಾದ ಮಂಡಿಸಿ, “ನಾವು ನದೀಮ್ ಖಾನ್ ಅವರನ್ನು ಬಂಧಿಸಿಲ್ಲ ಅಥವಾ ವಶಕ್ಕೆ ಪಡೆದಿಲ್ಲ. ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದ್ದರೂ ಅವರು ಭಾಗವಹಿಸುತ್ತಾರೆ ಎಂಬ ಮಾಹಿತಿ ಬಂದಿದ್ದರಿಂದ, ಕೇವಲ ವಿಚಾರಣೆಗೆ ಮತ್ತು ಅವರ ಚಲನವಲನ ತಡೆಯಲು ಭೇಟಿ ನೀಡಿದ್ದೆವು” ಎಂದು ತಿಳಿಸಿದ್ದಾರೆ.

ಆದರೆ ನದೀಮ್ ಖಾನ್ ಅವರ ಪರ ವಕೀಲರು, ಪೊಲೀಸರು ಕಚೇರಿ, ಮನೆಗೆ ಆಗಮಿಸಿ ಸುಮಾರು 8 ಗಂಟೆಗಳ ಕಾಲ ಗೃಹಬಂಧನದಲ್ಲಿಸಿ ನಿರಂತರ ನಿಗಾದಲ್ಲಿಟ್ಟಿದ್ದರು. ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ದೆಹಲಿ ಹೈಕೋರ್ಟ್, ಈ ಬಗ್ಗೆ ಎರಡು ವಾರಗಳ ಒಳಗಾಗಿ ಸಮಗ್ರ ಸ್ಥಿತಿ ವರದಿ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜತೆಗೆ, ಮುಂದಿನ ದಿನಗಳಲ್ಲಿ ಅರ್ಜಿದಾರರಿಗೆ ಯಾವುದೇ ಕಾರಣಕ್ಕೂ ಫೋನ್ ಕರೆಗಳ ಮೂಲಕ ಕಿರುಕುಳ ನೀಡಬಾರದು ಎಂದು ಪೊಲೀಸರ ಹೇಳಿಕೆಯನ್ನು ದಾಖಲಿಸಿಕೊಂಡು ಕೋರ್ಟ್ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇರೊಬ್ಬರೊಂದಿಗೆ ಮದುವೆ ನಿಶ್ಚಯ: ಪ್ರಿಯತಮೆಯನ್ನು ಸಾವಿರ ಅಡಿ ಆಳದ ಕಮರಿಗೆ ನೂಕಿ ಕೊಂದ ಪಾಪಿ!

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಅತ್ಯಂತ ಭೀಕರ ಘಟನೆಯೊಂದು ವರದಿಯಾಗಿದೆ. ತನ್ನ ಪ್ರಿಯತಮೆಗೆ...

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ ನಾಮ ಹಾಕಿದ ಅದಾನಿ ವೃತ್ತಾಂತ

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ...

ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್!

ಮತದಾರರ ಪಟ್ಟಿ ಅಕ್ರಮ ಹಾಗೂ ‘ವೋಟ್ ಚೋರಿ’ ಆರೋಪಗಳ ಕುರಿತು ಮಾಹಿತಿ...