ಉತ್ತರ ಪ್ರದೇಶ | ಸಿಆರ್‌ಪಿಎಫ್ ಯೋಧನಿಗೆ ಕಾಲಿನಿಂದ ಒದ್ದು ಥಳಿಸಿದ ಕಾವಡ್‌ ಯಾತ್ರಿಗಳು

Date:

ಕಾವಡ್‌ ಯಾತ್ರಿಗಳ ಗುಂಪೊಂದು ಸಿಆರ್‌ಪಿಎಫ್ ಯೋಧನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ನಡೆದಿದೆ.

- Advertisement -

ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು, ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ ಫ್ಲಾಟ್‌ಫಾಮ್‌ಗೆ ಬಂದ ಕೆಲವು ಕಾವಡ್‌ ಯಾತ್ರಿಗಳು ಟಿಕೆಟ್ ಖರೀದಿ ವಿಚಾರವಾಗಿ ಯೋಧನೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಅವರನ್ನು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದ್ದು ಮನಬಂದಂತೆ ಥಳಿಸಿದ್ದಾರೆ. ಘಟನೆ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಕೇಸರಿ ಬಣ್ಣದ ವಸ್ತ್ರ ಧರಿಸಿದ ಸುಮಾರು ಏಳೆಂಟು ಮಂದಿ ಕಾವಡ್‌ ಯಾತ್ರಿಗಳು ಯೋಧನನ್ನು ಸುತ್ತುವರೆದಿದ್ದು, ಅವರನ್ನು ಹಿಡಿದು ಎಳೆಯುತ್ತಿರುವುದು, ಕಾಲಿನಿಂದ ಒದೆಯುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಪ್ರಕರಣ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ಪೊಲೀಸ್ ಪಡೆಯ ಇನ್ಸ್‌ಪೆಕ್ಟರ್ ಚಮನ್ ಸಿಂಗ್ ತೋಮರ್ ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 9.30ರ ಸುಮಾರಿಗೆ, ಸಿಆರ್‌ಪಿಎಫ್ ಯೋಧರೊಬ್ಬರು ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಆಗ ಅಲ್ಲಿಗೆ ಬಂದ ಕಾವಡ್‌ ಯಾತ್ರಿಗಳು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಸದ್ಯ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...