ಗೋವಾ | 25ಕ್ಕೂ ಹೆಚ್ಚು ಅಪ್ರಾಪ್ತೆಯರ ಲೈಂಗಿಕ ಶೋಷಣೆ; ಬಿಜೆಪಿ ಕೌನ್ಸಿಲರ್ ಪುತ್ರನ ಬಂಧನ

Date:

ಸುಮಾರು 25 ರಿಂದ 30 ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇಲೆ ಆಡಳಿತಾರೂಢ ಬಿಜೆಪಿ ಪಾಲಿಕೆ ಸದಸ್ಯನ (ಕೌನ್ಸಿಲರ್) ಪುತ್ರ, 20 ವರ್ಷದ ಸೋಹಂ ಸುಶಾಂತ್ ನಾಯಕ್‌ನನ್ನು ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

- Advertisement -

ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮತ್ತು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ನೆನಪಿಸುವಂತಿರುವ ಈ ಹಗರಣ ತೀವ್ರ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಎಫ್‌ಐಆರ್ ದಾಖಲಿಸುವಂತೆ ಕುಡ್ಚಡೆ ಪೊಲೀಸ್ ಠಾಣೆಯ ಎದುರು ತೀವ್ರ ಪ್ರತಿಭಟನೆಗಳು ನಡೆದ ಬೆನ್ನಲ್ಲೇ, ಸೋಮವಾರ ಮುಂಜಾನೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮಡಗಲ್-ಕಾಕೋರಾ ನಿವಾಸಿಯಾಗಿರುವ ಸುಶಾಂತ್ ನಾಯಕ್, ಕಳೆದ ಮೂರು ವರ್ಷಗಳಿಂದ ಈ ಕೃತ್ಯವೆಸಗುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಪ್ರಾಪ್ತೆಯರೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಆ ದೃಶ್ಯಗಳನ್ನು ವಿಡಿಯೊ ಮಾಡುತ್ತಿದ್ದ ಆರೋಪಿ, ನಂತರ ಅದೇ ವಿಡಿಯೊಗಳನ್ನು ಮುಂದಿಟ್ಟುಕೊಂಡು ಸಂತ್ರಸ್ತೆಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ನಡೆದ ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಆರೋಪಿ ನಾಯಕ್, ತನ್ನ ಪರಿಚಯಸ್ಥರೊಂದಿಗೆ ಈ ಅಶ್ಲೀಲ ವಿಡಿಯೊಗಳನ್ನು ಹಂಚಿಕೊಂಡಿದ್ದ. ಈ ವಿಚಾರ ಊರೆಲ್ಲಾ ಹರಡುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ರೊಚ್ಚಿಗೆದ್ದ ಸ್ಥಳೀಯರು ಭಾನುವಾರ ಬೃಹತ್ ಪ್ರತಿಭಟನೆ ನಡೆಸಿ, 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸದಿದ್ದರೆ ‘ಬಂದ್’ ಮಾಡುವುದಾಗಿ ಎಚ್ಚರಿಸಿದ್ದರು.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಕುಡ್ಚಡೆ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೊ (POCSO) ಕಾಯ್ದೆಯ ಸೆಕ್ಷನ್ 8, 12, ಮತ್ತು 15(2) ಹಾಗೂ ಗೋವಾ ಮಕ್ಕಳ ಕಾಯ್ದೆಯ ಸೆಕ್ಷನ್ 8(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯವು ಆತನನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

“ತನಿಖೆ ಮುಂದುವರಿದಿದ್ದು, ಹೊಸ ಪುರಾವೆಗಳು ಲಭ್ಯವಾದಂತೆ ಇನ್ನಷ್ಟು ಸೆಕ್ಷನ್‌ಗಳನ್ನು ಸೇರಿಸಲಾಗುವುದು. ಅಗತ್ಯಬಿದ್ದರೆ ಹೆಚ್ಚುವರಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗುವುದು” ಎಂದು ದಕ್ಷಿಣ ಗೋವಾ ಎಸ್‌ಪಿ ಸಂತೋಷ್ ದೇಸಾಯಿ ತಿಳಿಸಿದ್ದಾರೆ.

“ಸಾಕ್ಷ್ಯ ಸಂಗ್ರಹಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಪ್ರಕರಣವನ್ನು ಬಲಪಡಿಸಲು ಶ್ರಮಿಸಲಾಗುತ್ತಿದೆ. ಜನನ ಪ್ರಮಾಣಪತ್ರದಂತಹ ಅಧಿಕೃತ ದಾಖಲೆಗಳ ಮೂಲಕ ಸಂತ್ರಸ್ತರ ವಯಸ್ಸನ್ನು ದೃಢೀಕರಿಸಲಾಗುವುದು. ಸಂತ್ರಸ್ತರ ಖಾಸಗಿತನವನ್ನು ಕಟ್ಟುನಿಟ್ಟಾಗಿ ಕಾಪಾಡಲಾಗುವುದು ಮತ್ತು ಇತರ ಸಂಭಾವ್ಯ ಸಂತ್ರಸ್ತರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ. ಬೆದರಿಕೆಗೆ ಬಳಸಲಾಗಿದ್ದ ವಿಡಿಯೊಗಳು ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಿಧಿವಿಜ್ಞಾನ ತಜ್ಞರು ಪರಿಶೀಲಿಸುತ್ತಿದ್ದಾರೆ.

ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ
ಪ್ರತಿಪಕ್ಷ ಕಾಂಗ್ರೆಸ್ ಈ ಬಗ್ಗೆ ತ್ವರಿತ ಮತ್ತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದೆ. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಪಾಟ್ಕರ್ ಅವರು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಆರೋಪಿಯು ಕಸ್ಟಡಿಯಲ್ಲೇ ಇರುವಂತೆ ನೋಡಿಕೊಳ್ಳಲು ಮತ್ತು ಬಲವಾದ ಸಾಕ್ಷ್ಯಾಧಾರಗಳನ್ನು ಕಲೆಹಾಕಲು ಸಂಪೂರ್ಣ ಹಾಗೂ ದೋಷರಹಿತ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...