ಸಿಜೆಪಿ ಧರಣಿಯಲ್ಲಿ ಭಾಗಿ: ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

Date:

ನೀಟ್ ಸೇರಿದಂತೆ ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯ ಜಂತರ್‌ಮಂತರ್‌ನಲ್ಲಿ ನಡೆಸುತ್ತಿರುವ ಧರಣಿಯಲ್ಲಿ ಶಿಕ್ಷಣ ಸುಧಾರಕ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಭಾಗಿಯಾಗಿದ್ದಾರೆ. ಇಂದಿನಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

- Advertisement -

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್‌ಮಂತರ್‌ನಲ್ಲಿ ಸಿಜೆಪಿ ಜೂನ್ 20ರಿಂದ ಧರಣಿ ನಡೆಸುತ್ತಿದೆ. ಉಪವಾಸ ಸತ್ಯಾಗ್ರಹ ಆರಂಭಿಸುವ ಮುನ್ನ ಸೋನಮ್ ವಾಂಗ್‌ಚುಕ್ ಮತ್ತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮಾ ಗಾಂಧೀಜಿಯವರಿಗೆ ಗೌರವ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅದಾದ ಬಳಿಕ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಮರುಪರೀಕ್ಷೆಯ ಒತ್ತಡದಿಂದಾಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಜಂತರ್‌ಮಂತರ್‌ನಲ್ಲಿ ಎರಡು ನಿಮಿಷಗಳ ಮೌನಾಚರಣೆ ಸಲ್ಲಿಸುವ ಮೂಲಕ ಸೋನಮ್ ಉಪವಾಸ ಆರಂಭಿಸಿದ್ದಾರೆ.

ಇದನ್ನೂ ಓದಿ: 4ನೇ ತರಗತಿ ಪಾಸ್ ಆದವರನ್ನು ಪ್ರಧಾನಿ ಮಾಡಿ ದೊಡ್ಡ ತಪ್ಪು ಮಾಡಿದ್ವಿ: ಸಿಜೆಪಿ ಪ್ರತಿಭಟನೆಯಲ್ಲಿ ಪೋಷಕರು

ಇನ್ನು ಸೋನಮ್ ವಾಂಗ್‌ಚುಕ್ ಉಪವಾಸ ಆರಂಭಿಸುತ್ತಿದ್ದಂತೆ ನೂರಾರು ಪ್ರತಿಭಟನಾಕಾರರು, ಹೆಚ್ಚಾಗಿ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಹಲವಾರು ರೈತ ನಾಯಕರು ಸಹ ಪ್ರತಿಭಟನೆ ಬೆಂಬಲ ನೀಡಿ ಭಾಗವಹಿಸುತ್ತಿದ್ದಾರೆ.

ಇನ್ನು ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ನ ಹಲವಾರು ರೈತ ನಾಯಕರನ್ನು ಜಂತರ್ ಮಂತರ್ ತಲುಪದಂತೆ ತಡೆಯಲು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಭಾನುವಾರ ಬೆಳಿಗ್ಗೆ ದೀಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...