ನೀಟ್ ಸೋರಿಕೆ: ಜೂ.6ರಂದು ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಭಾಗಿ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಜೂನ್ 6ರಂದು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಲಡಾಖ್ ಹೋರಾಟಗಾರ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಕೂಡಾ ಬೆಂಬಲ ನೀಡಿದ್ದಾರೆ. ಜೂನ್ 5ರ ಒಳಗಾಗಿ ಯಾವುದೇ ಕ್ರಮ ಕೈಗೊಳ್ಳದಿದ್ದರೆ ತಾವೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.

- Advertisement -

ಈ ಬಗ್ಗೆ ತಮ್ಮ ಎಕ್ಸ್‌, ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರತಿಭಟನೆಗೆ ಷರತ್ತುಬದ್ಧ ಬೆಂಬಲ ನೀಡಲು ನಿರ್ಧರಿಸುವ ಮೊದಲು ಗುಂಪಿನ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ” ಎಂದೂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ‘ಗೌರವಾನ್ವಿತ ಜಿರಳೆ’ – ಸೋನಮ್‌ಗೆ ಮತ್ತೆ ಬಂಧನದ ಎಚ್ಚರಿಕೆ ನೀಡಿದ್ರಾ ಲಡಾಖ್ ಉಪರಾಜ್ಯಪಾಲರು?

ಇತ್ತೀಚಿನ ವಾರಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿರುವ ವಿಡಂಬನಾತ್ಮಕ ರಾಜಕೀಯ ಸಂಘಟನೆ ಕಾಕ್ರೋಚ್ ಜನತಾ ಪಾರ್ಟಿಯು ಜೂನ್ 6 ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ನಡೆಸುವುದಾಗಿ ಘೋಷಿಸಿದೆ. ಶಿಕ್ಷಣ ವ್ಯವಸ್ಥೆಯ ಕಾರ್ಯವೈಖರಿ ಮತ್ತು ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿರುವ ನಡುವೆ ಶಿಕ್ಷಣ ಸಚಿವರ ರಾಜೀನಾಮೆಗೆ ಸಿಜೆಪಿ ಒತ್ತಾಯಿಸಿದೆ.

ಇನ್ನು ಸೋನಮ್ ಬೆಂಬಲ ಘೋಷಿಸುವ ಮೊದಲೇ ಪ್ರಮುಖ ವ್ಯಕ್ತಿಯೊಬ್ಬರು ಈ ಚಳವಳಿಗೆ ಬೆಂಬಲ ನೀಡಿದ್ದಾರೆ ಎಂಬ ಸುಳಿವನ್ನು ಅಭಿಜೀತ್ ದಿಪ್ಕೆ ತಮ್ಮ ಪೋಸ್ಟ್ ಒಂದರ ಮೂಲಕ ನೀಡಿದ್ದರು.

“ನಾವಲ್ಲದಿದ್ದರೆ ಮತ್ಯಾರು? ಈಗಲ್ಲದಿದ್ದರೆ ಮತ್ತೆ ಯಾವಾಗ? ಜೂನ್ 5ರೊಳಗೆ ಏನೂ ಬದಲಾಗದಿದ್ದರೆ, ಜೂನ್ 6ರಂದು ದೆಹಲಿಯಲ್ಲಿ ಸಿಜೆಪಿ ಸದಸ್ಯರೊಂದಿಗೆ ನಾನೂ ಸೇರುತ್ತೇನೆ. ಈ ರೀತಿ ನಡೆದಾಗ ಯಾವುದೇ ಸ್ವಾಭಿಮಾನಿ ಸಚಿವರು ರಾಜೀನಾಮೆ ನೀಡಬೇಕು. ಲಕ್ಷಾಂತರ ಯುವ ಜೀವಗಳ ಮೇಲೆ ಮತ್ತು ವಾಸ್ತವವಾಗಿ ಭಾರತದ ಭವಿಷ್ಯದ ಮೇಲೆ ಈ ಸಮಸ್ಯೆಗಳ ಪರಿಣಾಮ ಏನು ಎಂಬುದನ್ನು ನಾವು ವಿವರಿಸಬೇಕಾಗಿಲ್ಲ” ಎಂದು ಸೋನಮ್ ಪೋಸ್ಟ್ ಮಾಡಿದ್ದಾರೆ.

ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ ಮರಳುವುದಾಗಿ ಪ್ರಕಟಿಸಿದ್ದಾರೆ. ದೆಹಲಿಯಲ್ಲಿ ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಲು ಅವರು ಕರೆ ನೀಡಿದ್ದಾರೆ. ದೀಪ್ಕೆ ಭಾರತಕ್ಕೆ ಬರುತ್ತಿದ್ದಂತೆಯೇ ಅವರನ್ನು ಮೋದಿ ಸರ್ಕಾರ ಬಂಧಿಸುವ ಸಾಧ್ಯತೆಗಳ ಕುರಿತೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...