ಲಡಾಖ್‌ನ ಪರಿಸರ ಕಾರ್ಯಕರ್ತ ಹಾಗೂ ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಬಂಧನವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸೆಪ್ಟೆಂಬರ್ 26ರಂದು ಲಡಾಖ್‌ಗೆ ರಾಜ್ಯ ಹಕ್ಕು ಹಾಗೂ ಸಂವಿಧಾನಿಕ ಭದ್ರತೆಗಾಗಿ ನಡೆದ ಪ್ರತಿಭಟನೆಗಳ ಹಿನ್ನೆಲೆ, ರಾಷ್ಟ್ರೀಯ ಭದ್ರತಾ ಕಾಯ್ದೆ (NSA)ಅಡಿಯಲ್ಲಿ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿತ್ತು. ಪ್ರಸ್ತುತ ಅವರನ್ನು ರಾಜಸ್ಥಾನದ ಜೋಧ್‌ಪುರ ಕಾರಾಗೃಹದಲ್ಲಿ ವಶದಲ್ಲಿರಿಸಲಾಗಿದೆ.
ಗೀತಾಂಜಲಿ ಆಂಗ್ಮೋ ಅವರು ಸಂವಿಧಾನದ 32ನೇ ವಿಧಿಯಡಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ, ತಮ್ಮ ಪತಿಯ ಬಂಧನ ಅಸಂವಿಧಾನಿಕ ಎಂದು ಆಕ್ಷೇಪಿಸಿದ್ದಾರೆ. ತುರ್ತು ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಕೋರಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ
ಬಂಧನ ಪ್ರಶ್ನಿಸುವ ಹಿನ್ನಲೆಯಲ್ಲಿ ಸಲ್ಲಿಸಲಾದ ಕಾರಣಗಳ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ. ದಸರಾ ರಜೆಯ ನಂತರ ಅಕ್ಟೋಬರ್ 6ರಂದು ಸುಪ್ರೀಂ ಕೋರ್ಟ್ ಕಾರ್ಯನಿರ್ವಹಣೆ ಮರುಪ್ರಾರಂಭವಾದಾಗ ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವ ಸಾಧ್ಯತೆ ಇದೆ.
ನವೋದ್ಯಮಿ ಹಾಗೂ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತರಾದ ಸೋನಮ್ ವಾಂಗ್‌ಚುಕ್, ಲಡಾಖ್‌ನ ಪರಿಸರ ಸಂರಕ್ಷಣೆ, ಹಿಮಾಲಯದ ಪರಿಸ್ಥಿತಿ ಮತ್ತು ಸ್ಥಳೀಯ ಜನರ ಹಕ್ಕುಗಳ ವಿಷಯಗಳಲ್ಲಿ ದೀರ್ಘಕಾಲದಿಂದ ಸಕ್ರಿಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.