ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಅವರು ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನಿಂದ ಸೋನಿಯ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಅಧೀರ್ ರಂಜನ್ ಚೌಧರಿ ಅವರನ್ನು ಆಹ್ವಾನಿಸಿದ್ದಾರೆ. ಆಹ್ವಾನವು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಆಹ್ವಾನವು ಪ್ರಮುಖ ವಿಷಯವಾಗಿ ಮಾರ್ಪಟ್ಟಿತ್ತು.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವು ಕಾಂಗ್ರೆಸ್ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಉಂಟು ಮಾಡಿತ್ತು. ಮೈತ್ರಿಕೂಟದ ಕೆಲವು ಸದಸ್ಯರು ಕೈ ಪಕ್ಷಕ್ಕೆ ಭಾಗಿಯಾಗಿ ಎಂದು ಸಲಹೆ ನೀಡಿದರೆ, ಇನ್ನು ಹಲವರು ಭಾಗವಹಿಸುವುದು ಬೇಡ ಎಂದು ತಿಳಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?
ಟಿಎಂಸಿ, ಸಿಪಿಎಂ ಹಾಗೂ ಮುಸ್ಲಿಂ ಪಕ್ಷಗಳು ತಾವು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದರೆ, ಒಕ್ಕೂಟದ ಮತ್ತೊಂದು ಪ್ರಮುಖ ಪಕ್ಷವಾದ ಜೆಎಂಎಂ ತಾವು ಕಾರ್ಯಕ್ರಮಕ್ಕೆ ಹೋಗುವುದಾಗಿ ತಿಳಿಸಿದೆ.
ಒಂದು ವೇಳೆ ಕಾಂಗ್ರೆಸ್ ರಾಮಮಂದಿರ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಬಲಪಂಥೀಯ ಆಹ್ವಾನ ಸ್ವೀಕರಿಸಿದಂತಾಗುತ್ತದೆ ಎಂದು ಒಕ್ಕೂಟದ ಕೆಲವು ನಾಯಕರು ಹೇಳಿದ್ದಾರೆ. ಮತ್ತು ಕೆಲವರು ಉದ್ಘಾಟನೆಗೆ ಹೋದರೂ ಹೋಗದಿದ್ದರೂ ಹಿಂದೂ ವಿರೋಧಿ ಆಗುವುದಿಲ್ಲ ಎಂದು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಉತ್ತರ ಪ್ರದೇಶವನ್ನು ಪ್ರತಿನಿಧಿಸುವ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದಿದ್ದರು.