‘ಸಂಪೂರ್ಣ ವಂದೇ ಮಾತರಂ ಹಾಡುವುದಕ್ಕೆ ಸೋನಿಯಾ ಆಕ್ಷೇಪ’; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಸ್ಪಷ್ಟನೆ

Date:

ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವಂದೇ ಮಾತರಂ’ ಗಾಯನದ ವೇಳೆ ಸೋನಿಯಾ ಗಾಂಧಿ ಆಕ್ಷೇಪಿಸುತ್ತಿರುವ ರೀತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, “ವಂದೇ ಮಾತರಂ ಪೂರ್ಣವಾಗಿ ಹಾಡುವುದಕ್ಕೆ ಸೋನಿಯಾ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ” ಎಂದು ಆರೋಪಿಸಿದೆ. ಆದರೆ, ಈ ಆರೋಪವನ್ನು ಕಾಂಗ್ರೆಸ್ ತಿರಸ್ಕರಿಸಿದೆ.

- Advertisement -

ಸೋನಿಯಾ ಗಾಂಧಿ ಅವರು ಆಕ್ಷೇಪಿಸುತ್ತಿರುವಂತೆ ಕಾಣುವ ವಿಡಿಯೋವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿದಂತೆ ಹಲವು ಬಿಜೆಪಿಗರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. “ಸೋನಿಯಾ ಗಾಂಧಿ ಅವರು ಸಂಪೂರ್ಣ ವಂದೇ ಮಾತರಂ ಗಾಯನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದನ್ನು ತಡೆಯಲು ಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಿಜೆಪಿ ವಕ್ತಾರ ಗೋಪಾಲ ಕೃಷ್ಣ ಅಗರ್ವಾಲ್, “ವಂದೇ ಮಾತರಂ ದೇಶದ ಸ್ವಾತಂತ್ರ್ಯ ಸಂಗ್ರಾಮದ ಚಾರಿತ್ರಿಕ ಸಂಕೇತ. ಸೋನಿಯಾ ಗಾಂಧಿಯವರ ಈ ನಡವಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ಬಯಲುಗೊಳಿಸಿದೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರು, “ಹೊಸ ಕಾನೂನು ಚೌಕಟ್ಟಿನಡಿ ಇಡೀ ಗೀತೆಯನ್ನು ಗೌರವಿಸುವುದು ಕಡ್ಡಾಯವಾಗಿರುವುದರಿಂದ ಸಂಪೂರ್ಣ ಗೀತೆಯನ್ನು ಹಾಡಲಾಯಿತು. ಆದರೆ ಅದನ್ನು ತಡೆಯಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯತ್ನಿಸಿದ್ದರು” ಎಂದು ಹೇಳಿದ್ದಾರೆ.

ಬಿಜೆಪಿಯ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಾಡಿರುವ ಕಾಂಗ್ರೆಸ್, “ವಂದೇ ಮಾತರಂ ಗಾಯನವನ್ನು ತಡೆಯುವ ಯಾವುದೇ ಪ್ರಯತ್ನ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಪಷ್ಟನೆ ನೀಡಿದ್ದು, “ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೀರ್ಘಕಾಲದಿಂದ ನಿಂತುಕೊಂಡಿದ್ದರಿಂದ, ಸೋನಿಯಾ ಗಾಂಧಿಯವರು ಖರ್ಗೆ ಅವರನ್ನು ಕೂರಿಸಲು ಕುರ್ಚಿಯನ್ನು ತರಿಸಿಕೊಡುವಂತೆ ಕೇಳುತ್ತಿದ್ದರು ಅಷ್ಟೇ,” ಎಂದು ಹೇಳಿದ್ದಾರೆ.

1937ರ ಕಲ್ಕತ್ತಾ ಸಮಾವೇಶದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಸಲಹೆಯಂತೆ ವಂದೇ ಮಾತರಂನ ಆರಂಭಿಕ ಸಾಲುಗಳನ್ನು ಹಾಡುವ ಪದ್ಧತಿ ಬೆಳೆದುಬಂದಿದ್ದನ್ನು ಉಲ್ಲೇಖಿಸಿದ ರಮೇಶ್, “ಶನಿವಾರ ಇಂದಿರಾ ಭವನದಲ್ಲಿ ಸಂಪೂರ್ಣ ವಂದೇ ಮಾತರಂ ಗೀತೆಯನ್ನೇ ಹಾಡಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...