ʼಸಾರಿ ಪಪ್ಪಾ, ಕೊರಿಯಾ ಬಿಡಲು ಆಗಲ್ಲʼ: ಆನ್‌ಲೈನ್‌ ಗೇಮ್‌ ಗೀಳಿಗೆ ಮೂವರು ಸಹೋದರಿಯರು ಆತ್ಮಹತ್ಯೆ

Date:

ಪೋಷಕರು ಆನ್‌ಲೈನ್‌ ಗೇಮ್‌ ಆಡ್ಬೇಡಿ ಎಂದು ಬೈದದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

- Advertisement -

ಮೃತ ಬಾಲಕಿಯರನ್ನು ಸ್ಥಳೀಯರಾದ ಚೇತನ್‌ ಕುಮಾರ್‌ ಅವರ ಮಕ್ಕಳು ವಿಶಿಕಾ (16), ಪ್ರಾಚಿ (14) ಹಾಗೂ ಪಖಿ (12) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಕೋವಿಡ್‌ ಸಮಯದಲ್ಲಿ ಮೂವರಿಗೂ ಮೊಬೈಲ್‌ ಕೊಡಿಸಲಾಗಿತ್ತು. ಆಗಿನಿಂದ ಮೂವರೂ ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದಿದ್ದರು. ಅದರಲ್ಲೂ ಆನ್‌ಲೈನ್‌ ಟಾಸ್ಕ್‌ ಆಧಾರಿತ ʼಕೊರಿಯನ್‌ ಲವ್‌ ಗೇಮ್‌ʼಅನ್ನು ಹೆಚ್ಚು ಆಡುತ್ತಿದ್ದರಂತೆ. ಆನ್‌ಲೈನ್‌ ಗೇಮ್‌ ಆಡಬೇಡಿ ಎಂದು ಬೈದು ಬುದ್ಧಿ ಹೇಳಿದ್ದಕ್ಕೆ ಸಿಟ್ಟಾದ ಮೂವರೂ ಸಹೋದರಿಯರು ಸಾಹಿಬಾಬಾದ್ ಪ್ರದೇಶದ ಟೀಲಾ ಮೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತ್ ಸಿಟಿಯ ಟವರ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಳಗಿನ ಜಾವ 2.15ರ ಸುಮಾರಿಗೆ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

WhatsApp Image 2026 02 04 at 12.36.11 PM

ಶಾಲೆಗೆ ಸರಿಯಾಗಿ ಹೋಗುತ್ತಿರಲಿಲ್ಲ, ಅಧ್ಯಯನದಲ್ಲೂ ಹಿಂದೆ ಬಿದ್ದಿದ್ದರು ಎನ್ನಲಾಗಿದೆ. ಇನ್ನು ಮೃತ ಬಾಲಕಿಯರು ಬರೆದಿದ್ದ ಡೆತ್‌ನೋಟ್‌ ಪತ್ತೆಯಾಗಿದ್ದು, “ಸಾರಿ ಪಪ್ಪಾ, ನಾವು ಕೊರಿಯಾ ಬಿಡಲು ಸಾಧ್ಯವಿಲ್ಲ. ಕೊರಿಯಾ ನಮ್ಮ ಜೀವನ, ನೀವು ಅದರಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ, ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ” ಎಂದು ಬರೆದಿರುವುದಾಗಿ ತಂದೆ ಚೇತನ್‌ ಹೇಳಿದ್ದಾರೆ. ಜತೆಗೆ ಇದೊಂದು ದುರಂತ. ಎಲ್ಲಾ ಪೋಷಕರು ತಮ್ಮ ಮಕ್ಕಳ ಬಗ್ಗೆ ಜಾಗರೂಕರಾಗಿರಿ, ಆನ್‌ಲೈನ್‌ ಗೀಳಿಗೆ ಅಂಟಿಕೊಳ್ಳದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...