ಉತ್ತರ ಪ್ರದೇಶ | ಸಹಾರನ್‌ಪುರದಲ್ಲಿ ಮಸೀದಿ ಧ್ವಂಸ; ಎಸ್‌ಪಿ ಸಂಸದೆ ಇಕ್ರಾ ಹಸನ್ ಗೃಹಬಂಧನ

Date:

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ (DM) ಕಚೇರಿ ಸಂಕೀರ್ಣದಲ್ಲಿದ್ದ ಮಸೀದಿಯನ್ನು ಶನಿವಾರ ಮುಂಜಾನೆ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಸೇರಿ ಬುಲ್ಡೋಜರ್ ಮೂಲಕ ಧ್ವಂಸ ಮಾಡಿದ್ದಾರೆ. ಇದಾದ ಬೆನ್ನಲ್ಲೇ ಸಮಾಜವಾದಿ ಪಕ್ಷ (ಎಸ್‌ಪಿ) ಸಂಸದೆ ಇಕ್ರಾ ಹಸನ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

- Advertisement -

ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಲೆಕ್ಟರೇಟ್ ಸಂಕೀರ್ಣದ ಸುತ್ತಲೂ ಅಪಾರ ಪ್ರಮಾಣದ ಪೊಲೀಸ್ ಹಾಗೂ ಪಿಎಸಿ (PAC) ಪಡೆಗಳನ್ನು ನಿಯೋಜಿಸಲಾಗಿದೆ. ಸಂಕೀರ್ಣದ ಎಲ್ಲಾ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನೂ ಓದಿ: 17 ವರ್ಷಗಳ ತನಿಖೆ, ಅಚಲ ನಿಲುವು: ಬಾಬರಿ ಮಸೀದಿ ಧ್ವಂಸ ಸುಸಂಘಟಿತ ಸಂಚು ಎಂದಿದ್ದ ಜಸ್ಟಿಸ್ ಲಿಬರ್ಹಾನ್

ಘಟನಾ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದ ಕೈರಾನಾ ಕ್ಷೇತ್ರದ ಎಸ್‌ಪಿ ಸಂಸದೆ ಇಕ್ರಾ ಹಸನ್ ಅವರನ್ನು ಶ್ಯಾಮ್ಲಿ ಜಿಲ್ಲೆಯ ಅವರ ನಿವಾಸದಲ್ಲಿಯೇ ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಈ ನಡುವೆ “ಜನರ ಧ್ವನಿಯಾಗಲು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ನನ್ನನ್ನು ಗೃಹಬಂಧನದಲ್ಲಿರಿಸಿ ಜನಪ್ರತಿನಿಧಿಯ ಹಕ್ಕನ್ನು ಕಸಿಯಲಾಗಿದೆ” ಎಂದು ಇಕ್ರಾ ಹಸನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಸಹಾರನ್‌ಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂರ್ ಮಾತನಾಡಿ, “ಆಡಳಿತ ಮಂಡಳಿಯು ಕಾನೂನು ಹಾಗೂ ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ ಈ ಕ್ರಮ ಕೈಗೊಂಡಿದೆ” ಎಂದು ಆರೋಪಿಸಿದ್ದಾರೆ.

ವಕ್ಫ್ ಮಂಡಳಿಯ ವಾದವನ್ನು ಆಲಿಸದೆ ಏಕಪಕ್ಷೀಯವಾಗಿ ತೆರವುಗೊಳಿಸಲಾಗಿದೆ ಎಂದಿರುವ ಅವರು, ಈ ವಿಷಯವಾಗಿ ಹೈಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ. ಜತೆಗೆ, ಸಾರ್ವಜನಿಕರು ಶಾಂತಿ ಮತ್ತು ಸಂಯಮ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...